Asianet Suvarna News Asianet Suvarna News

ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ತವರಿನ ಸರಣಿಯ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಭಾರತ ಪ್ರವಾಸ ಮಾಡಲಿದ್ದು, ಅದರ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ. 2022-23ರ ಭಾರತದ ಅಂತಾರಾಷ್ಟ್ರೀಯ ತವರಿನ ಋತು ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡುವ ಮೂಲಕ ಆರಂಭವಾಗಲಿದೆ. ಅದಾದ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ.

BCCI announces the schedule for the upcoming Australia and South Africa tour of India san
Author
Bengaluru, First Published Aug 3, 2022, 8:46 PM IST | Last Updated Aug 3, 2022, 9:00 PM IST

ಮುಂಬೈ (ಆ.3): ಮುಂದಿನ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ದದ ಟಿ20 ಸರಣಿ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಯ ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಬಿಡುಗಡೆ ಮಾಡಿದೆ. ಭಾರತದ ಅಂತರಾಷ್ಟ್ರೀಯ ತವರು ಋತುವಿನ 2022-23 ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ T20I ಸರಣಿಯೊಂದಿಗೆ ಪ್ರಾರಂಭವಾಗುತ್ತದೆ ಮತ್ತು ನಂತರ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಮತ್ತು ಏಕದಿನ ಸರಣಿ ನಡೆಯಲಿದೆ.ಮೊಹಾಲಿಯು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20ಗೆ ಆತಿಥ್ಯ ವಹಿಸಲಿದ್ದು, ನಾಗ್ಪುರ ಮತ್ತು ಹೈದರಾಬಾದ್ ಕ್ರಮವಾಗಿ ಎರಡು ಮತ್ತು ಮೂರನೇ ಪಂದ್ಯವನ್ನು ಆಯೋಜಿಸಲಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ತವರಿನ ಸರಣಿ ತಿರುವನಂತಪುರಂದಲ್ಲಿ ನಡೆಯಲಿರುವ ಟಿ20 ಪಂದ್ಯದ ಮೂಲಕ ಆರಂಭವಾಗಲಿದೆ. ಎರಡನೇ ಟಿ20 ಅನ್ನು ಗುವಾಹಟಿಯಲ್ಲಿ ಗಾಂಧಿ ಜಯಂತಿಯಂದು ಅಕ್ಟೋಬರ್ 2 ರಂದು ಆಡಲಾಗುತ್ತದೆ, ನಂತರ ಇಂದೋರ್‌ನಲ್ಲಿ ಕೊನೆಯ ಟಿ20 ಪಂದ್ಯ ನಡೆಯಲಿದೆ. ಪ್ರಸ್ತುತ ಭಾರತ ತಂಡ ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿದ್ದು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗಿಯಾಗಿದೆ. ಮೂರು ಪಂದ್ಯಗಳ ಅಂತ್ಯಕ್ಕೆ ಭಾರತ ತಂಡ 2-1 ಮುನ್ನಡೆ ಪಡೆದುಕೊಂಡಿದೆ.

BCCI announces the schedule for the upcoming Australia and South Africa tour of India san

ಮೂರು ಪಂದ್ಯಗಳ ಏಕದಿನ ಸರಣಿ: ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಅಕ್ಟೋಬರ್‌ 6 ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಲಕ್ನೋ ಸ್ಟೇಡಿಯಂನಲ್ಲಿ ನಡೆಯಲಿದ್ದರೆ, ರಾಂಚಿ ಹಾಗೂ ನವದೆಹಲಿಯಲ್ಲಿ ನಂತರದ ಎರಡು ಏಕದಿನ ಪಂದ್ಯಗಳು ನಡೆಯಲಿದೆ.

ಈ ಏಕದಿನ ಮತ್ತು ಟಿ20 ಸರಣಿಗಳು T20 ವಿಶ್ವಕಪ್ 2022 ಗಾಗಿ ತಂಡವನ್ನು ಖಚಿತಪಡಿಸಿಕೊಳ್ಳುವ ಅನ್ವೇಷಣೆಯಲ್ಲಿ ಭಾರತಕ್ಕೆ ಉತ್ತಮ ಅಭ್ಯಾಸ ನೀಡಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಕೂಡ ಭಾರತದಲ್ಲಿನ ವಿದೇಶ ಸರಣಿಯನ್ನು ಮೆಗಾ ಈವೆಂಟ್‌ನ ಪೂರ್ವಸಿದ್ಧತಾ ಪ್ರವಾಸವಾಗಿ ಪರಿಗಣಿಸಲಿವೆ. ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯ ಹಾಲಿ ಚಾಂಪಿಯನ್ ಆಗಿದ್ದು, ತನ್ನ ಅಂಗಳದಲ್ಲಿ ಪ್ರಶಸ್ತಿಯನ್ನು ಉಳಿಸಿಕೊಳ್ಳುವತ್ತ ಕಣ್ಣಿಟ್ಟಿದೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾವು ಯಾವುದೇ ಐಸಿಸಿ ಪಂದ್ಯಾವಳಿಯನ್ನು ಗೆದ್ದಿಲ್ಲ ಆದರೆ ಅವರು ಈ ಸಮಯದಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ತಂಡ ಎನಿಸಿದೆ.

