ಸೌತ್ ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ, ಕೆಎಲ್ ರಾಹುಲ್‌ಗೆ ಏಕದಿನ ನಾಯಕತ್ವ!
ಸೌತ್ ಆಫ್ರಿಕಾ ವಿರುದ್ದದ ಟೆಸ್ಟ್, ಏಕದಿನ ಹಾಗೂ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ನಿಗದಿತ ಓವರ್ ಕ್ರಿಕೆಟ್‌ನಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಇತ್ತ ಏಕದಿನದಲ್ಲಿ ಕೆಎಲ್ ರಾಹುಲ್‌ಗೆ ನಾಯಕತ್ವ ನೀಡಲಾಗಿದೆ.
ನವದೆಹಲಿ(ನ.30) ಸೌತ್ ಆಫ್ರಿಕಾ ವಿರುದ್ದದ 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯದ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ನಿಗದಿತ ಓವರ್ ಪಂದ್ಯದಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ನೀಡಲಾಗಿದೆ. ಇತ್ತ ಏಕದಿನಕ್ಕೆ ಕೆಎಲ್ ರಾಹುಲ್‌ಗೆ ನಾಯಕತ್ವ ನೀಡಲಾಗಿದೆ. ಇನ್ನು ಟಿ20 ಸರಣಿಗೆ ಸೂರ್ಯುಕುಮಾರ್ ಯಾದವ್ ನಾಯಕನಾಗಿ ಮುಂದುವರಿಯುತ್ತಿದ್ದಾರೆ. ವೇಗಿ ಮೊಹಮ್ಮದ್ ಶಮಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಲಭ್ಯತೆ ಸ್ಪಷ್ಟವಾಗಿಲ್ಲ.
ಏಕದಿನ ಮಾದರಿಗೆ ಸಂಜು ಸ್ಯಾಮ್ಸನ್ ಕಮ್‌ಬ್ಯಾಕ್ ಮಾಡಿದ್ದಾರೆ. ಸಾಯಿ ಸುದರ್ಶನ್, ತಿಲಕ್ ವರ್ಮಾ ಹಾಗೂ ರಜತ್ ಪಾಟಿದಾರ್ ಕೂಡ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ. ಐಸಿಸಿ ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದ ಯಜುವೇಂದ್ರ ಚಹಾಲ್ ಇದೀಗ ಏಕದಿನಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಏಕದಿನ ಹಾಗೂ ಟಿ20 ಸರಣಿಯಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಬಯಸಿ ಮನವಿ ಮಾಡಿದ್ದರು. ಹಿರಿಯ ಕ್ರಿಕೆಟಿಗರ ಮನವಿ ಪುರಸ್ಕರಿಸಿದ ಬಿಸಿಸಿಐ, ವಿಶ್ರಾಂತಿ ನೀಡಿದೆ.
ಇನ್ನೂ ಯಾವುದೇ ಒಪ್ಪಂದಕ್ಕೆ ಸಹಿ ಹಾಕಿಲ್ಲ, ಕೋಚ್ ಮುಂದುವರಿಕೆಗೆ ಟ್ವಿಸ್ಟ್ ನೀಡಿದ ದ್ರಾವಿಡ್!
ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಗೆ ಭಾರತ ತಂಡ
ಯಶಸ್ವಿ ಜೈಸ್ವಾಲ್, ಶುಬಮನ್ ಗಿಲ್, ರುತುರಾತ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಜಿತೇಶ್ ಶರ್ಮಾ, ರವೀಂದ್ರ ಜಡೇಜಾ, ವಾಶಿಂಗ್ಟನ್ ಸುಂದರ್, ರವಿ ಬಿಶ್ನೋಯ್, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ದೀಪಕ್ ಚಹಾರ್
ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ
ಕೆಎಲ್ ರಾಹುಲ್(ನಾಯಕ), ರುತುರಾತ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಅಕ್ಸರ್ ಪಟೇಲ್, ವಾಶಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಮುಕೇಶ್ ಕುಮಾರ್, ಅವೇಶ್ ಖಾನ್, ಅರ್ಶದೀಪ್ ಸಿಂಗ್, ದೀಪಕ್ ಚಹಾರ್
ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವೈಟ್‌ಬಾಲ್ ಸರಣಿಯಿಂದ ಬ್ರೇಕ್ ಬಯಸಿದ್ದೇಕೆ?
ಸೌತ್ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಶುಬಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಕೆಎಲ್ ರಾಹುಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