ಜನವರಿ 24 ರಿಂದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಸರಣಿ ಆರಂಭಗೊಳ್ಳಲಿದೆ. ಆರಂಭದಲ್ಲಿ 5 ಟಿ20 ಪಂದ್ಯ ನಡೆಯಲಿದ್ದು, ಇದಕ್ಕಾಗಿ ಬಲಿಷ್ಠ ತಂಡವನ್ನು ಪ್ರಕಟಿಸಲಾಗಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

ಮುಂಬೈ(ಜ.12): ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಜನವರಿ 24 ರಿಂದ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಆರಂಭಗೊಳ್ಳಲಿದೆ. 5 ಟಿ20, 3 ಏಕದಿನ, ಹಾಗೂ 2 ಟೆಸ್ಟ್ ಸರಣಿ ನಡೆಯಲಿದೆ. ಸದ್ಯ 5 ಟಿ20 ಪಂದ್ಯಗಳ ಸರಣಿಗೆ 16 ಆಟಗಾರನ್ನೊಳಗೊಂಡ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಬಲಿಷ್ಠ ತಂಡದಲ್ಲಿ ಇಬ್ಬರು ಕನ್ನಡಿಗರು ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಟಿ20 ಮಹಿಳಾ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ; ಕರ್ನಾಟಕದ ಇಬ್ಬರಿಗೆ ಸ್ಥಾನ!.

ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದ ಸಂಜು ಸಾಮ್ಸನ್ ಕೈಬಿಡಲಾಗಿದೆ. ಇನ್ನೂ ಹಾರ್ದಿಕ್ ಪಾಂಡ್ಯಾಗೆ ವಿಶ್ರಾಂತಿ ನೀಡಲಾಗಿದೆ. ಒಟ್ಟು 16 ಸದಸ್ಯರ ತಂಡ ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ಹಾಗೂ ಮೊಹಮ್ಮದ್ ಶಮಿ ತಂಡ ಕೂಡಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ತಂಡ ಮುನ್ನಡೆಸಿದರೆ, ರೋಹಿತ್ ಶರ್ಮಾ ಉಪನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಈ ಸರಣಿಯಿಂದಲೂ ಹಿರಿಯ ಕ್ರಿಕೆಟಿಗ ಧೋನಿ ಹೊರಗುಳಿದಿದ್ದಾರೆ. ಈ ಮೂಲಕ ಧೋನಿ ತಂಡ ಕೂಡಿಕೊಳ್ಳಬಹುದೆಂದು ನಿರೀಕ್ಷೆ ಮಾಡಿದ್ದ ಅಭಿಮಾನಿಗಳಿಗೆ ಮತ್ತೆ ನಿರಾಸೆಯಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ: 
ವಿರಾಟ್ ಕೊಹ್ಲಿ(ನಾಯಕ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್. ಶಿವಂ ದುಬೆ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ವಾಶಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್. 

ಜನವರಿ 24 ರಿಂದ ಮಾರ್ಚ್ 4ರ ವರೆಗೆ ಭಾರತ ತಂಡ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ.

Scroll to load tweet…