ಮುಂಬೈ(ಜ.19) ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡ ಟೀಂ ಇಂಡಿಯಾ ಇತಿಹಾಸ ರಚಿಸಿದೆ. ಭಾರತದ ಇತಿಹಾಸಿಕ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ. ಆಸೀಸ್ ಸರಣಿ ಯಶಸ್ವಿಯಾಗಿ ಮುಗಿಸಿದ ಬೆನ್ನಲ್ಲೇ ಇತ್ತ ಬಿಸಿಸಿಐ ಇಂಗ್ಲೆಂಡ್ ವಿರುದ್ಧದ ಆರಂಭಿಕ 2 ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟಿಸಿದೆ.

ಟೀಂ ಇಂಡಿಯಾ ಸರಣಿ ಗೆಲುವಿನ ಬಳಿಕ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿ ಹೇಗಿದೆ?..

ಚೆನ್ನೈನಲ್ಲಿ ಆಯೋಜಿಸಿಲಾಗಿರುವ ಆರಂಭಿಕ 2 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ತಂದೆಯಾಗುವ ಕಾರಣದಿಂದ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಿಂದ ಹೊರಗುಳಿದ್ದ ನಾಯಕ ವಿರಾಟ್ ಕೊಹ್ಲಿ ಮತ್ತೆ ತಂಡ ಸೇರಿಕೊಂಡಿದ್ದಾರೆ. ಇದೀಗ ತವರಿನ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ್ದಾರೆ. ಆದರೆ ಇಂಜುರಿಯಿಂದ ಚೇತರಿಸಿಕೊಳ್ಳದ ವೇಗಿ ಮೊಹಮ್ಮದ್ ಶಮಿ, ಬ್ಯಾಟ್ಸ್‌ಮನ್ ಹನುಮಾ ವಿಹಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಟೀಂ ಇಂಡಿಯಾ ಐತಿಹಾಸಿಕ ಗೆಲುವಿಗೆ ಪ್ರಧಾನಿ ಮೋದಿ, ಸಚಿನ್ ಸೇರಿ ದಿಗ್ಗಜರ ಅಭಿನಂದನೆ!.

ಗಾಯದಿಂದ ಚೇತರಿಸಿಕೊಂಡಿರುವ ಅಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ವೇಗಿ ಇಶಾಂತ್ ಶರ್ಮಾ ತಂಡಕ್ಕೆ ವಾಪಾಸ್ ಆಗಿದ್ದಾರೆ. ಇನ್ನು ಕನ್ನಡಿಗರಾದ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಸ್ಥಾನ ಪಡೆದಿದ್ದಾರೆ. ಸ್ಪಿನ್ನರ್ ಅಕ್ಸರ್ ಪಟೇಲ್‌ಗೆ ಅವಕಾಶ ನೀಡಲಾಗಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ:
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಶುಬ್‌ಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ವೃದ್ಧಿಮಾನ್ ಸಾಹ, ಆರ್ ಅಶ್ವಿನ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ವಾಶಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್

 

ಟೀಂ ಇಂಡಿಯಾ ಜೊತೆಗೆ ಐವರು ನೆಟ್ ಬೌಲರ್ಸ್ ಹಾಗೂ ಔವರು ಆಟಗಾರರನ್ನು ಸ್ಟಾಂಡ್ ಬೈ ಆಗಿ ಆಯ್ಕೆ ಮಾಡಿದೆ.

ನೆಟ್ ಬೌಲರ್ಸ್: ಅಂಕಿತ್ ರಜಪೂತ್, ಅವೇಶ್ ಖಾನ್, ಸಂದೀಪ್ ವಾರಿಯರ್ಸ್, ಕೃಷ್ಣಪ್ಪ ಗೌತಮ್, ಸೌರಭ್ ಕುಮಾರ್

ಸ್ಟಾಂಡ್ ಬೈ ಪ್ಲೇಯರ್ಸ್: ಕೆಎಸ್ ಭರತ್ ಅಭಿಮನ್ಯು ಈಶ್ವರನ್, ಶಹಭಾಝ್ ನದೀಮ್, ರಾಹುಲ್ ಚಹಾರ್, ಪ್ರಿಯಾಂಕ್ ಪಾಂಚಾಲ್