Asianet Suvarna News Asianet Suvarna News

ಟೀಂ ಇಂಡಿಯಾಗೆ ಗೌತಮ್‌ ಗಂಭೀರ್‌ ಹೆಡ್‌ ಕೋಚ್‌? ಬಿಸಿಸಿಐ ಆಸಕ್ತಿ..!

2007ರ ಟಿ20 ವಿಶ್ವಕಪ್‌, 2011ರ ವಿಶ್ವಕಪ್‌ ವಿಜೇತ ಭಾರತ ತಂಡದಲ್ಲಿದ್ದ ಗಂಭೀರ್‌ ಈ ವರೆಗೆ ಯಾವುದೇ ಅಂತಾರಾಷ್ಟ್ರೀಯ, ದೇಸಿ ತಂಡಕ್ಕೆ ಕೋಚ್‌ ಅಗಿಲ್ಲ. 2022, 2023ರಲ್ಲಿ ಲಖನೌ ಮೆಂಟರ್‌ ಆಗಿದ್ದ ಅವರು, ಈ ಬಾರಿ ಕೆಕೆಆರ್‌ ಮೆಂಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿ20 ವಿಶ್ವಕಪ್‌ ಬಳಿಕ ಬಿಸಿಸಿಐ ಹೊಸ ಕೋಚ್‌ನ ನೇಮಿಸಲಿದ್ದು, ಅರ್ಜಿ ಸಲ್ಲಿಕೆಗೆ ಮೇ 27ರ ಗಡುವು ವಿಧಿಸಿದೆ.

BCCI approaches Gautam Gambhir to become Team India head coach kvn
Author
First Published May 18, 2024, 10:12 AM IST

ನವದೆಹಲಿ: ಟೀಂ ಇಂಡಿಯಾದ ನೂತನ ಕೋಚ್‌ ಆಗಲು ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಅವರನ್ನು ಬಿಸಿಸಿಐ ಸಂಪರ್ಕಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಅವರೊಂದಿಗೆ ಈಗಾಗಲೇ ಬಿಸಿಸಿಐ ಅಧಿಕಾರಿಗಳು ಮಾತುಕತೆ ನಡೆಸಿದ್ದು, ಐಪಿಎಲ್‌ ಬಳಿಕ ಈ ಬಗ್ಗೆ ಅಂತಿಮ ಸುತ್ತಿನ ಮಾತುಕತೆ ನಡೆಯುವ ನಿರೀಕ್ಷೆಯಿದೆ. 

2007ರ ಟಿ20 ವಿಶ್ವಕಪ್‌, 2011ರ ವಿಶ್ವಕಪ್‌ ವಿಜೇತ ಭಾರತ ತಂಡದಲ್ಲಿದ್ದ ಗಂಭೀರ್‌ ಈ ವರೆಗೆ ಯಾವುದೇ ಅಂತಾರಾಷ್ಟ್ರೀಯ, ದೇಸಿ ತಂಡಕ್ಕೆ ಕೋಚ್‌ ಅಗಿಲ್ಲ. 2022, 2023ರಲ್ಲಿ ಲಖನೌ ಮೆಂಟರ್‌ ಆಗಿದ್ದ ಅವರು, ಈ ಬಾರಿ ಕೆಕೆಆರ್‌ ಮೆಂಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿ20 ವಿಶ್ವಕಪ್‌ ಬಳಿಕ ಬಿಸಿಸಿಐ ಹೊಸ ಕೋಚ್‌ನ ನೇಮಿಸಲಿದ್ದು, ಅರ್ಜಿ ಸಲ್ಲಿಕೆಗೆ ಮೇ 27ರ ಗಡುವು ವಿಧಿಸಿದೆ.

ಮುಂಬರುವ ಜೂನ್ 01ರಿಂದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಆರಂಭವಾಗಲಿದ್ದು, ಟಿ20 ವಿಶ್ವಕಪ್ ಟೂರ್ನಿಯು ಮುಗಿಯುತ್ತಿದ್ದಂತೆಯೇ ರಾಹುಲ್ ದ್ರಾವಿಡ್ ಅವರ ಟೀಂ ಇಂಡಿಯಾ ಹೆಡ್ ಕೋಚ್ ಒಪ್ಪಂದ ಅವಧಿ ಮುಕ್ತಾಯವಾಗಲಿದೆ. ದ್ರಾವಿಡ್ ಮತ್ತೊಮ್ಮೆ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ಮುಂದುವರೆಯಲು ನಿರಾಸಕ್ತಿ ತೋರಿದ್ದಾರೆ. ಹೀಗಾಗಿ ಬಿಸಿಸಿಐ ಹೊಸ ಹೆಡ್ ಕೋಚ್‌ಗಾಗಿ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಗೌತಮ್ ಗಂಭೀರ್ ಮೆಂಟರ್ ಆಗಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡವು ಇದೀಗ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮೊದಲ ತಂಡವಾಗಿ ಪ್ಲೇ ಆಫ್‌ಗೆ ಎಂಟ್ರಿಕೊಟ್ಟಿದೆ. ಇನ್ನೊಂದೆಡೆ ಟೀಂ ಇಂಡಿಯಾ ಹೆಡ್ ಕೋಚ್ ಆಗಲು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಜಸ್ಟಿನ್ ಲ್ಯಾಂಗರ್, ನ್ಯೂಜಿಲೆಂಡ್‌ನ ಮಾಜಿ ಕ್ರಿಕೆಟಿಗ ಸ್ಟಿಫನ್ ಪ್ಲೆಮಿಂಗ್ ಒಲವು ತೋರಿದ್ದಾರೆ ಎಂದು ವರದಿಯಾಗಿದೆ.

