ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಮತ್ತೊಮ್ಮೆ ಹೃದಯ ಸಂಬಂಧಿತ ಸಮಸ್ಯೆ ಕಾಣಿಸಿಕೊಂಡಿದ್ದು ಒಂದು(ಜ.28) ದಾದಾ ಮತ್ತೊಮ್ಮೆ ಹೃದಯಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಕೋಲ್ಕತಾ(ಜ.28): ಶಸ್ತ್ರಚಿಕಿತ್ಸೆಗೆ ಒಳಗಾಗಿ ಒಂದು ತಿಂಗಳೊಳಗೆ ಬಿಸಿಸಿಐ ಅಧ್ಯಕ್ಷ, ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಬುಧವಾರ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮ್ಮ ಆರೋಗ್ಯ ತಪಾಸಣೆಗೆ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಆದರೆ ಗಂಗೂಲಿಗೆ ಬುಧವಾರ ಮತ್ತೆ ಎದೆನೋವು ಕಾಣಿಸಿಕೊಂಡ ಕಾರಣ, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಝೀರೋ ಟ್ರಾಫಿಕ್‌ ಮೂಲಕ ಗಂಗೂಲಿಯನ್ನು ಅವರ ನಿವಾಸದಿಂದ ಆಸ್ಪತ್ರೆಗೆ ಕರೆದೊಯ್ಯಲು ಕೋಲ್ಕತಾ ಪೊಲೀಸರು ವ್ಯವಸ್ಥೆ ಕಲ್ಪಿಸಿದ್ದರು. ಗಂಗೂಲಿಯನ್ನು ಹಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಗಿದ್ದು, ಅವರ ಎದೆಬಡಿತ, ಬಿಪಿ ಸೇರಿದಂತೆ ಪ್ರಮಖ ನಿಯತಾಂಕಗಳು ಸ್ಥಿರವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಬುಧವಾರ ಅವರು ಆಸ್ಪತ್ರೆಯಲ್ಲೇ ಉಳಿದುಕೊಂಡಿದ್ದು, ಗುರುವಾರ ಕರ್ನಾಟಕದ ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿಅನುಪಸ್ಥಿತಿಯಲ್ಲಿ ಹೃದಯದಲ್ಲಿ ಮತ್ತೊಂದು ಸ್ಟೆಂಟ್‌ ಅಳವಡಿಕೆ ಮಾಡಲಾಗುತ್ತದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸೌರವ್ ಗಂಗೂಲಿ ಮೆಡಿಕಲ್ ಬುಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆ, ಹೇಗಿದೆ ದಾದಾ ಆರೋಗ್ಯ?

3 ವಾರಗಳ ಹಿಂದೆ ಲಘು ಹೃದಯಾಘಾತ ಹಿನ್ನೆಲೆಯಲ್ಲಿ ಗಂಗೂಲಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರ ಹೃದಯಲ್ಲಿ 3 ಬ್ಲಾಕೇಜ್‌ಗಳಿಗದ್ದು, ಒಂದನ್ನು ತೆಗೆದು ಸ್ಟೆಂಟ್‌ ಅಳವಡಿಸಲಾಗಿದೆ. ಮತ್ತೊಂದು ಸ್ಟೆಂಟ್‌ ಅಳವಡಿಕೆ ಅಗತ್ಯವಾಗಬಹುದು ಎಂದು ವೈದ್ಯರು ತಿಳಿಸಿದ್ದರು.