ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!
ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಆರೋಗ್ಯದಲ್ಲಿ ಏರುಪೇರು| ಕೋಲ್ಕತ್ತಾದ ಆಸ್ಪತ್ರೆಗೆ ದಾಖಲು| ಶನಿವಾರ ಸಂಜೆಯೊಳಗಾಗಿ ಆ್ಯಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ
ಕೋಲ್ಕತ್ತಾ(ಜ.02): ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಶನಿವಾರ ಅಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗೂಲಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.
ಲಭ್ಯವಾದ ಮಾಹಿತಿ ಅನ್ವಯ ಸೌರವ್ ಗಂಗೂಲಿಗೆ ಹೃದಯಾಘಾತ ಆಗಿದೆ ಎನ್ನಲಾಗಿದೆ. ಇಂದು ಕೋಲ್ಕತ್ತಾದವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿರುವ ದಾದಾಗೆ ಶನಿವಾರ ಸಂಜೆಯೊಳಗಾಗಿ ಆ್ಯಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿಲಿದ್ದಾರೆ ಎಂದು ಹೇಳಲಾಗಿದೆ.
ಶನಿವಾರ ಮುಂಜಾನೆ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಗಂಗೂಲಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೋಲ್ಕತ್ತಾದ ವುಡ್‌ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಜಿಯೋಪ್ಲ್ಯಾಸ್ಟಿ ನಡೆಸಿದ ಬಳಿಕ ಗಂಗೂಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಭಾರತ ತಂಡದ ಎಡಗೈ ಬ್ಯಾಟ್ಸ್‌ಮನ್ ಆಗಿದ್ದ ಸೌರವ್ ಗಂಗೂಲಿ 113 ಟೆಸ್ಟ್ ಪಂದ್ಯಗಳಲ್ಲಿ 42.18ರ ಸರಾಸರಿಯಲ್ಲಿ ಒಟ್ಟು 7212 ರನನ್ ಗಳಿಸಿದ್ದಾರೆ. 311 ಏಕದಿನ ಪಂದ್ಯಗಳಲ್ಲಿ 40.73ರ ಸರಾಸರಿಯಂತೆ 11363 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ 59 ಪಂದ್ಯಗಳಲ್ಲಿ 1349 ರನ್ ಬಾರಿಸಿದದ್ದಾರೆ. ಟೆಸ್ಟ್‌ನಲ್ಲಿ 16, ಏಕದಿನದಲ್ಲಿ 22 ಶತಕಗಳನ್ನು ಬಾರಿಸಿದ್ದಾರೆ.