ನಾಗ್ಪುರ(ನ.10): ಭಾರತ ಹಾಗೂ ಬಾಂಗ್ಲಾದೇಶ ನಡುವಿನ 3ನೇ ಹಾಗೂ ಅಂತಿಮ ಟಿ20 ಪಂದ್ಯ ಫೈನಲ್ ಸ್ವರೂಪ ಪಡೆದುಕೊಂಡಿದೆ. ಸರಣಿ 1-1 ಅಂತರದಲ್ಲಿ ಸಮಬಲಗೊಂಡಿರುವ ಕಾರಣ ಇಂದಿನ ಪಂದ್ಯ ಗೆದ್ದ ತಂಡ ಸರಣಿ ವಶಪಡಿಸಿಕೊಳ್ಳಲಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಬಾಂಗ್ಲಾದೇಶ ಒಂದು ಬದಲಾವಣೆ ಮಾಡಿದರೆ, ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಿದೆ. ಕ್ರುನಾಲ್ ಪಾಂಡ್ಯ ಬದಲು ಕನ್ನಡಿಗ ಮನೀಶ್ ಪಾಂಡೆಗೆ ಅವಕಾಶ ನೀಡಲಾಗಿದೆ.ಬಾಂಗ್ಲಾದೇಶ ಕೂಡ ಒಂದು ಬದಲಾವಣೆ ಮಾಡಿದೆ. 

 

ಇದನ್ನೂ ಓದಿ: ವಿದಾಯದ ನಂತರದ ಪ್ಲಾನ್ ಬಹಿರಂಗಪಡಿಸಿದ ವಿರಾಟ್ ಕೊಹ್ಲಿ!

 

ನವದೆಹಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ಕಳಪೆ ಬ್ಯಾಟಿಂಗ್ ಹಾಗೂ ಬೌಲಿಂಗ್ ನಿಂದ ಮುಗ್ಗರಿಸಿತು. ಭರ್ಜರಿ 7 ವಿಕೆಟ್ ಗೆಲುವು ಸಾಧಿಸಿದ ಬಾಂಗ್ಲಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ರಾಜ್‌ಕೋಟ್‌ನಲ್ಲಿ ನಡೆದ 2ನೇ ಪಂದ್ಯದಲ್ಲಿ ಟೀಂ ಇಂಡಿಯಾ ತಿರುಗೇಟು ನೀಡಿತು. ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಹಾಗೂ ಕರಾರುವಕ್ ಬೌಲಿಂಗ್ ದಾಳಿಯಿಂದ ಭಾರತ 8 ವಿಕೆಟ್ ಗೆಲುವು ಸಾದಿಸಿತ್ತು. ಈ ಮೂಲಕ ಸರಣಿಯನ್ನು 1-1 ಅಂತರದಲ್ಲಿ ಸಮಬಲ ಮಾಡಿತು. ಇದೀಗ 3ನೇ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.