Asianet Suvarna News Asianet Suvarna News

ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ಸರಣಿಗೆ ಟೀಂ ಇಂಡಿಯಾ ಪ್ರಕಟ, ಹಾರ್ದಿಕ್‌ಗೆ ನಾಯಕತ್ವ!

ಟಿ20 ವಿಶ್ವಕಪ್ ಟೂರ್ನಿ ನಡುವೆ ಬಿಸಿಸಿಐ ಮುಂಬರುವ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ನಡುವಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಿದೆ. ಕೆಲ ಮಹತ್ತರ ಬದಲಾವಣೆಗಳನ್ನೂ ಮಾಡಿದೆ. ಈ ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕರಾಗಿದ್ದಾರೆ, ಚೊಚ್ಚಲ ಬಾರಿಗೆ ಯಶ್ ದಯಾಳ್ ತಂಡ ಸೇರಿಕೊಂಡಿದ್ದಾರೆ.
 

BCCI Selection Committee announces team India squad for upcoming series against New Zealand and Bangladesh ckm
Author
First Published Oct 31, 2022, 7:54 PM IST

ಮುಂಬೈ(ಅ.31): ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಈ ಬಾರಿ ಕೆಲ ಮಹತ್ವದ ಬದಲಾವಣೆಗಳನ್ನು ಬಿಸಿಸಿಐ ಮಾಡಿದೆ. ಟಿ20 ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ನವೆಂಬರ್ 18 ರಿಂದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಸರಣಿ ಆರಂಭಗೊಳ್ಳಲಿದೆ. ಇನ್ನು ಡಿಸೆಂಬರ್ ನಾಲ್ಕರಿಂದ ಬಾಂಗ್ಲಾದೇಶ ವಿರುದ್ಧದ ಸರಣಿ ನಡೆಯಲಿದೆ. ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲಾಗಿದೆ. ಇನ್ನು ಏಕದಿನ ಸರಣಿಗೆ ಶಿಖರ್ ಧವನ್ ನಾಯಕರಾಗಿದ್ದಾರೆ. ಕಾಶ್ಮೀರ ವೇಗಿ ಉಮ್ರಾನ್ ಮಲಿಕ್ ಏಕದಿನ ಹಾಗೂ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ. ಆದರೆ ಆರ್ ಅಶ್ವಿನ್ ಹಾಗೂ ದಿನೇಶ್ ಕಾರ್ತಿಕ್ ನ್ಯೂಜಿಲೆಂಡ್ ವಿರುದ್ಧ ಟಿ20 ತಂಡಕ್ಕೆ ಆಯ್ಕೆಯಾಗಿಲ್ಲ. ಇನ್ನು ಶಹಬಾಜ್ ಅಹಮ್ಮದ್ ನ್ಯೂಜಿಲೆಂಡ್ ವಿರುದ್ದದ ಏಕದಿನ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.  ಇನ್ನೂ ನ್ಯೂಜಿಲೆಂಡ್ ಸರಣಿಗೆ ರಿಷಬ್ ಪಂತ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗೆ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ದದ ಸರಣಿ ಹಾಗೂ ಬಾಂಗ್ಲಾದೇಶ ವಿರುದ್ದದ ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಮರಳಲಿದ್ದಾರೆ. ಇತ್ತ ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗಿದ್ದಾರೆ.ನವೆಂಬರ್ 18 ರಿಂದ ನವೆಂಬರ್ 22ರ ವರೆಗೆ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿ ಆಡಲಿರುವ ಟೀಂ ಇಂಡಿಯಾ ಬಳಿಕ ಏಕದಿನ ಸರಣಿ ಆಡಲಿದೆ. 

 ಟೀಂ ಇಂಡಿಯಾದಿಂದ ಹೊರಗಿಡಲು ಸರಿಯಾದ ಸಮಯ: ಮತ್ತೆ ಫೇಲಾದ ರಾಹುಲ್‌ ಮೇಲೆ ನೆಟ್ಟಿಗರು ಸಿಡಿಮಿಡಿ..!

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ಹಾರ್ದಿಕ್ ಪಾಂಡ್ಯ(ನಾಯಕ), ರಿಷಬ್ ಪಂತ್(ಉಪನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಶಿಂಗ್ಟನ್ ಸುಂದರ್, ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್ ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್

 ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ
ಶಿಖರ್ ಧವನ್(ನಾಯಕ, ರಿಷಬ್ ಪಂತ್(ಉಪನಾಯಕ), ಶುಭಮನ್ ಗಿಲ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಶಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹಮ್ಮದ್, ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ದೀಪಕ್ ಚಹಾರ್, ಕುಲ್ದೀಪ್ ಸೇನ್ ಹಾಗೂ ಉಮ್ರಾನ್ ಮಲಿಕ್ 

ಡಿಸೆಂಬರ್ 4 ರಿಂದ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಸರಣಿ ಆಡಲಿದೆ. ಈ ಸರಣಿಗೆ ನಾಯಕ ರೋಹಿತ್ ಶರ್ಮಾ ಹಾಗೂ ಉಪ ನಾಯಕ ಕೆಎಲ್ ರಾಹುಲ್ ತಂಡಕ್ಕೆ ವಾಪಾಸ್ಸಾಗಲಿದ್ದಾರೆ. ಬಾಂಗ್ಲಾದೇಶ ವಿರುದ್ಧ 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯದ ಸರಣಿ ಆಡಲಿದೆ. ಡಿಸೆಂಬರ್ 22ರ ವರೆಗೆ ಸರಣಿ ನಡೆಯಲಿದೆ.

ಖಾಸಗಿತನಕ್ಕೆ ಧಕ್ಕೆ; ಹೋಟೆಲ್ ರೂಂ ವಿಡಿಯೋ, ಅಸಮಾಧಾನ ಹೊರಹಾಕಿದ ಮಾಜಿ ನಾಯಕ..!

ಬಾಂಗ್ಲಾದೇಶ ವಿರುದ್ದದ ಏಕದಿನ ಸರಣಿಗೆ ಟೀಂ ಇಂಡಿಯಾ 
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್, ಇಶಾನ್ ಕಿಶನ್ , ರವೀಂದ್ರ ಜಡೇಜಾ, ಅಕ್ಷರ್ ಪಟೇಲ್,  ವಾಶಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್ , ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್

ಬಾಂಗ್ಲಾದೇಶ ವಿರುದ್ದದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ 
 ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ , ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್ , ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

Follow Us:
Download App:
  • android
  • ios