IPL 2024 ಬೆಂಗ್ಳೂರಲ್ಲಿಂದು ಆರ್‌ಸಿಬಿ vs ಚೆನ್ನೈ ಬಹುನಿರೀಕ್ಷಿತ ನಾಕೌಟ್‌ ಕದನ

ಭಾರತ-ಬಾಂಗ್ಲಾ ಅಭ್ಯಾಸ ಪಂದ್ಯ ಜೂನ್‌ 1ಕ್ಕೆ ನಿಗದಿ

ದುಬೈ: ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಏಕೈಕ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಳ್ಳಲಿದೆ. ಜೂ.1ರಂದು ಟೀಂ ಇಂಡಿಯಾ, ಬಾಂಗ್ಲಾದೇಶ ವಿರುದ್ಧ ಸೆಣಸಾಡಲಿದೆ. ಪಂದ್ಯದ ಸ್ಥಳ, ಸಮಯ ಇನ್ನಷ್ಟೇ ನಿಗದಿಯಾಗಬೇಕಿದೆ.

ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ 20 ತಂಡಗಳ ಪೈಕಿ 17 ತಂಡಗಳು ಮೇ 27ರಿಂದ ಜೂ.1ರ ವರೆಗೆ ಅಭ್ಯಾಸ ಪಂದ್ಯಗಳನ್ನಾಡಲಿವೆ. ಇಂಗ್ಲೆಂಡ್‌, ಪಾಕಿಸ್ತಾನ, ನ್ಯೂಜಿಲೆಂಡ್‌ ತಂಡಗಳು ಯಾವುದೇ ಅಭ್ಯಾಸ ಪಂದ್ಯಗಳನ್ನಾಡುವುದಿಲ್ಲ. ಭಾರತ ತಂಡ ಟೂರ್ನಿಯ ಮೊದಲ ಪಂದ್ಯದಲ್ಲಿ ಜೂ.5ಕ್ಕೆ ಐರ್ಲೆಂಡ್‌ ವಿರುದ್ಧ ಸೆಣಸಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಎದುರು ಗೆದ್ರು ಆರ್‌ಸಿಬಿ ಪ್ಲೇ ಆಫ್‌ಗೇರೋದು ಡೌಟ್..! ಇಲ್ಲಿದೆ ಹೊಸ ಅಪ್ಡೇಟ್‌

ಧೋನಿ ಇನ್ನೂ ಎರಡು ಆಡುವ ವಿಶ್ವಾಸವಿದೆ: ಹಸ್ಸಿ

ಬೆಂಗಳೂರು: ಎಂ.ಎಸ್‌.ಧೋನಿ ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಐಪಿಎಲ್‌ನಲ್ಲಿ ಇನ್ನೂ ಎರಡು ವರ್ಷ ಆಡುವ ವಿಶ್ವಾಸವಿದೆ ಎಂದು ತಂಡದ ಬ್ಯಾಟಿಂಗ್‌ ಕೋಚ್‌ ಮೈಕಲ್‌ ಹಸ್ಸಿ ಹೇಳಿದ್ದಾರೆ. 42 ವರ್ಷದ ಧೋನಿ ಈ ಆವೃತ್ತಿಯ ಬಳಿಕ ನಿವೃತ್ತಿ ಘೋಷಿಸಬಹುದು ಎನ್ನುವ ನಿರೀಕ್ಷೆ ಇದೆಯಾದರೂ, ಹಸ್ಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. 

‘ಧೋನಿ ಇನ್ನೂ 2 ವರ್ಷ ಆಡಬಹುದು ಎನ್ನುವ ವಿಶ್ವಾಸವಿದೆ. ಅವರು ಉತ್ತಮವಾಗಿ ಬ್ಯಾಟ್‌ ಮಾಡುತ್ತಿದ್ದಾರೆ. ಪ್ರತಿ ಪಂದ್ಯಕ್ಕೂ ಉತ್ತಮ ಸಿದ್ಧತೆ ನಡೆಸುತ್ತಾರೆ. ಅವರ ದೇಹ ಸ್ಪಂದಿಸಿದರೆ ಇನ್ನೆರಡು ವರ್ಷ ಆಡಬಹುದು. ಐಪಿಎಲ್‌ನಲ್ಲಿ ಮುಂದುವರಿಯಬೇಕೋ ಬೇಡವೋ ಎನ್ನುವ ನಿರ್ಧಾರ ಅವರದ್ದೇ ಆಗಿರಲಿದೆ’ ಎಮದು ಹಸ್ಸಿ ಹೇಳಿದ್ದಾರೆ.
 

Latest Videos
Follow Us:
Download App:
  • android
  • ios