Asianet Suvarna News Asianet Suvarna News

ಟಿ20 ವಿಶ್ವಕಪ್‌ಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ; ಎಂ.ಎಸ್. ಧೋನಿ ಮೆಂಟರ್!

  • ಟಿ20 ವಿಶ್ವಕಪ್ ಟೂರ್ನಿಗೆ ಬಲಿಷ್ಠ ತಂಡ ಪ್ರಕಟಿಸಿದ ಬಿಸಿಸಿಐ
  • ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಆರ್ ಅಶ್ವಿನ್
  • ತಂಡದಲ್ಲಿರುವ ಏಕೈಕ ಕನ್ನಡಿಗ ಕೆಎಲ್ ರಾಹುಲ್
  • ಅಕ್ಟೋಬರ್ 17 ರಿಂದ ಯುಎಇನಲ್ಲಿ ಟೂರ್ನಿ ಆರಂಭ
BCCI annouces Team India 15 men squad for t20 world cup MS Dhoni to Mentor ckm
Author
Bengaluru, First Published Sep 8, 2021, 10:13 PM IST

ಮುಂಬೈ(ಸೆ.08): ಟಿ20 ವಿಶ್ವಕಪ್ ಟೂರ್ನಿಗೆ ಕೌಂಟ್‌ಡೌನ್ ಆರಂಭಗೊಂಡಿದೆ. ಕಳೆದ ಹಲವು ವರ್ಷಗಳಿಂದ ಮರೀಚಿಕೆಯಾಗಿರುವ ಐಸಿಸಿ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಟೀಂ ಇಂಡಿಯಾ ಹವಣಿಸುತ್ತಿದೆ. ಇತ್ತ ಬಿಸಿಸಿಐ ಟಿ20 ವಿಶ್ವಕಪ್ ಟೂರ್ನಿಗೆ ಬಲಿಷ್ಠ 15 ಸದಸ್ಯರ ಟೀಂ ಇಂಡಿಯಾ ಪ್ರಕಟಿಸಿದೆ. ವಿಶೇಷ ಅಂದರೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿಯನ್ನು ಮೆಂಟರ್ ಆಗಿ ಆಯ್ಕೆ ಮಾಡಲಾಗಿದೆ. 

BCCI annouces Team India 15 men squad for t20 world cup MS Dhoni to Mentor ckm

ಧೋನಿ ಅನುಭವ ಈ ಬಾರಿ ತಂಡ ಅತೀ ಅವಶ್ಯಕವಾಗಿದೆ. ಧೋನಿ ಮೆಂಟರ್ ಆಗಿ ಆಯ್ಕೆಯಾಗಿರುವುದು ಟೀಂ ಇಂಡಿಯಾ ಆತ್ಮವಿಶ್ವಾಸ ಹೆಚ್ಚಿಸಿದೆ.  

 

ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಹೆಚ್ಚು ಸಮತೋಲನದಿಂದ ಕೂಡಿದೆ. ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ. ಇನ್ನು ವಿಕೆಟ್ ಕೀಪರ್ ಕೋಟಾದಲ್ಲಿ ರಿಷಬ್ ಪಂತ್ ಹಾಗೂ ಇಶಾನ್ ಕಿಶನ್ ಸ್ಥಾನ ಪಡೆದಿದ್ದಾರೆ.

ಟೆಸ್ಟ್ ಕ್ರಿಕೆಟ್‌ಗೆ ಸೀಮಿತವಾಗಿದ್ದ ರವಿಚಂದ್ರನ್ ಅಶ್ವಿನ್ ಟಿ20 ಕ್ರಿಕೆಟ್‌ಗೆ ಮರಳಿದ್ದಾರೆ. ಆದರೆ ಯಜುವೇಂದ್ರ ಚಹಾಲ್ ಹಾಗೂ ಶಿಖರ್ ಧವನ್ ಸ್ಥಾ ಪಡೆಯಲು ವಿಫಲರಾಗಿದ್ದಾರೆ. ಇದರ ನಡುವೆ ಅಕ್ಸರ್ ಪಟೇಲ್ ಸ್ಥಾನ ಗಿಟ್ಟಿಸಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ. ವೇಗಿಗಳಾದಿ ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ.

ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹಾರ್, ರವೀಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ

ಸ್ಟಾಂಡ್ ಬೈ ಪ್ಲೇಯರ್ಸ್

ದೀಪಕ್ ಚಹರ್, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್
 

Follow Us:
Download App:
  • android
  • ios