ಐಪಿಎಲ್ ಟೂರ್ನಿ ಎರಡನೇ ಇನ್ನಿಂಗ್ಸ್ ಆರಂಭಕ್ಕೆ ಕೌಂಟ್‌ಡೌನ್ ಕೊರೋನಾ ಕಾರಣ ಸ್ಥಗಿತಗೊಂಡಿದ್ದ ಟೂರ್ನಿ ದುಬೈನಲ್ಲಿ ಚಾಲನೆ ಮೊದಲ ಪಂದ್ಯದಲ್ಲಿ ಸಿಎಸ್‌ಕೆ- ಮುಂಬೈ ಮುಖಾಮುಖಿ  

ಮುಂಬೈ(ಜು.25): ಕೊರೋನಾ ವೈರಸ್ ಆತಂಕ ನಡುವೆ ಭಾರತದಲ್ಲಿ ಆರಂಭಗೊಂಡಿದ್ದ ಐಪಿಎಲ್ ಟೂರ್ನಿ 2021 ದಿಢೀರ್ ಸ್ಥಗಿತಗೊಂಡಿತ್ತು. ಇದೀಗ ಸ್ಥಗಿತಗೊಂಡಿರುವ ಐಪಿಎಲ್ ಟೂರ್ನಿ ದುಬೈನಲ್ಲಿ ಆರಂಭಗೊಳ್ಳುತ್ತಿದೆ. ಐಪಿಎಲ್ 2021ರ ಎರಡನೇ ಇನ್ನಿಂಗ್ಸ್ ವೇಳಾಪಟ್ಟಿ ಪ್ರಕಟಗೊಂಡಿದೆ. ಸೆಪ್ಟೆಂಬರ್ 19ರಿಂದ ದುಬೈನಲ್ಲಿ ಟೂರ್ನಿಗೆ ಚಾಲನೆ ನೀಡಲಾಗುತ್ತಿದೆ.

ಐಪಿಎಲ್‌ಗೆ ಮತ್ತೆರಡು ತಂಡ ಸೇರ್ಪಡೆ; ನಾಲ್ವರು ಆಟಗಾರರ ರೀಟೈನ್‌ಗೆ ಅವಕಾಶ.

ಸೆಪ್ಟೆಂಬರ್ 19 ರಿಂದ ಐಪಿಎಲ್ 2ನೇ ಇನ್ನಿಂಗ್ಸ್ ಆರಂಭಗೊಳ್ಳುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೆ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ದುಬೈ, ಅಬುಧಾಬಿ ಹಾಗೂ ಶಾರ್ಜಾದಲ್ಲಿ ಪಂದ್ಯ ಆಯೋಜಿಸಲಾಗಿದೆ.

ಅಕ್ಟೋಬರ್ 8ರವರೆಗೆ ಲೀಗ್ ಪಂದ್ಯಗಳು ನಡೆಯಲಿದೆ. ಅಕ್ಟೋಬರ್ 10 ರಿಂದ ಪ್ಲೇ ಆಫ್ ಪಂದ್ಯಗಳು ನಡೆಯಲಿದೆ. ಇನ್ನು ಅಕ್ಟೋಬರ್ 15ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ಆಯೋಜಿಸಲಾಗಿದೆ. ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. 

ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ಐಸಿಸಿ ಟಿ20 ವಿಶ್ವಕಪ್‌ ಆರಂಭದ ದಿನಾಂಕ ಪ್ರಕಟ..!

ಶನಿವಾರ ಹಾಗೂ ಭುನುವಾರ ಡಬಲ್ ಹೆಡರ್ ಪಂದ್ಯ ಆಯೋಜಿಸಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸೆಕೆಂಡ್ ಇನ್ನಿಂಗ್ಸ್ ಅಭಿಯಾನವನ್ನು ಸೆಪ್ಟೆಂಬರ್ 20 ರಂದು ಆರಂಭಿಸಲಿದೆ. ಕೆಕೆಆರ್ ವಿರುದ್ದ ಅಬುಧಾಬಿಯಲ್ಲಿ ಪಂದ್ಯ ಆಡಲಿದೆ.