Asianet Suvarna News Asianet Suvarna News

BCCI ಐತಿಹಾಸಿಕ ತೀರ್ಮಾನ; ಭಾರತ ಪುರುಷ-ಮಹಿಳಾ ಕ್ರಿಕೆಟಿಗರಿಗೆ ಸಮಾನ ಸಂಭಾವನೆ..!

ಭಾರತ ಮಹಿಳಾ ಕ್ರಿಕೆಟಿಗರಿಗೆ ಗುಡ್ ನ್ಯೂಸ್ ನೀಡಿದ ಬಿಸಿಸಿಐ
ಪುರುಷರಷ್ಟೇ ಸಮಾನ ವೇತನ ನೀಡುವ ಮಹತ್ವದ ನಿರ್ಧಾರ ಪ್ರಕಟಿಸಿದ ಜಯ್ ಶಾ
ಇತ್ತೀಚೆಗಷ್ಟೇ 7ನೇ ಏಷ್ಯಾಕಪ್ ಟ್ರೋಫಿ ಜಯಿಸಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡ

BCCI secretary Jay Shah Announce India men and women cricketers to get equal match fee kvn
Author
First Published Oct 27, 2022, 1:49 PM IST

ಮುಂಬೈ(ಅ.27): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ(ಅ.27) ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪುರುಷರ ಕ್ರಿಕೆಟಿಗರು ಪಡೆದಷ್ಟೇ ಸಂಭಾವನೆಯನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಡೆಯಲಿದ್ದಾರೆ. ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಪುರುಷ ಹಾಗೂ ಮಹಿಳಾ ಆಟಗಾರ್ತಿಯರಿಗೆ ಸಮಾನ ಪಂದ್ಯದ ಸಂಭಾವನೆ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

ಭಾರತ ಪುರುಷ ತಂಡದ ಆಟಗಾರರು ಪಡೆದಷ್ಟೇ ಮಹಿಳಾ ಆಟಗಾರರು ಪ್ರತಿ ಟೆಸ್ಟ್‌ ಪಂದ್ಯಕ್ಕೆ 15 ಲಕ್ಷ ರುಪಾಯಿ, ಪ್ರತಿ ಏಕದಿನ ಪಂದ್ಯಕ್ಕೆ 6 ಲಕ್ಷ ರುಪಾಯಿ ಹಾಗೂ ಪ್ರತಿ ಟಿ20 ಪಂದ್ಯಕ್ಕೆ ತಲಾ 3 ಲಕ್ಷ ರುಪಾಯಿಗಳನ್ನು ಪಡೆಯಲಿದ್ದಾರೆ. ಬಿಸಿಸಿಐ ಜಯ್ ಶಾ ಸರಣಿ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 7ನೇ ಬಾರಿಗೆ ಏಷ್ಯಾಕಪ್ ಟೂರ್ನಿಯನ್ನು ಗೆದ್ದು ಬೀಗಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಲಿಂಗ ತಾರತಮ್ಯಕ್ಕೆ ಕಡಿವಾಣಹಾಕಲು ಬಿಸಿಸಿಐ ಮೊದಲ ಹೆಜ್ಜೆಯಿಟ್ಟಿರುವುದನ್ನು ತಿಳಿಸಲು ನಾವು ಹರ್ಷಿತರಾಗಿದ್ದೇವೆ. ನಾವೀಗ ಮಹಿಳಾ ಕ್ರಿಕೆಟಿಗರಿಗರಿಗೂ ಸಮಾನ ವೇತನ ನೀಡಲು ತೀರ್ಮಾನಿಸಿದ್ದೇವೆ. ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ಸಂಭಾವನೆಯು ಸಮಾನವಾಗಿರಲಿದೆ. ನಾವೂ ಹೊಸ ತಲೆಮಾರಿನಲ್ಲಿ ಭಾರತ ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆ ಸಾಧಿಸಿದ್ದೇವೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.

ಪ್ರಾಕ್ಟಿಸ್‌ ನಂತರ ಸರಿಯಾದ ಊಟ ಸಿಗ್ತಿಲ್ಲ: ICC ಆತಿಥ್ಯದ ಬಗ್ಗೆ ಕೋಪಗೊಂಡ ಟೀಂ ಇಂಡಿಯಾ

ಬಿಸಿಸಿಐನ ಮಹಿಳಾ ಕ್ರಿಕೆಟಿಗರು, ಇದೀಗ ಭಾರತ ಪುರುಷ ಕ್ರಿಕೆಟಿಗರು ಪಡೆಯವಷ್ಟು ಪಂದ್ಯದ ಸಂಭಾವನೆಯನ್ನು ಪಡೆಯಲಿದ್ದಾರೆ. ಟೆಸ್ಟ್‌ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿ, ಏಕದಿನ ಕ್ರಿಕೆಟ್‌ಗೆ 6 ಲಕ್ಷ ರುಪಾಯಿ ಹಾಗೂ ಟಿ20 ಪಂದ್ಯವೊಂದಕ್ಕೆ 3 ಲಕ್ಷ ರುಪಾಯಿ ಪಡೆಯಲಿದ್ದಾರೆ. ಮಹಿಳಾ ಕ್ರಿಕೆಟಿಗರಿಗೆ ವೇತನ ಸಮಾನತೆ ನನ್ನ ಬದ್ದತೆಯಾಗಿದ್ದು, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು, ಜಯ್ ಹಿಂದ್ ಎಂದು ಜಯ್ ಶಾ ಟ್ವೀಟ್ ಮಾಡಿ ಈ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.

Follow Us:
Download App:
  • android
  • ios