ಮುಂಬೈ[ಅ.24]: ಬಾಂಗ್ಲಾದೇಶ ವಿರುದ್ಧ ನವೆಂಬರ್ 03ರಿಂದ ಆರಂಭವಾಗಲಿರುವ 3 ಪಂದ್ಯಗಳ ಟಿ20 ಸರಣಿ ಹಾಗೂ ಆ ಬಳಿಕ ನಡೆಯಲಿರುವ 2 ಪಂದ್ಯಗಳ ಟೆಸ್ಟ್ ಚಾಂಪಿಯನ್’ಶಿಪ್’ಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಮೂವರು ಕನ್ನಡಿಗರಿಗೆ ಅವಕಾಶ ಸಿಕ್ಕಿದೆ. ಟಿ20 ಕ್ರಿಕೆಟ್’ನಿಂದ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ರೋಹಿತ್’ಗೆ ಪಟ್ಟ ಕಟ್ಟಲಾಗಿದೆ.

ಬಾಂಗ್ಲಾ ಸರ​ಣಿಗೆ ಧೋನಿ, ಕೊಹ್ಲಿ ಆಯ್ಕೆ ಡೌಟ್?

ಟಿ20 ಕ್ರಿಕೆಟ್’ಗೆ ಯುವ ಕ್ರಿಕೆಟಿಗರಿಗೆ ಮಣೆ ಹಾಕಲಾಗಿದ್ದು, ವಿಜಯ್ ಹಜಾರೆ ಟ್ರೋಫಿಯಲ್ಲಿ ಮಿಂಚಿದ ಸಂಜು ಸ್ಯಾಮ್ಸನ್, ಶಿವಂ ದುಬೆಗೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ತಂಡದ ನಾಯಕ ಮನೀಶ್ ಪಾಂಡೆ, ಕೆ.ಎಲ್ ರಾಹುಲ್ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಿಖರ್ ಧವನ್, ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ. ವಾಷಿಂಗ್ಟನ್ ಸುಂದರ್ ಜತೆಗೆ ಯಜುವೇಂದ್ರ ಚಹಲ್ ತಂಡಕ್ಕೆ ಕಮ್’ಬ್ಯಾಕ್ ಮಾಡಿದ್ದಾರೆ.

"

ಬಾಂಗ್ಲಾ ಟಿ20 ಸರಣಿ: ಯಾರು ಡ್ರಾಪ್? ಯಾರಿಗೆ ರೆಸ್ಟ್? ಮತ್ತ್ಯಾರಿಗೆ ಚಾನ್ಸ್..?

ಇನ್ನು ಚಹರ್ ಬ್ರದರ್ಸ್’ಗಳಾದ ದೀಪಕ್ ಹಾಗೂ ರಾಹುಲ್ ಸ್ಥಾನ ಉಳಿಸಿಕೊಂಡಿದ್ದಾರೆ. ಕೃನಾಲ್ ಪಾಂಡ್ಯ, ಶಿವಂ ದುಬೈ ಆಲ್ರೌಂಡರ್ ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ. ಶಾರ್ದುಲ್ ಠಾಕೂರ್, ದೀಪಕ್ ಚಹರ್, ಖಲೀಲ್ ಅಹಮ್ಮದ್ ವೇಗದ ಬೌಲಿಂಗ್ ಸಾರಥ್ಯ ವಹಿಸಲಿದ್ದಾರೆ. ಧೋನಿ ಮತ್ತೆ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದು, ಮುಂದಿನ ನಡೆ ಏನು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. 

15 ಆಟಗಾರರನ್ನೊಳಗೊಂಡ ಟಿ20 ತಂಡ ಹೀಗಿದೆ:

ಇನ್ನು ನವೆಂಬರ್ 14ರಿಂದ ಆರಂಭವಾಗಲಿರುವ ಟೆಸ್ಟ್ ಚಾಂಪಿಯನ್’ಶಿಪ್’ಗೂ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಮೊದಲ ಟೆಸ್ಟ್ ಪಂದ್ಯಕ್ಕೆ ಇಂದೋರ್ ಆತಿಥ್ಯ ವಹಿಸಿದರೆ, ಎರಡನೇ ಪಂದ್ಯಕ್ಕೆ ಕೋಲ್ಕತಾ ಈಡನ್ ಗಾರ್ಡನ್ ಮೈದಾನ ಆತಿಥ್ಯ ವಹಿಸಲಿದೆ.

ಟೀಂ ಇಂಡಿಯಾ ಎದುರಿನ ಟಿ20 ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ

ಟೆಸ್ಟ್ ತಂಡದಲ್ಲಿ ಹೆಚ್ಚಿನ ಬದಲಾವಣೆ ಮಾಡಲಾಗಿಲ್ಲ. ರೋಹಿತ್ ಶರ್ಮಾ, ಕನ್ನಡಿಗ ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ, ರಹಾನೆ, ವೃದ್ದಿಮಾನ್ ಸಾಹಾ ಸ್ಥಾನ ಪಡೆದಿದ್ದಾರೆ. ಇನ್ನು ಆಫ್ರಿಕಾ ವಿರುದ್ಧ ಕೊನೆಯ ಟೆಸ್ಟ್ ಪಂದ್ಯ ಮಿಸ್ ಮಾಡಿಕೊಂಡಿದ್ದ ಹನುಮ ವಿಹಾರಿ ತಂಡ ಕೂಡಿಕೊಂಡಿದ್ದಾರೆ. ನದೀಮ್ ಅವರನ್ನು ಕೈ ಬಿಡಲಾಗಿದ್ದು, ಕುಲ್ದೀಪ್ ಯಾದವ್ ತಂಡಕ್ಕೆ ಕಮ್’ಬ್ಯಾಕ್ ಮಾಡಿದ್ದಾರೆ. ಮೀಸಲು ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಸ್ಥಾನ ಪಡೆದರೆ, ಮೀಸಲು ಆರಂಭಿಕನಾಗಿ ಶುಭ್’ಮನ್ ಗಿಲ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಡೇಜಾ, ಅಶ್ವಿನ್ ಸ್ಥಾನ ಉಳಿಸಿಕೊಂಡಿದ್ದಾರೆ. ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್ ವೇಗದ ಬೌಲಿಂಗ್ ಸಾರಥ್ಯ ವಹಿಸಲಿದ್ದಾರೆ.

ಟೆಸ್ಟ್ ತಂಡ ಹೀಗಿದೆ: 

 ಅಕ್ಟೋಬರ್ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