ಅಹಮದಾಬಾದ್‌(ಫೆ.24): ಸಬರಮತಿ ನದಿ ತಟದಲ್ಲಿರುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಮೊಟೇರಾ ಸ್ಟೇಡಿಯಂ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಭಾರತ-ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.

ಗುಜರಾತ್‌ ಕ್ರಿಕೆಟ್ ಸಂಸ್ಥೆಯ ಮಹತ್ವಾಕಾಂಕ್ಷೆ ಯೋಜನೆಯಾದ ಮೊಟೇರಾ ಸ್ಟೇಡಿಯಂ, ಬರೋಬ್ಬರಿ 63 ಎಕರೆ ವಿಸ್ತೀರ್ಣ ಹೊಂದಿದೆ. ಈ ಕ್ರಿಕೆಟ್‌ ಮೈದಾನದಲ್ಲಿ 1, 32,000 ಆಸನದ ಸಾಮರ್ಥ್ಯವಿದ್ದು, 1,10,000 ಪ್ರೇಕ್ಷಕರು ಏಕಕಾಲದಲ್ಲಿ ಪಂದ್ಯಾವಳಿಯನ್ನು ವೀಕ್ಷಿಸಬಹುದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಇದಾಗಿದ್ದು, 2014ರಲ್ಲಿ ಹಳೆಯ ಮೊಟೇರಾ ಸ್ಟೇಡಿಯಂ ಅನ್ನು ಪುನರುಜ್ಜೀವನ ಗೊಳಿಸುವ ಕಾರ್ಯಕ್ಕೆ ಕೈ ಹಾಕಿದರು.

ವಿಶ್ವದ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ಮೊಟೇರಾ ಮೈದಾನದ ಇಂಟ್ರೆಸ್ಟಿಂಗ್‌ ಸಂಗತಿಗಳು...!

ವಿಶ್ವದರ್ಜೆಯ ಕ್ರಿಕೆಟ್‌ ಮೈದಾನ ಇದೀಗ ಲೋಕಾರ್ಪಣೆಗೊಳ್ಳಲಿದ್ದು, ವಿಶ್ವದ ಅತಿದೊಡ್ಡ ಕ್ರಿಕೆಟ್‌ ಮೈದಾನದಲ್ಲಿ ಭಾರತ ಹಾಗೂ ಇಂಗ್ಲೆಂಡ್‌ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಲಿವೆ. ಈ ಮೊಟೇರಾ ಸ್ಟೇಡಿಯಂನ ಒಂದಷ್ಟು ಇಂಟ್ರೆಸ್ಟಿಂಗ್‌ ವಿಚಾರಗಳು ಈ ವಿಡಿಯೋದಲ್ಲಿದೆ ನೋಡಿ...