ನವದೆಹಲಿ(ಜೂ.16): ಈ ವರ್ಷದ ಏಷ್ಯಾಕಪ್ ಶ್ರೀಲಂಕಾಕ್ಕೆ ಸ್ಥಳಾಂತರವಾಗಿರುವ ವರದಿಯ ಬಗ್ಗೆ ಬಿಸಿಸಿಐ ಅಚ್ಚರಿ ವ್ಯಕ್ತಪಡಿಸಿದ್ದು, ಈ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ ಎಂದು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ.

ಇದೇ ವೇಳೆ ಏಷ್ಯಾಕಪ್‌ಗಾಗಿ ಐಪಿಎಲ್ ಟೂರ್ನಿಯನ್ನು ಬಿಟ್ಟುಕೊಡಲು ನಾವು ಸಿದ್ದವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಸೆಪ್ಟೆಂಬರ್‌ನಲ್ಲಿ ಏಷ್ಯಾಕಪ್ ನಡೆಯಬೇಕಿದ್ದು, ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮಿಲಿಯನ್ ಡಾಲರ್‌ ಟೂರ್ನಿಯಾದ ಐಪಿಎಲ್ ನಡೆಸಲಿ ಬಿಸಿಸಿಐ ಸಿದ್ಧತೆ ನಡೆಸುತ್ತಿದೆ.

2020ರ ಏಷ್ಯಾಕಪ್ ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಿಕೊಂಡಿತ್ತು. ಆದರೆ ಪಾಕಿಸ್ತಾನದಲ್ಲಿ ಏಷ್ಯಾಕಪ್ ಟೂರ್ನಿ ನಡೆದರೆ ಟೀಂ ಇಂಡಿಯಾ ಪಾಲ್ಗೊಳ್ಳುದಿಲ್ಲ ಎಂದು ಖಡಾಖಂಡಿತವಾಗಿ ತಿಳಿಸಿತ್ತು. ಇದರ ಬೆನ್ನಲ್ಲೇ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಆತಿಥ್ಯ ವಹಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ಹಕ್ಕನ್ನು ಬಿಟ್ಟುಕೊಟ್ಟಿದೆ ಎಂದು ವರದಿಯಾಗಿತ್ತು. 

ಸೆಪ್ಟೆಂಬರ್ 26ರಿಂದ ನವೆಂಬರ್ 08ರ ವರೆಗೂ ಐಪಿ​ಎಲ್‌?

ಕೊರೋನಾ ವೈರಸ್‌ ಭೀತಿಯಿಂದಾಗಿ ಐಪಿಎಲ್ ಟೂರ್ನಿ ಆಯೋಜನೆ ಆರಂಭದಿಂದಲೇ ಅನಿಶ್ಚಿತತೆಯಿಂದಲೇ ಕೂಡಿದೆ. ಮಾರ್ಚ್ 29ರಿಂದ ಆರಂಭವಾಗಬೇಕಿದ್ದ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಲಾಕ್‌ಡೌನ್‌ನಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಬಿಸಿಸಿಐ ಖಾಲಿ ಮೈದಾನದಲ್ಲಿಯಾದರೂ ಟೂರ್ನಿ ಆಯೋಜಿಸಲು ಹಠ ತೊಟ್ಟಿದೆ