ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟಗಾಯದ ಸಮಸ್ಯೆಯಿಂದಾಗಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಜಾನಿ ಬೇರ್‌ಸ್ಟೋವ್ಮುಂಬರುವ ನವೆಂಬರ್‌ವರೆಗೂ ಕ್ರಿಕೆಟ್‌ನಿಂದ ಬೇರ್‌ಸ್ಟೋವ್‌ ಔಟ್‌

ಲಂಡನ್‌(ಆ.03): ಅಕ್ಟೋಬರ್‌-ನವೆಂಬರ್‌ನಲ್ಲಿ ಆಸ್ಪ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಇಂಗ್ಲೆಂಡ್‌ ತಂಡ ಪ್ರಕಟಗೊಂಡಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಪೋಟಕ ಬ್ಯಾಟರ್‌ ಜಾನಿ ಬೇರ್‌ಸ್ಟೋವ್‌ ಚುಟುಕು ವಿಶ್ವಕಪ್ ಕ್ರಿಕೆಟ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ. 

ವಿಕೆಟ್ ಕೀಪರ್‌ ಬ್ಯಾಟರ್‌ ಜಾನಿ ಬೇರ್‌ಸ್ಟೋವ್‌ ಗಾಲ್ಫ್‌ ಆಡುವಾಗ ಬಿದ್ದು ಗಾಯಗೊಂಡಿದ್ದು ತಂಡದಿಂದ ಹೊರಬಿದ್ದಿದ್ದಾರೆ. ನವೆಂಬರ್‌ ವರೆಗೂ ಅವರು ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿದೆ. ಜಾನಿ ಬೇರ್‌ಸ್ಟೋವ್‌, ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಮಾತ್ರವಲ್ಲದೇ, ದಕ್ಷಿಣ ಆಫ್ರಿಕಾ ಎದುರಿನ ಮೂರನೇ ಟೆಸ್ಟ್‌ನಿಂದಲೂ ಹೊರಬಿದ್ದಿದ್ದಾರೆ. 

ಲಯದ ಸಮಸ್ಯೆ ಎದುರಿಸುತ್ತಿರುವ ಆರಂಭಿಕ ಬ್ಯಾಟರ್‌ ಜೇಸನ್‌ ರಾಯ್‌ರನ್ನು ಕೈಬಿಡಲಾಗಿದೆ. ಜೇಸನ್ ರಾಯ್ ಕಳೆದ ಕೆಲವು ತಿಂಗಳುಗಳಿಂದ ರನ್‌ ಬರ ಅನುಭವಿಸುತ್ತಿದ್ದು, ಟಿ20 ವಿಶ್ವಕಪ್ ಟೂರ್ನಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಈ ಸೀಸನ್‌ನಲ್ಲಿ ಇಂಗ್ಲೆಂಡ್‌ ತಂಡದ ಪರ 6 ಟಿ20 ಪಂದ್ಯಗಳಿಂದ ಜೇಸನ್ ರಾಯ್ ಕೇವಲ 78 ರನ್‌ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ದಿ ಹಂಡ್ರೆಡ್ ಟೂರ್ನಿಯಲ್ಲೂ ಮೊದಲ 4 ಇನಿಂಗ್ಸ್‌ಗಳ ಪೈಕಿ 3 ಪಂದ್ಯಗಳಲ್ಲಿ ಶೂನ್ಯ ಸುತ್ತಿ ನಿರಾಸೆ ಅನುಭವಿಸಿದ್ದರು. ತವರಿನಲ್ಲಿ 2019ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಜೇಸನ್ ರಾಯ್ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಇಂಗ್ಲೆಂಡ್ ತಂಡವು ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಮಹತ್ತರ ಪಾತ್ರವನ್ನು ನಿಭಾಯಿಸಿದ್ದರು. 

One word Trend ವೈರಲ್ ಆಯ್ತು ದಿನೇಶ್ ಕಾರ್ತಿಕ್ ದೀಪಿಕಾ ಪಲ್ಲಿಕಲ್ ಜೋಡಿಯ ಒಂದೇ ಶಬ್ದದ ಟ್ವೀಟ್!

ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ಪರ 4 ಪಂದ್ಯಗಳನ್ನಾಡಿರುವ ಫಿಲ್ ಸಾಲ್ಟ್ ಅವರನ್ನು ಇಂಗ್ಲೆಂಡ್‌ ತಂಡದೊಳಗೆ ಸ್ಥಾನ ಪಡೆದಿದ್ದು, ಜೇಸನ್ ರಾಯ್ ಬದಲಿಗೆ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಫಿಲ್ ಸಾಲ್ಟ್‌ ಹಾಗೂ ನಾಯಕ ಜೋಸ್ ಬಟ್ಲರ್‌ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. 

Scroll to load tweet…

ಇನ್ನುಳಿದಂತೆ ಫಿಟ್ನೆಸ್ ಸಮಸ್ಯೆಯಿಂದಾಗಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿರುವ ಕ್ರಿಸ್ ಜೋರ್ಡನ್ ಹಾಗೂ ಲಿಯಾಮ್ ಲಿವಿಂಗ್‌ಸ್ಟೋನ್ ಅವರಿಗೂ ಇಂಗ್ಲೆಂಡ್ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿದೆ. ಕ್ರಿಸ್ ಜೋರ್ಡನ್‌ ಕೈಬೆರಳಿನ ಗಾಯಕ್ಕೆ ತುತ್ತಾಗಿದ್ದರೇ, ಲಿಯಾಮ್ ಲಿವಿಂಗ್‌ಸ್ಟೋನ್ ಪಾದದ ಗಾಯಕ್ಕೆ ಒಳಗಾಗಿದ್ದಾರೆ. 

ತಂಡ: ಜೋಸ್ ಬಟ್ಲರ್‌ (ನಾಯಕ&ವಿಕೆಟ್ ಕೀಪರ್), ಮೋಯಿನ್ ಅಲಿ, ಹ್ಯಾರಿ ಬ್ರೂಕ್‌, ಸ್ಯಾಮ್‌ ಕರ್ರನ್‌, ಕ್ರಿಸ್ ಜೋರ್ಡನ್‌, ಲಿಯಾಮ್ ಲಿವಿಂಗ್‌ಸ್ಟೋನ್‌, ಡೇವಿಡ್ ಮಲಾನ್‌, ಆದಿಲ್ ರಶೀದ್‌, ಫಿಲ್ ಸಾಲ್ಟ್‌, ಬೆನ್ ಸ್ಟೋಕ್ಸ್‌, ರೀಲೆ ಟಾಪ್ಲೆ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್‌, ಮಾರ್ಕ್‌ ವುಡ್‌.