Asia Cup 2022 ಟೂರ್ನಿಗೆ 15 ಆಟಗಾರರನ್ನೊಳಗೊಂಡ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಕಟ

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯನ್ನು ಭಾರತ ತಂಡ ಪ್ರಯೋಗದ ಭಾಗವಾಗಿ ನೋಡುವುದಿಲ್ಲ. ವಿಶ್ವಕಪ್‌ಗೆ ಪೂರ್ವಸಿದ್ಧತೆ ಮಾಡಿಕೊಳ್ಳುವ ದೃಷ್ಟಿಯಲ್ಲಿ ಈ ಸರಣಿಯತ್ತ ಗಮನ ನೀಡಲಿದೆ. ಕೆಎಲ್‌ ರಾಹುಲ್‌ ಕೆಲ ಸರಣಿಗೆ ಅಲಭ್ಯರಾಗಿರುವ ಕಾರಣ, ಟೀಮ್‌ ಇಂಡಿಯಾ ಇತ್ತೀಚಿನ ಟಿ20 ಪಂದ್ಯಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿದೆ. ಇಂಗ್ಲೆಂಡ್‌ ವಿರುದ್ಧ ಸರಣಿಯ ವೇಳೆ ಟೀಮ್‌ ಇಂಡಿಯಾ ರಿಷಭ್‌ ಪಂತ್‌ರನ್ನು ಮೇಲಿನ ಕ್ರಮಾಂಕದಲ್ಲಿ ಅಡಿತ್ತು. ಇನ್ನು ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಯಲ್ಲಿ ಸೂರ್ಯಕುಮಾರ್‌ ಯಾದವ್‌ಗೆ ಹೆಚ್ಚಿನ ಅವಕಾಶ ನೀಡಲಾಗಿದೆ. T20 ವಿಶ್ವಕಪ್ ಸಮೀಪಿಸುತ್ತಿರುವಾಗ, ಭಾರತವು ಮೆಗಾ ಈವೆಂಟ್‌ಗೆ ಸಿದ್ಧವಾದ ತಂಡವನ್ನು ಹೊಂದಿದೆ ಎನ್ನುವ ನಿಟ್ಟಿನಲ್ಲಿ ಗಮನ ನೀಡಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

WI vs Ind: ವಿಂಡೀಸ್‌ ವಿರುದ್ಧದ 3ನೇ ಪಂದ್ಯ ಗೆದ್ದ ಭಾರತ, ಸರಣಿಯಲ್ಲಿ ಮುನ್ನಡೆ ಸಾಧಿಸಿದ ಟೀಂ ಇಂಡಿಯಾ

ಏಷ್ಯಾಕಪ್‌ಗೆ ಅಣಿಯಾಗಿದೆ ಭಾರತ: ರೋಹಿತ್‌ ಶರ್ಮ ನೇತೃತ್ವದ ಟೀಮ್‌ ಇಂಡಿಯಾ ಏಷ್ಯಾ ಕಪ್‌ನಲ್ಲೂ ಆಡಲಿದೆ. ಶ್ರೀಲಂಕಾದ ಆತಿಥ್ಯದಲ್ಲಿ ಯುಎಇಯಲ್ಲಿ ನಡೆಯಲಿರುವ ಏಷ್ಯಾಕಪ್‌ ಟೂರ್ನಿ ಆಗಸ್ಟ್‌ 27 ರಿಂದ ಆರಂಭವಾಗಲಿದೆ. ಈ ಟೂರ್ನಿಯ ಆರಂಭಿಕ ಪಂದ್ಯದಲ್ಲಿಯೇ ಭಾರತ ತಂಡ ಪಾಕಿಸ್ತಾವವನ್ನು ಎದುರಿಸಲಿದ್ದರೆ, ಆತಿಥೇಯ ಶ್ರೀಲಂಕಾ ತಂಡ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಭಾರತ ಹಾಗೂ ಪಾಕಿಸ್ತಾನ ತಂಡಗಳು ಆಗಸ್ಟ್‌ 28 ರಂದು ದುಬೈನಲ್ಲಿ ಮುಖಾಮುಖಿಯಾಗಲಿದೆ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ ವೇಳೆ ಪಾಕಿಸ್ತಾನ ವಿರುದ್ಧ ಭಾರತ ಸೋಲು ಕಂಡಿತ್ತು. ಭಾರತ ಮತ್ತು ಪಾಕಿಸ್ತಾನ ಈ ವರ್ಷ ಏಷ್ಯಾಕಪ್‌ನ ಫೈನಲ್‌ನಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. 15ನೇ ಆವೃತ್ತಿ ಟಿ20 ಮಾದರಿಯಲ್ಲಿ ನಡೆಯಲಿದೆ. ಫೈನಲ್‌ ಪಂದ್ಯವು ಸೆಪ್ಟೆಂಬರ್ 11 ರಂದು ನಡೆಯಲಿದೆ. ಏಷ್ಯಾ ಕಪ್ ಅನ್ನು ಕೊನೆಯದಾಗಿ 2018 ರಲ್ಲಿ ಆಡಲಾಗಿತ್ತು.

Latest Videos
Follow Us:
Download App:
  • android
  • ios