ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ ತಂಡವು 2-0 ಅಂತರದಲ್ಲಿ ಗೆದ್ದುಕೊಂಡಿದೆ. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧ ಇದೇ ಮೊದಲ ಬಾರಿಗೆ ಏಕದಿನ ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ. ಎರಡನೇ ಪಂದ್ಯದಲ್ಲಿ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ 5 ವಿಕೆಟ್‌ಗಳ ಜಯ ಸಾಧಿಸಿ ಸರಣಿ ಕೈವಶ ಮಾಡಿಕೊಂಡಿತು.

ಢಾಕಾ: ಆರು ಬಾರಿಯ ಏಕದಿನ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ತಂಡಕ್ಕೆ ಬಾಂಗ್ಲಾದೇಶ ಎದುರು ಭಾರೀ ಮುಖಭಂಗ ಎದುರಾಗಿದೆ. ಬಾಂಗ್ಲಾದೇಶ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸತತ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ ತಂಡವು ಗೆಲ್ಲುವ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಎದುರು ಏಕದಿನ ಸರಣಿ ಜಯಿಸುವಲ್ಲಿ ಬಾಂಗ್ಲಾದೇಶ ಯಶಸ್ವಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಲ್ಪ ಮೊತ್ತಕ್ಕೆ ಕುಸಿದ ಬಾಂಗ್ಲಾದೇಶ

ಮಳೆ ಬಾಧಿತ ಪಂದ್ಯದಲ್ಲಿ ಮುಸ್ತಾಫಿಜುರ್ ರೆಹಮಾನ್, ಟಸ್ಕಿನ್ ಅಹಮದ್ ಮಾರಕ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡವು 42 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 187 ರನ್‌ಗಳನ್ನು ಕಲೆಹಾಕಿತ್ತು. ಇನ್ನು ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಬಾಂಗ್ಲಾದೇಶ ತಂಡಕ್ಕೆ ಗೆಲ್ಲಲು 41 ಓವರ್‌ಗಳಲ್ಲಿ 192 ರನ್‌ಗಳ ಟಾರ್ಗೆಟ್ ನೀಡಲಾಯಿತು. ಬಾಂಗ್ಲಾದೇಶ ಪರ ಮುಸ್ತಾಫಿಜುರ್ ರೆಹಮಾನ್, ಟಸ್ಕಿನ್ ಅಹಮದ್ ತಲಾ 3 ವಿಕೆಟ್ ಪಡೆದರೆ, ತನ್ವೀರ್ ಇಸ್ಲಾಂ ಎರಡು ವಿಕೆಟ್ ಪಡೆದರು.

Scroll to load tweet…

ಬಾಂಗ್ಲಾದೇಶ ತಂಡವು ಖಾತೆ ತೆರೆಯುವ ಮುನ್ನವೇ ತಂಜೀದ್ ಹಸನ್ ತಮಿಮ್ ಖಾತೆ ತೆರೆಯುವ ಮುನ್ನವೇ ಬಾರ್ಟ್ಲೆಟ್ ಅವರಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಆದರೆ ಎರಡನೇ ವಿಕೆಟ್‌ಗೆ ಸೌಮ್ಯ ಸರ್ಕಾರ್ ಹಾಗೂ ನಜ್ಮುಲ್ ಹೊಸೈನ್ ಶಾಂತೋ ಅತ್ಯಂತ ಜವಾಬ್ದಾರಿಯುತ ಆಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಎರಡನೇ ವಿಕೆಟ್‌ಗೆ ಈ ಜೋಡಿ 86 ರನ್‌ಗಳ ಜತೆಯಾಟವಾಡಿತು. ಸೌಮ್ಯ ಸರ್ಕಾರ್ 42 ಹಾಗೂ ನಜ್ಮುಲ್ ಹೊಸೈನ್ ಶಾಂತೊ 41 ರನ್ ಬಾರಿಸಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಲಿಟನ್ ದಾಸ್ 21 ರನ್ ಬಾರಿಸಿದರೆ, ತೌಹಿದ್ ಹೃದಯ್ ಅಜೇಯ 40 ಸಿಡಿಸಿದರು. ಇನ್ನು ಮೊಸದ್ದೆಕ್ ಹೊಸೈನ್ 15 ಹಾಗೂ ನಾಯಕ ಮೆಹದಿ ಹಸನ್ ಮಿರಜ್ ಅಜೇಯ 22 ರನ್ ಸಿಡಿಸಿದರು. ಈ ಮೂಲಕ ಇನ್ನೂ ಆರು ಓವರ್ ಬಾಕಿ ಇರುವಂತೆಯೇ ಅನಾಯಾಸವಾಗಿ ಬಾಂಗ್ಲಾದೇಶ ತಂಡವನ್ನು ಗೆಲುವಿನ ದಡ ಸೇರಿಸಿದರು.

2-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡ ಬಾಂಗ್ಲಾದೇಶ

ಬಾಂಗ್ಲಾದೇಶ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಡೆಕ್ವರ್ತ್ ಲೂಯಿಸ್ ನಿಯಮದನ್ವಯ 86 ರನ್‌ಗಳ ಗೆಲುವು ದಾಖಲಿಸುವ ಮೂಲಕ ಶುಭಾರಂಭ ಮಾಡಿತ್ತು. ಇದೀಗ ಎರಡನೇ ಏಕದಿನ ಪಂದ್ಯದಲ್ಲೂ ಡೆಕ್ವರ್ತ್ ಲೂಯಿಸ್ ನಿಯಮದನ್ವಯ 5 ವಿಕೆಟ್‌ಗಳ ಜಯ ಸಾಧಿಸಿದೆ. ಇದೀಗ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯವು ಜೂನ್ 14ರಂದು ಢಾಕಾದಲ್ಲಿ ನಿಗದಿಯಾಗಿದೆ. ಬಾಂಗ್ಲಾದೇಶ ತಂಡವು ಇದೀಗ ಸರಣಿ ಕ್ಲೀನ್ ಸ್ವೀಪ್ ಮೇಲೆ ಕಣ್ಣಿಟ್ಟಿದ್ದರೇ, ಆಸ್ಟ್ರೇಲಿಯಾ ತಂಡವು ವೈಟ್‌ವಾಷ್‌ನಿಂದ ಪಾರಾಗಲು ಹೋರಾಡಲಿದೆ.