ಅಹಮದಾಬಾದ್‌ನಲ್ಲಿ ಬಿಸಿಸಿಐ ವಾಮಾಚಾರ ಮಾಡಿ ಪಾಕಿಸ್ತಾನವನ್ನು ಸೋಲಿಸಿದೆ..!
2023ರ ಏಕದಿನ ವಿಶ್ವಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯ ಎನಿಸಿಕೊಂಡಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ವೇದಿಕೆಯಾಗಿತ್ತು. ಈ ಪಂದ್ಯವು ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆಯಿದೆ ಎಂದು ಕ್ರಿಕೆಟ್ ಅಭಿಮಾನಿಗಳು ಭಾವಿಸಿದ್ದರು.
ಬೆಂಗಳೂರು(ಅ.18): ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡವು ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬದ್ದ ಎದುರಾಳಿ ಭಾರತ ಎದುರು ಹೀನಾಯ ಸೋಲು ಅನುಭವಿಸಿದೆ. ಇನ್ನು ಈ ಮೂಲಕ ನೆರೆಯ ಪಾಕಿಸ್ತಾನ ಎದುರು ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವು ತನ್ನ ಗೆಲುವಿನ ಪರಂಪರೆಯನ್ನು ಮುಂದುವರೆಸಿದ್ದು, ಸತತ ಎಂಟನೇ ಬಾರಿಗೆ ಭಾರತ ತಂಡವು ಪಾಕ್ ಎದುರು ಗೆಲುವಿನ ಕೇಕೆ ಹಾಕುವಲ್ಲಿ ಸಫಲವಾಗಿದೆ.
2023ರ ಏಕದಿನ ವಿಶ್ವಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯ ಎನಿಸಿಕೊಂಡಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ವೇದಿಕೆಯಾಗಿತ್ತು. ಈ ಪಂದ್ಯವು ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆಯಿದೆ ಎಂದು ಕ್ರಿಕೆಟ್ ಅಭಿಮಾನಿಗಳು ಭಾವಿಸಿದ್ದರು. ಆದರೆ ಟೀಂ ಇಂಡಿಯಾ ಬೌಲರ್‌ಗಳ ಸಂಘಟಿತ ಪ್ರದರ್ಶನದಿಂದ ಪ್ರದರ್ಶನಕ್ಕೆ ತತ್ತರಿಸಿದ ಪಾಕಿಸ್ತಾನ ತಂಡವು ಕೇವಲ 191 ರನ್‌ಗಳಿಗೆ ಸರ್ವಪತನ ಕಂಡಿತು. ಇನ್ನು ಸಾಧಾರಣ ಗುರಿ ಬೆನ್ನತ್ತಿದ ಟೀಂ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಸಿಡಿಲಬ್ಬರದ ಅರ್ಧಶತಕ ಸಿಡಿಸುವ ಮೂಲಕ ಇನ್ನೂ ಸುಮಾರು 20 ಓವರ್ ಬಾಕಿ ಇರುವಂತೆಯೇ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದರು.
'ಟೀಂ ಇಂಡಿಯಾವನ್ನು ಸೋಲಿಸಿದ್ರೆ ನಿಮ್ಮ ಜತೆ ಡೇಟ್ ಮಾಡ್ತೇನೆ': ಬಾಂಗ್ಲಾ ಕ್ರಿಕೆಟಿಗರಿಗೆ ಪಾಕ್ ನಟಿಯ ಬೋಲ್ಡ್ ಆಫರ್
ಇನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ಹೀನಾಯ ಪ್ರದರ್ಶನದ ಕುರಿತಂತೆ ಪಾಕ್ ಮಾಜಿ ಕ್ರಿಕೆಟಿಗರು ಕಟು ಶಬ್ದಗಳಿಂದ ಟೀಕಿಸಿದ್ದಾರೆ. ಇನ್ನು ಇವೆಲ್ಲದರ ನಡುವೆ ಕೆಲವು ನೆಟ್ಟಿಗರು ಎಲ್ಲರೂ ಹುಬ್ಬೇರಿಸುವಂತಹ ಆರೋಪ ಮಾಡಿದ್ದಾರೆ. ಭಾರತ ತಂಡವು ಪಾಕಿಸ್ತಾನ ವಿರುದ್ದ ಅಹಮದಾಬಾದ್‌ನಲ್ಲಿ ನಡೆದ ಪಂದ್ಯ ಗೆಲ್ಲಲು ವಾಮಾಚಾರದ ಮೊರೆ ಹೋಗಿದೆ ಎನ್ನುವ ಆರೋಪ ಮಾಡಿದ್ದಾರೆ.
ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡವು ಮೇಲ್ನೋಟಕ್ಕೆ ಸಾಕಷ್ಟು ಬಲಾಢ್ಯ ತಂಡವಾಗಿ ಗುರುತಿಸಿಕೊಂಡಿದ್ದು, ಸೆಮೀಸ್‌ಗೇರುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿಕೊಂಡಿದೆ. ನಿರೀಕ್ಷೆಗೆ ತಕ್ಕಂತೆಯೇ ಪಾಕಿಸ್ತಾನ ತಂಡವು 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಾನಾಡಿದ ಮೊದಲೆರಡು ಪಂದ್ಯಗಳನ್ನು ಗೆದ್ದು ಬೀಗುತ್ತಿತ್ತು. ಆದರೆ ಭಾರತ ಎದುರಿನ ಪಾಕಿಸ್ತಾನ ತಂಡದ ಪ್ರದರ್ಶನ ಸಾಕಷ್ಟು ಕಳವಳಕ್ಕೆ ಕಾರಣವಾಗಿದೆ ಎಂದು ಪಾಕ್ ಮಾಜಿ ನಾಯಕ ವಾಸೀಂ ಅಕ್ರಂ ತಮ್ಮ ಅಸಮಾಧಾನ ಹೊರಹಾಕಿದ್ದರು.
ICC World Cup 2023: ಕಿವೀಸ್‌ಗೂ ಶಾಕ್ ನೀಡುತ್ತಾ ಆಫ್ಘನ್?
ಒಂದು ಹಂತದಲ್ಲಿ ಉತ್ತಮ ಆರಂಭ ಪಡೆದು ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಾ ಸಾಗಿದ್ದ ಪಾಕಿಸ್ತಾನ ತಂಡವು ನೋಡನೋಡುತ್ತಿದ್ದಂತೆಯೇ ನಾಟಕೀಯ ಕುಸಿತ ಕಂಡಿತು. ಪಾಕಿಸ್ತಾನ ತಂಡವು ಕೇವಲ 36 ರನ್ ಅಂತರದಲ್ಲಿ ಕೊನೆಯ 8 ವಿಕೆಟ್ ಕಳೆದುಕೊಳ್ಳುವ ಮೂಲಕ ಕನಿಷ್ಠ 200 ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ಈ ಕಾರಣಕ್ಕಾಗಿಯೇ ಪಾಕಿಸ್ತಾನದ ಹಲವು ನೆಟ್ಟಿಗರು ಅಹಮದಾಬಾದ್‌ನಲ್ಲಿ ಪಂದ್ಯ ಗೆಲ್ಲಲು ಬಿಸಿಸಿಐ ವಾಮಾಚಾರ ಮಾಡಿದೆ ಎನ್ನುವ ಗಂಭೀರ ಆರೋಪ ಮಾಡಲಾರಂಭಿಸಿದ್ದಾರೆ.
ಇನ್ನು ಈ ಕುರಿತಂತೆ ಟ್ವೀಟ್ ಮಾಡಿರುವ ಹರೀಮ್ ಶಾ ಎನ್ನುವವರು, "ಹಲವು ಬಲ್ಲ ಮೂಲಗಳ ಪ್ರಕಾರ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಪ್ರಖ್ಯಾತ ಮಂತ್ರವಾದಿ/ತಂತ್ರಿ ಕಾರ್ತಿಕ್ ಚಕ್ರವರ್ತಿಯವರನ್ನು ಬಳಸಿಕೊಂಡು ಪಾಕ್ ವಿರುದ್ದ ವಾಮಾಚಾರ ಮಾಡಲು ನೇಮಕ ಮಾಡಿದೆ. ಈ ಬಗ್ಗೆ ಐಸಿಸಿ ತನಿಖೆ ಮಾಡಬೇಕು. ಇದನ್ನಂತೂ ಒಪ್ಪಲು ಸಾಧ್ಯವೇ ಇಲ್ಲ ಎಂದು ಟ್ವೀಟ್ ಮಾಡಿ ಅಸಮಾಧಾನ" ಹೊರಹಾಕಿದ್ದಾರೆ
ಭಾರತ ವಿರುದ್ದ ಪಾಕಿಸ್ತಾನ ತಂಡವು ಹೀನಾಯ ಸೋಲು ಅನುಭವಿಸಿದ್ದನ್ನೂ ಇನ್ನೂ ಪಾಕಿಗಳು ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ಕಾರಣಕ್ಕಾಗಿಯೇ ಸೋಲಿಗೆ ಕುಂಟು ನೆವ ಹುಡುಕುತ್ತಿದ್ದಾರೆ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ.