Asianet Suvarna News Asianet Suvarna News

ನ್ಯೂಜಿಲೆಂಡ್, ಆಸ್ಟ್ರೇಲಿಯಾ ವಿರುದ್ದದ ಸರಣಿಗೆ ಭಾರತ ತಂಡ ಪ್ರಕಟ, ರಾಹುಲ್, ಅಕ್ಸರ್ ಅಲಭ್ಯ!

ನ್ಯೂಜಿಲೆಂಡ್ ವಿರುದ್ಧದ ತವರಿನ  ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ತಂಡದಲ್ಲಿ ಕೆಲ ಮಹತ್ವದ ಬದಲಾವಣೆ ಮಾಡಲಾಗಿದೆ. ತಂಡದ ವಿವರ ಇಲ್ಲಿದೆ.

BCCI Announces team India squad for New zealand home series odi KL Rahul and Axal patel unavailable ckm
Author
First Published Jan 13, 2023, 10:20 PM IST

ಮುಂಬೈ(ಜ.13): ಶ್ರೀಲಂಕಾ ವಿರುದ್ದದ ಏಕದಿನ ಸರಣಿ ಅಂತಿಮ ಘಟ್ಟ ತಲುಪಿದೆ. ಲಂಕಾ ವಿರುದ್ಧ ಸರಣಿ ಗೆದ್ದಿರುವ ಭಾರತ, ಸರಣಿ ಕ್ಲೀನ್ ಸ್ವೀಪ್ ವಿಶ್ವಾಸದಲ್ಲಿದೆ. ಲಂಕಾ ಸರಣಿ ಬಳಿಕ ಭಾರತ ಹಾಗೂ ನ್ಯೂಜಿಲೆಂಡ್  ನಡುವಿನ ಏಕದಿನ ಹಾಗೂ ಟಿ20 ಸರಣಿ ನಡೆಯಲಿದೆ. ಬಳಿಕ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ನಡೆಯಲಿದೆ.  ತವರಿನಲ್ಲಿ ಆಯೋಜಿಸಿರುವ ಈ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ 3 ಏಕದಿನ ಹಾಗೂ 3 ಟಿ20 ಪಂದ್ಯ ನಡೆಯಲಿದೆ. ಬಿಸಿಸಿಐ ತಂಡದಲ್ಲಿ ಎರಡು ಅನಿವಾರ್ಯ ಬದಲಾವಣೆಯನ್ನು ಮಾಡಿದೆ. ಕೆಎಲ್ ರಾಹುಲ್ ವೈವಾಹಿಕ ಬದುಕಿಗೆ ಕಾಲಿಡುತ್ತಿರುವ ಕಾರಣ ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಗೆ ಲಭ್ಯವಿಲ್ಲ. ಇತ್ತ ಅಲ್ರೌಂಡರ್ ಅಕ್ಸರ್ ಪಟೇಲ್ ಕೂಡ ವೈಯುಕ್ತಿಕ ಕಾರಣದಿಂದ ಲಭ್ಯವಿಲ್ಲ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ!
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಶಿಂಗ್ಟನ್ ಸುಂದರ್, ಶಹಬಾಜ್ ಅಹಮ್ಮದ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ 

ಭಾರತ ಶ್ರೀಲಂಕಾ 3ನೇ ಪಂದ್ಯಕ್ಕೂ ಮುನ್ನ ಬೆಂಗಳೂರಿಗೆ ಮರಳಿದ ಕೋಚ್ ದ್ರಾವಿಡ್!

ನ್ಯೂಜಿಲೆಂಡ್ ವಿರುದ್ಧ ಟಿ20 ತಂಡಕ್ಕೆ ಕೆಲ ಮಹತ್ವದ ಬದಲಾವಣೆ ಮಾಡಲಾಗಿದೆ. ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿ ಹಾರ್ದಿಕ್ ಪಾಂಡ್ಯಗೆ ಮತ್ತೆ ನಾಯಕತ್ವ ನೀಡಲಾಗಿದೆ. ಇನ್ನು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಪೃಥ್ವಿಶಾಗೆ ಸ್ಥಾನ ನೀಡಲಾಗಿದೆ. ಇನ್ನು ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾಗೆ ಸ್ಥಾನ ನೀಡಲಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ, ವಾಶಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜುವೇಂದ್ರ ಚಹಾಲ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಕೇಶ್ ಕುಮಾರ್

ಆಸ್ಟ್ರೇಲಿಯಾ ವಿರುದ್ಧದ ತವರಿನ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಆರಂಭಿಕ 2 ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಏಕದಿನ ಹಾಗೂ ಟಿ20 ಸರಣಿಯಿಂದ ಹೊರಗುಳಿದಿದ್ಧ ಕೆಎಲ್ ರಾಹುಲ್ ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೆ ಮರಳಿದ್ದಾರೆ.ಗಾಯಗೊಂಡು ಸುದೀರ್ಘ ದಿನಗಳಿಂದ ವಿಶ್ರಾಂತಿಯಲ್ಲಿರುವ ರವೀಂದ್ರ ಜಡೇಜಾ ಕಮ್‌ಬ್ಯಾಕ್ ಮಾಡಿದ್ದಾರೆ.

ಸೋಲಿನಲ್ಲೂ ಭಾರತವನ್ನು ಹಿಂದಿಕ್ಕಿದ ಶ್ರೀಲಂಕಾ, ಏಕದಿನದಲ್ಲಿ ಸಿಂಹಳೀಯರಿಗೆ ಅಪಖ್ಯಾತಿ!

ಆಸ್ಟ್ರೇಲಿಯಾ ವಿರುದ್ದದ ಆರಂಬಿಕ 2 ಟೆಸ್ಟ್ ತಂಡಕ್ಕೆ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್ , ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಶ್ರೇಯಸ್ ಅಯ್ಯರ್, ಕೆಎಸ್ ಭರತ್, ಇಶಾನ್ ಕಿಶನ್, ಆರ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್  

Follow Us:
Download App:
  • android
  • ios