Asianet Suvarna News Asianet Suvarna News

Blind Cricket ಬಾಂಗ್ಲಾದೇಶ ಮಣಿಸಿ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಟೀಂ ಇಂಡಿಯಾ!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಂಧರ ಟಿ20 ವಿಶ್ವಕಪ್ ಟೂರ್ನಿ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವಿನ ಮೂಲಕ ಟ್ರೋಫಿ ಗೆದ್ದುಕೊಂಡಿದೆ. ಈ ಮೂಲಕ 3ನೇ ಬಾರಿಗೆ ಅಂಧರ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಸಾಧನೆ ಮಾಡಿದೆ.
 

Blind cricket Final Team India beat Bangladesh by 120 runs and clinch 3rd t20 world cup 2022 trophy ckm
Author
First Published Dec 17, 2022, 4:05 PM IST

ಬೆಂಗಳೂರು(ಡಿ.17):  ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪ್ರಾಬಲ್ಯ ಮುಂದುವರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗಿತ್ತು. ಈ ರೋಚಕ ಪಂದ್ಯದಲ್ಲಿ ಟೀಂ ಇಂಡಿಯಾ 120 ರನ್ ಅಂತರದಲ್ಲಿ ಬಾಂಗ್ಲಾದೇಶ ಮಣಿಸಿ ಟ್ರೋಫಿ ಗೆದ್ದುಕೊಂಡಿತು. ಈ ಮೂಲಕ ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ 2ನೇ ಪ್ರಶಸ್ತಿ ಗೆದ್ದುಕೊಂಡ ಸಾಧನೆ ಮಾಡಿದೆ. 2012ರಲ್ಲಿ ಮೊದಲ ಟ್ರೋಫಿ ಗೆದ್ದುಕೊಂಡ ಟೀಂ ಇಂಡಿಯಾ 2017ರಲ್ಲಿ ಎರಡನೇ ಬಾರಿಗೆ ಪ್ರಶಸ್ತಿ ಕೈವಶ ಮಾಡಿತ್ತು.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಯಾ 2 ವಿಕೆಟ್ ನಷ್ಟಕ್ಕೆ 277 ರನ್ ಸಿಡಿಸಿತು. ಭಾರತದ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿತು. ಈ ಮೂಲಕ ಟಿ20 ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತ ಪೇರಿಸಿತು. ಇದರೊಂದಿಗೆ ಭಾರತದ ಮೊದಲ ಹಂತದಲ್ಲೇ ಉತ್ತಮ ಸ್ಥಿತಿ ಕಾಪಾಡಿಕೊಂಡಿತು. ಇದೇ ಮೊದಲ ಬಾರಿಗೆ ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದ ಬಾಂಗ್ಲಾದೇಶ ಒತ್ತಡಕ್ಕೆ ಸಿಲುಕಿತು.

ವೀಸಾ ನಿರಾಕರಣೆ, ಭಾರತದಲ್ಲಿ ಆಯೋಜಿಸಿದ ಅಂಧರ ಟಿ20 ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ಔಟ್

ರನ್ ಚೇಸಿಂಗ್ ಬಾಂಗ್ಲಾದೇಶಕ್ಕೆ ಸುಲಭವಾಗರಲಿಲ್ಲ. ಟೀಂ ಇಂಡಿಯಾ ಬೌಲಿಂಗ್ ದಾಳಿಗೆ ಬಾಂಗ್ಲಾದೇಶ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ನಿಗಿದತ 20 ಓವರ್‌ಗಳಲ್ಲಿ ಬಾಂಗ್ಲಾದೇಶ 3 ವಿಕೆಟ್ ಕಳೆದುಕೊಂಡು 157 ರನ್ ಸಿಡಿಸಿತು.  ಇದರೊಂದಿಗೆ ಭಾರತ 120 ರನ್ ಭರ್ಜರಿ ಗೆಲುವು ದಾಖಲಿಸಿತು.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಟೀಂ ಇಂಡಿಯಾಗೆ ಟ್ರೋಫಿ ವಿತರಿಸಿದರು. ಇದೇ ವೇಳೆ ಮಾತನಾಡಿದ ರಾಜ್ಯಪಾಲರು, ಅಂಧರ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾವನ್ನು ಅಭಿನಂದಸಿದರು. ಇದೇ ವೇಳೆ ಅತ್ಯುತ್ತಮ ಕ್ರೀಡಾಸ್ಪೂರ್ತಿಯೊಂದಿಗೆ ಪೈಪೋಟಿ ನೀಡಿದ ಬಾಂಗ್ಲಾದೇಶ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು.  ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿದ ಸಮರ್ಥನಂ ಸಂಸ್ಥೆಯನ್ನು ಅಭಿನಂದಿಸಿದರು.

ಈ ಬಾರಿಯ ಅಂಧರ ಟಿ20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ತಂಡ ಆಗಮಿಸಿಲ್ಲ. ವೀಸಾ ಸಮಸ್ಯೆಯಿಂದಾಗಿ ಪಾಕಿಸ್ತಾನ ತಂಡಕ್ಕೆ ಭಾರತಕ್ಕೆ ಆಗಮಿಸಲು ಸಾಧ್ಯವಾಗರಿಲಿಲ್ಲ. ಕೆಲ ತಾಂತ್ರಕ ದೋಷ ಸೇರಿದಂತೆ ಇತರ ಕೆಲ ಕಾರಣಗಳಿಂದ ಪಾಕಿಸ್ತಾನ ತಂಡದ ವೀಸಾಗೆ ಅನುಮೋದನೆ ಸಿಗಲಿಲ್ಲ. ಹೀಗಾಗಿ ಪಾಕಿಸ್ತಾನ ತಂಡ ಭಾರತ ಪ್ರವಾಸ ಮಾಡಲು ಸಾಧ್ಯವಾಗಿಲ್ಲ. 

 

Team India: ದೇಶದ ಪರವಾಗಿ ಆಡಿದ್ದ ಕ್ರಿಕೆಟಿಗ ಇಂದು ಹಣಕ್ಕಾಗಿ ಎಮ್ಮೆ ಸಾಕ್ತಿದ್ದಾರೆ!

ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಬಲಿಷ್ಠ ತಂಡಗಳಾಗಿವೆ. ಈ ಬಾರಿ ಪಾಕಿಸ್ತಾನ ತಂಡ ಪಾಲ್ಗೊಳ್ಳದ ಕಾರಣ ಬಾಂಗ್ಲಾದೇಶ ಈ ಅವಕಾಶವನ್ನು ಬಳಸಿಕೊಂಡಿತ್ತು. ಉತ್ತಮ ಪ್ರದರ್ಶನದ ಮೂಲಕ ಫೈನಲ್ ಪ್ರವೇಶಿಸಿತ್ತು. ಆದರೆ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರದರ್ಶನಕ್ಕೆ ಶರಣಾಯಿತು.
 

Follow Us:
Download App:
  • android
  • ios