ಮೌಂಟ್‌ ಮಾಂಗನ್ಯುಯಿ(ಫೆ.03): ಭಾರತ ಸೀಮಿತ ಓವರ್‌ಗಳ ತಂಡದ ಉಪನಾಯಕ ರೋಹಿತ್ ಶರ್ಮಾ, ನ್ಯೂಜಿಲೆಂಡ್ ವಿರುದ್ಧದ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ. ಇನ್ನು ಟೆಸ್ಟ್ ತಂಡ ಪ್ರಕಟಿಸಿಲ್ಲ. ಹೀಗಾಗಿ ಟೆಸ್ಟ್ ತಂಡದಿಂದಲೂ ಹಿಟ್‌ಮ್ಯಾನ್ ಹೊರಗುಳಿಯುವ ಸಾಧ್ಯತೆಯಿದೆ.

ನ್ಯೂಜಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ರೋಹಿತ್ ಶರ್ಮಾ ಆ ಬಳಿಕ ಕಾಲಿನ ನೋವಿಗೆ ತುತ್ತಾಗಿ ಅರ್ಧದಲ್ಲೇ ಪೆವಿಲಿಯನ್ ಸೇರಿದ್ದರು.  ಕಾಲಿನ ಸ್ನಾಯುಸೆಳೆತಕ್ಕೆ ಒಳಗಾಗುವ ಮುನ್ನ ರೋಹಿತ್ 41 ಎಸೆತಗಳಲ್ಲಿ 60 ರನ್ ಬಾರಿಸಿದ್ದರು. 

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಎಂಎಸ್ ಧೋನಿ ಇದ್ದಾರಾ?

ರೋಹಿತ್ ಈ ಸರಣಿಯಿಂದ ಹೊರಬಿದ್ದಿದ್ದಾರೆ. ಫಿಸಿಯೋ ರೋಹಿತ್‌ಗೆ ನೆರವಾಗುತ್ತಿದ್ದಾರೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ. ಟಿ20 ಸರಣಿ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾ ಫೆಬ್ರವರಿ 5ರಿಂದ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಆ ಬಳಿಕ 2 ಪಂದ್ಯಗಳ ಟೆಸ್ಟ್ ಚಾಂಪಿಯನ್‌ಶಿಪ್ ಆಡಲಿದೆ.

ಸರಣಿ ಕ್ಲೀನ್ ಸ್ವೀಪ್ ಮಾಡಿ ಸೇಡು ತೀರಿಸಿಕೊಂಡ ಟೀಂ ಇಂಡಿಯಾ

ಇದೀಗ ಏಕದಿನ ಸರಣಿಯಲ್ಲಿ ರಾಹುಲ್ ಜತೆ ಇನಿಂಗ್ಸ್ ಆರಂಭಿಸುವವರು ಯಾರು ಎನ್ನುವ ಕುತೂಹಲ ಜೋರಾಗಿದೆ. ಈಗಾಗಲೇ ಪೃಥ್ವಿ ಶಾ ಮೀಸಲು ಆರಂಭಿಕನಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಪೃಥ್ವಿ ಇದೇ ಮೊದಲ ಬಾರಿಗೆ ಸೀಮಿತ ಓವರ್‌ನಲ್ಲಿ ಪದಾರ್ಪಣೆ ಮಾಡುವ ಸಾಧ್ಯತೆಯಿದೆ. ಇನ್ನು ಕನ್ನಡಿಗ ಮಯಾಂಕ್ ಅಗರ್‌ವಾಲ್ ಸಹಾ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಇದರ ಜತೆಗೆ ಭಾರತ 'ಎ' ಪರ ಅಜೇಯ ದ್ವಿಶತಕ ಬಾರಿಸಿದ ಶುಭ್‌ಮನ್ ಗಿಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೂ ಅಚ್ಚರಿಯಿಲ್ಲ.