Asianet Suvarna News Asianet Suvarna News

ಏಷ್ಯಾಕಪ್‌ ಟಿ20 ಟೂರ್ನಿಗೆ ಇಂದು ಭಾರತ ಕ್ರಿಕೆಟ್ ತಂಡ ಪ್ರಕಟ

ಮುಂಬರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಇಂದು ಪ್ರಕಟ
ಆಗಸ್ಟ್ 27ರಿಂದ ಯುಎಇನಲ್ಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆರಂಭ
ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ಸಾಧ್ಯತೆ

BCCI Selection meeting to select team for Asia Cup today Kohli KL Rahul set to return kvn
Author
Bengaluru, First Published Aug 8, 2022, 9:51 AM IST

ನವದೆಹಲಿ(ಆ.08): ಇದೇ ತಿಂಗಳ 27ರಿಂದ ಆರಂಭಗೊಳ್ಳಲಿರುವ ಏಷ್ಯಾಕಪ್‌ ಟಿ20 ಟೂರ್ನಿಗೆ ಬಿಸಿಸಿಐ ಸೋಮವಾರ ಭಾರತ ತಂಡವನ್ನು ಪ್ರಕಟಗೊಳಿಸಲಿದೆ. ಆಯ್ಕೆ ಸಮಿತಿ ಸಭೆಯಲ್ಲಿ ಕೆಲ ಪ್ರಮುಖ ವಿಚಾರಗಳ ಚರ್ಚೆ ನಡೆಯಲಿದ್ದು, 15 ಇಲ್ಲವೇ 17 ಸದಸ್ಯರ ತಂಡವನ್ನು ಹೆಸರಿಸಲಾಗುತ್ತದೆ. ವೇಗಿ ಹರ್ಷಲ್‌ ಪಟೇಲ್‌ ಗಾಯಗೊಂಡಿರುವ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸುವ ಸಾಧ್ಯತೆ ಕಡಿಮೆ. 
ಎಡಗೈ ವೇಗಿ ಆರ್ಶದೀಪ್‌ ಸಿಂಗ್‌ಗೆ ಅವಕಾಶ ಸಿಗುವ ನಿರೀಕ್ಷೆ ಇದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರಿಷಭ್ ಪಂತ್‌, ಹಾರ್ದಿಕ್‌ ಪಾಂಡ್ಯ, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆಯಲಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ನಿರೀಕ್ಷಿತ ಪ್ರದರ್ಶನ ತೋರದ ಇಶಾನ್‌ ಕಿಶನ್‌ರನ್ನು ಕೈಬಿಡಬಹುದು. ಸ್ಯಾಮ್ಸನ್‌, ದೀಪಕ್‌ ಹೂಡಾಗೆ ಅವಕಾಶ ಸಿಗುವುದು ಬಹುತೇಕ ಖಚಿತ. ರವೀಂದ್ರ ಜಡೇಜಾ, ರವಿಚಂದ್ರನ್‌ ಅಶ್ವಿನ್‌, ಅಕ್ಷರ್‌ ಪಟೇಲ್ ಮತ್ತು ಯುಜುವೇಂದ್ರ ಚಹಲ್‌ ತಂಡದಲ್ಲಿರುವ ಸಾಧ್ಯತೆ ಹೆಚ್ಚು. ಕೆ.ಎಲ್‌.ರಾಹುಲ್‌ ಆಯ್ಕೆಯಾಗುತ್ತಾರಾ ಎನ್ನುವ ಬಗ್ಗೆ ಕುತೂಹಲವಿದೆ.

ಮಹಾರಾಜ ಟ್ರೋಫಿ ಟಿ20: ಮಂಗಳೂರು ಶುಭಾರಂಭ

ಮೈಸೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ) ಆಯೋಜಿಸುವ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್‌ಗೆ ಭಾನುವಾರ ವರ್ಣರಂಜಿತ ಚಾಲನೆ ದೊರಕಿತು. ನಗರದ ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕ್ರಿಕೆಟ್‌ ಮೈದಾನದಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮತ್ತು ಕೆಎಸ್‌ಸಿಎ ಅಧ್ಯಕ್ಷ ರೋಜರ್‌ ಬಿನ್ನಿ ಪಂದ್ಯಾವಳಿಗೆ ಚಾಲನೆ ನೀಡಿದರು. ಬಳಿಕ ಹುಬ್ಬಳ್ಳಿ ಟೈಗ​ರ್ಸ್‌ ವಿರುದ್ಧ ನಡೆದ ಉದ್ಘಾಟನಾ ಪಂದ್ಯದಲ್ಲಿ ಮಂಗಳೂರು ಯುನೈಟೆಡ್‌ ತಂಡ 8 ವಿಕೆಟ್‌ ಗೆಲುವು ಸಾಧಿಸಿ ಶುಭಾರಂಭ ಮಾಡಿತು. 

WI vs IND ಸ್ಪಿನ್ ದಾಳಿಗೆ ತತ್ತರಿಸಿದ ವಿಂಡೀಸ್, 4-1 ಅಂತರದಲ್ಲಿ ಭಾರತಕ್ಕೆ ಟಿ20 ಸರಣಿ!

ಮೊದಲು ಬ್ಯಾಟ್‌ ಮಾಡಿದ ಹುಬ್ಬಳ್ಳಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 119 ಕಲೆಹಾಕಿತು. ಲಿಯಾನ್‌ ಖಾನ್‌ 34, ತುಷಾರ್‌ ಸಿಂಗ್‌ 34 ರನ್‌ ಗಳಿಸಿದರು. ಮಳೆ ಅಡ್ಡಿಪಡಿಸಿದ ಕಾರಣ ವಿಜೆಡಿ ನಿಯಮದ ಅನ್ವಯ ಮಂಗಳೂರಿಗೆ 18 ಓವರ್‌ಗಳಲ್ಲಿ 112 ರನ್‌ ಗುರಿ ನಿಗದಿಪಡಿಸಲಾಯಿತು. ತಂಡ 16 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟದಲ್ಲಿ ಜಯಗಳಿಸಿತು. ನಾಯಕ ಸಮರ್ಥ್‌ ಅಜೇಯ 57 ರನ್‌ ಗಳಿಸಿದರು.

ಬಾಂಗ್ಲಾ ವಿರುದ್ಧ ಏಕದಿನ ಸರಣಿ ಗೆದ್ದ ಜಿಂಬಾಬ್ವೆ

ಹರಾರೆ: ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಲ್ಲಿ ಗೆದ್ದಿದ್ದ ಆತಿಥೇಯ ಜಿಂಬಾಬ್ವೆ ತಂಡ ಏಕದಿನ ಸರಣಿಯನ್ನೂ ಕೈವಶಪಡಿಸಿಕೊಂಡಿದೆ. ಭಾನುವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ 5 ವಿಕೆಟ್‌ ಗೆಲುವು ಸಾಧಿಸಿದ್ದು, 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಪಡೆದಿದೆ. 

ಮೊದಲು ಬ್ಯಾಟ್‌ ಮಾಡಿದ ಬಾಂಗ್ಲಾದೇಶ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 290 ರನ್‌ ಕಲೆ ಹಾಕಿತು. ಮಹಮದುಲ್ಲಾ(80), ನಾಯಕ ತಮೀಮ್‌ ಇಕ್ಬಾಲ್‌(50) ತಲಾ ಅರ್ಧಶತಕ ಬಾರಿಸಿದರೆ, ಅಫೀಫ್‌ ಹೊಸೈನ್‌ 41 ರನ್‌ ಕೊಡುಗೆ ನೀಡಿದರು. ಸಿಕಂದರ್‌ ರಜಾ 3 ವಿಕೆಟ್‌ ಕಿತ್ತರು. ದೊಡ್ಡ ಗುರಿ ಬೆನ್ನತ್ತಿದ ಜಿಂಬಾಬ್ವೆ 47.3 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಜಯಗಳಿಸಿತು. ರಜಾ(117), ನಾಯಕ ಚಕಬ್ವಾ (102) ಶತಕ ಬಾರಿಸಿ ತಂಡವನ್ನು ಗೆಲ್ಲಿಸಿದರು.

Follow Us:
Download App:
  • android
  • ios