Team India Squad ಟಿ20 ಸರಣಿ ಹಾಗೂ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ, ಉಮ್ರಾನ್ ಮಲಿಕ್‌‌ಗೆ ಚಾನ್ಸ್!

  • ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ
  • ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತಂಡ ಪ್ರಕಟಿಸಿದ ಬಿಸಿಸಿಐ
  • ಟೆಸ್ಟ್ ತಂಡಕ್ಕೆ ಪೂಜಾರ ಕಮ್‌ಬ್ಯಾಕ್, ಮಲಿಕ್‌ಗೆ ಚೊಚ್ಚಲ ಕರೆ
BCCI announces squads for T20I series against South Africa and 5th Test against England Umran Malik Called Up ckm

ಮುಂಬೈ(ಮೇ.22): ಸೌತ್ ಆಫ್ರಿಕಾ ವಿರುದ್ಧದ ತವರಿನ ಟಿ20 ಸರಣಿ ಹಾಗೂ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಬಿಸಿಸಿಐ ಬಲಿಷ್ಠ ಟೀಂ ಇಂಡಿಯಾ ಪ್ರಕಟಿಸಿದೆ. ಟಿ20 ಸರಣಿಗೆ ಐಪಿಎಲ್ ಟೂರ್ನಿಯಲ್ಲಿ ಮಿಂಚಿನ ದಾಳಿ ಮೂಲಕ ಎಲ್ಲರ ಗಮನಸೆಳೆದ ಉಮ್ರಾನ್ ಮಲಿಕ್ ಹಾಗೂ ಅರ್ಶದೀಪ್ ಸಿಂಗ್ ಇದೇ ಮೊದಲ ಬಾರಿಗೆ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಇತ್ತ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯಕ್ಕೆ ಚೇತೇಶ್ವರ್ ಪೂಜಾರ ಕಮ್‌ಬ್ಯಾಕ್ ಮಾಡಿದ್ದಾರೆ.

ಜೂನ್ 9 ರಿಂದ ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿ ಆರಂಭಗೊಳ್ಳುತ್ತಿದೆ. ಈ ಟೂರ್ನಿಗಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಐಪಿಎಲ್ ಟೂರ್ನಿಯಲ್ಲಿ ಬ್ಯಾಟಿಂಗ್ ಹಾಗೂ ನಾಯಕತ್ವದಲ್ಲಿ ಅಬ್ಬರಿಸುತ್ತಿರುವ ಕೆಎಲ್ ರಾಹುಲ್ ಟೀಂ ಇಂಡಿಯಾ ಟಿ20 ತಂಡವನ್ನು ಮುನ್ನಡೆಸಲಿದ್ದಾರೆ.

IPL 2022 ಗೇಮ್​​ ಇಸ್​​​ ನಾಟ್ ಓವರ್​​​​, ಫಿಕ್ಚರ್​​​ ಅಭಿ ಬಾಕಿ ಹೈ..!

ಸನ್‌ರೈಸರ್ಸ್ ಹೈದರಾಬಾದ್ ತಂಡ ವೇಗಿ ಉಮ್ರಾನ್ ಮಲಿಕ್ ಅತೀ ವೇಗದ ಎಸೆತ ಹಾಗೂ ವಿಕೆಟ್ ಕಬಳಿಸಿ ಗಮನಸೆಳೆದಿದ್ದಾರೆ. ಇತ್ತ ಪಂಜಾಬ್ ಕಿಂಗ್ಸ್ ತಂಡದ ವೇಗಿ ಅರ್ಶದೀಪ್ ಸಿಂಗ್ ಕೂಡ ಟಿ20  ಸರಣಿಗೆ ಆಯ್ಕೆಯಾಗಿದ್ದಾರೆ. 

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಮ್ಯಾಚ್ ಫಿನೀಶರ್ ಆಗಿ ಗಮನಸೆಳೆದಿರುವ ದಿನೇಶ್ ಕಾರ್ತಿಕ್ ಕೂಡ ಕಂಡ ಸೇರಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಕೂಡ ಟಿ20 ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಲ್ಲಿ 5ನೇ ಪಂದ್ಯ ಆಡದೇ ಬಾಕಿ ಉಳಿದಿತ್ತು. ಇದೀಗ ಬಿಸಿಸಿಐ ಸರಣಿಯಲ್ಲಿ ಉಳಿದಿದ್ದ ಒಂದು ಪಂದ್ಯವನ್ನು ಆಯೋಜಿಸಿದೆ. ಈ ಪಂದ್ಯಕ್ಕೆ ತಂಡ ಆಯ್ಕೆ ಮಾಡಿದೆ.ಸತತ ಇಂಜುರಿಯಿಂದ ತಂಡದಿಂದ ಹೊರಗುಳಿದಿದ್ದ ವೇಗಿ ಭುವನೇಶ್ವರ್ ಕುಮಾರ್ ಕೂಡ ಮತ್ತೆ ಟಿ20 ತಂಡಕ್ಕೆ ಮರಳಿದ್ದಾರೆ. ಈ ಮೂಲಕ ಯುವ ಕ್ರಿಕೆಟಿಗನ್ನೊಳಗೊಂಡ ಬಲಿಷ್ಠ ಪಡೆಯನ್ನು ಬಿಸಿಸಿಐ ಪ್ರಕಟಿಸಿದೆ.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟಿಂ ಇಂಡಿಯಾ 
ಕೆಎಲ್ ರಾಹುಲ್(ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶಾನ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ರವಿ ಬಿಶ್ನೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್

IPL 2022 ಟೂರ್ನಿಯಲ್ಲಿ ಕನ್ನಡದ ಕಂಪು, ಸ್ಟಾರ್ ಆಟಗಾರರ ಬಾಯಲ್ಲಿ ಕನ್ನಡ ಕಲರವ..!

ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಗೆ ವೇಗಿಗಳ ಪೈಕಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಆಯ್ಕೆಯಾಗಿದ್ದಾರೆ. ಟಿ20 ಸರಣಿಗೆ ವಿಶ್ರಾಂತಿ ನೀಡಿದ್ದ ಹಿರಿಯ ಆಟಾಗಾರರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಲಭ್ಯರಿದ್ದಾರೆ. 

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮಾ ವಿಹಾರಿ, ಚೇತೇಶ್ವರ್ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ

Latest Videos
Follow Us:
Download App:
  • android
  • ios