ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಐಪಿಎಲ್ 2023 ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 31ಕ್ಕೆ ಐಪಿಎಲ್ 2023 ಟೂರ್ನಿ ಆರಂಭಗೊಳ್ಳುತ್ತಿದೆ. ಮೇ.28ರ ಫೈನಲ್ ಪಂದ್ಯದೊಂದಿಗೆ ಐಪಿಎಲ್ ಟೂರ್ನಿ ಅಂತ್ಯಗೊಳ್ಳಲಿದೆ. ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ 

ಮುಂಬೈ(ಫೆ.17): ಮಹಿಳಾ ಐಪಿಎಲ್ ಟೂರ್ನಿ ಸಿದ್ದತೆ ನಡುವೆ ಇದೀಗ 16ನೇ ಆವೃತ್ತಿ ಐಪಿಎಲ್ ಟೂರ್ನಿ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 31 ರಂದು ಐಪಿಎಲ್ 2023 ಟೂರ್ನಿ ಆರಂಭಗೊಳ್ಳುತ್ತಿದೆ. ಮಾರ್ಚ್ 31ರ ಸಂಜೆ 7.30ಕ್ಕೆ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಟ ನಡೆಸಲಿದೆ. ಈ ಪಂದ್ಯ ಅಹಮ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಂಗಳೂರು, ಮುಂಬೈ, ಚೆನ್ನೈ ಸೇರಿದತೆ 12 ನಗರದಲ್ಲಿ ಈ ಬಾರಿಯ ಐಪಿಎಲ್ ಟೂರ್ನಿ ಆಯೋಜನೆಗೊಂಡಿದೆ. ಮೇ 28ರಂದು ಫೈನಲ್ ಪಂದ್ಯ ನಡೆಯಲಿದೆ. 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೋರಾಟ ಎಪ್ರಿಲ್ 2 ರಂದು ಆರಂಭಗೊಳ್ಳಲಿದೆ. ಆರ್‌ಸಿಬಿ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೋರಾಟ ನಡೆಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಐಪಿಎಲ್ 2023 ಟೂರ್ನಿಯಲ್ಲಿ 70 ಲೀಗ್ ಪಂದ್ಯಗಳು ನಡೆಯಲಿದೆ. ಇನ್ನು 18 ಡಬಲ್ ಹೆಡ್ಡರ್ ಪಂದ್ಯ ನಡೆಯಲಿದೆ. ಪ್ರತಿ ತಂಡ 7 ಪಂದ್ಯವನ್ನು ತವರಿಲ್ಲಿ ಹಾಗೂ 7 ಪಂದ್ಯಗಳನ್ನು ತವರಿನಾಚೆ ಆಡಲಿದೆ. ಮೇ.21ಕ್ಕೆ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದೆ. ಬಳಿಕ ಪ್ಲೇ ಆಫ್ ಹಂತದ ಪಂದ್ಯಗಳು ಆರಂಭಗೊಳ್ಳಲಿದೆ.

IPL 2023ರ ಬಳಿಕ ನಾಯಕ ಎಂ.ಎಸ್ ಧೋನಿ ನಿವೃತ್ತಿ? ಸಿಎಸ್‌ಕೆ ತಂಡದಲ್ಲಿ ಮಹತ್ವದ ಬೆಳವಣಿಗೆ

10 ಐಪಿಎಲ್ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಾಗಿದೆ. ಗ್ರೂಪ್ ಎ ಹಾಗೂ ಗ್ರೂಪ್ ಬಿ ಎಂದು ವಿಂಗಡಿಸಲಾಗಿದೆ.

ಗ್ರೂಪ್ ಎ: ಮುಂಬೈ ಇಂಡಿಯನ್ಸ್, ರಾಜಸ್ಥಾನ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಖನೌ ಸೂಪರ್ ಜೈಂಟ್ಸ್
ಗ್ರೂಪ್ ಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ಗುಜರಾತ್ ಟೈಟಾನ್ಸ್ 

ಆರಂಭಿಕ 5 ಪಂದ್ಯದ ವಿವರ
ಮಾರ್ಚ್ 31: ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾಟ್ ಟೈಟೈನ್ಸ್
ಎಪ್ರಿಲ್ 1: ಪಂಜಾಬ್ ಕಿಂಗ್ಸ್ vs ಕೋಲ್ಕತಾ ನೈಟ್ ರೈಡರ್ಸ್
ಎಪ್ರಿಲ್ 1: ಲಖನೌ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್
ಎಪ್ರಿಲ್ 2: ಸನ್‌ರೈಸರ್ಸ್ ಹೈದರಾಬಾದ್ vs ರಾಜಸ್ಥಾನ ರಾಯಲ್ಸ್
ಎಪ್ರಿಲ್ 2: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್

IPL 2023: ಈ ಮೂವರನ್ನು ತಂಡದಿಂದ ಕೈಬಿಟ್ಟಿದ್ದಕ್ಕೆ ಬೆಲೆ ತೆರುತ್ತಾ ರಾಯಲ್ ಚಾಲೆಂಜರ್ಸ್‌ ಬೆಂಗಳೂರು..?

ಐಪಿಎಲ್ ಆಯೋಜನೆಗೊಳ್ಳುವ ನಗರ
ಬೆಂಗಳೂರು, ಅಹಮ್ಮದಾಬಾದ್, ಮೊಹಾಲಿ, ಹೈದರಾಬಾದ್, ಚೆನ್ನೈ, ದೆಹಲಿ, ಕೋಲ್ಕತಾ, ಜೈಪುರ, ಮುಂಬೈ, ಗುವ್ಹಾಟಿ, ಧರ್ಮಶಾಲಾ

ಕಳೆದ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಐಪಿಎಲ್ ಟ್ರೋಫಿ ಗೆದ್ದುಕೊಂಡಿತ್ತು. ಈ ಬಾರಿ ಯಾವ ತಂಡ ಟ್ರೋಫಿ ಗೆಲ್ಲಲಿದೆ ಅನ್ನೋ ಲೆಕ್ಕಾಚಾರ ಜೋರಾಗಿ ನಡೆಯುತ್ತಿದೆ. 

2023ರ ಐಪಿಎಲ್ ಟೂರ್ನಿ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ: