ಆಸ್ಟ್ರೇಲಿಯಾ ತಂಡವು ಭಾರತ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ 13 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ. ಮೊದಲ ಟೆಸ್ಟ್ ಪಂದ್ಯ ನವೆಂಬರ್ 22ರಿಂದ ಆರಂಭವಾಗಲಿದೆ

ಅಡಿಲೇಡ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೆ 13 ಆಟಗಾರರನ್ನೊಳಗೊಂಡ ಬಲಿಷ್ಠ ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ನವೆಂಬರ್ 22ರಿಂದ ಪರ್ತ್‌ನ ಓಪ್ಟಸ್ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಇದೀಗ ಮೊದಲ ಟೆಸ್ಟ್ ಪಂದ್ಯಕ್ಕೆ 13 ಆಟಗಾರರನ್ನೊಳಗೊಂಡ ಬಲಾಢ್ಯ ಅಸೀಸ್ ತಂಡವನ್ನು ಪ್ರಕಟಿಸಲಾಗಿದ್ದು, ನೇಥನ್ ಮೆಕ್‌ಸ್ವೀನಿ ಆಸೀಸ್ ಟೆಸ್ಟ್ ತಂಡದಲ್ಲಿ ಇದೇ ಮೊದಲ ಬಾರಿಗೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನುಳಿದಂತೆ ಕ್ರಿಕೆಟ್ ಆಸ್ಟ್ರೇಲಿಯಾ, ಜೋಶ್ ಇಂಗ್ಲಿಶ್ ಅವರನ್ನು ಅಚ್ಚರಿಯ ರೀತಿಯಲ್ಲಿ ಮೀಸಲು ವಿಕೆಟ್ ಕೀಪರ್ ರೂಪದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಮೀಸಲು ವೇಗಿಯ ರೂಪದಲ್ಲಿ ಸ್ಕಾಟ್ ಬೋಲೆಂಡ್ ಸ್ಥಾನ ಪಡೆಯುವಲ್ಲಿ ಸಫಲವಾಗಿದ್ದಾರೆ. ಯಾಕೆಂದರೆ ಆಸೀಸ್ ತಂಡದಲ್ಲಿ ಈಗಾಗಲೇ ನಾಯಕ ಪ್ಯಾಟ್ ಕಮಿನ್ಸ್, ಜೋಶ್ ಹೇಜಲ್‌ವುಡ್ ಹಾಗೂ ಮಿಚೆಲ್ ಸ್ಟಾರ್ಕ್ ಮೊದಲ ಅಯ್ಕೆಯ ವೇಗಿಗಳ ರೂಪದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ ಎನಿಸಿದೆ.

Scroll to load tweet…

ಕಾಲೇಜ್‌ನಲ್ಲೇ ಲವ್‌ನಲ್ಲಿ ಬಿದ್ದ ಸಂಜು ಸ್ಯಾಮ್ಸನ್; ಯಾವ ಸಿನಿಮಾಗೂ ಕಮ್ಮಿಯಿಲ್ಲ ಟೀಂ ಇಂಡಿಯಾ ಕ್ರಿಕೆಟರ್ ಲವ್ ಸ್ಟೋರಿ

ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವ ನಿಟ್ಟಿನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಎರಡೂ ತಂಡಗಳಿಗೂ ಸಾಕಷ್ಟು ಮಹತ್ವದ್ದೆನಿಸಿದೆ. ಒಂದು ಕಡೆ ಭಾರತ ತಂಡವು ತವರಿನಲ್ಲೇ ನ್ಯೂಜಿಲೆಂಡ್ ಎದುರು ಮೂರು ಪಂದ್ಯಗಳ ಟೆಸ್ಟ್‌ ಸರಣಿಯನ್ನು ವೈಟ್‌ವಾಷ್ ಅನುಭವಿಸಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಬೇಕಿದ್ದರೇ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. 

ಇನ್ನೊಂದೆಡೆ ಆಸ್ಟ್ರೇಲಿಯಾ ಕೂಡಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಸ್ಥಾನವನ್ನು ಖಚಿತಪಡಿಸಿಕೊಂಡಿಲ್ಲ. ಇದಷ್ಟೇ ಅಲ್ಲದೇ ಕಳೆದೆರಡು ಬಾರಿಯೂ ಭಾರತ ತಂಡವು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಾಗ ತವರಿನಲ್ಲೇ ಕಾಂಗರೂ ಪಡೆ ಟೆಸ್ಟ್ ಸರಣಿ ಸೋಲು ಅನುಭವಿಸಿದೆ. ಹೀಗಾಗಿ ಈ ಬಾರಿ ಆಸೀಸ್‌ ತಂಡವು ಶತಾಯಗತಾಯ ಟೀಂ ಇಂಡಿಯಾವನ್ನು ಸೋಲಿಸುವ ಪಣ ತೊಟ್ಟಿದೆ.

ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಸೋತರೆ ಕೋಚ್‌ ಸ್ಥಾನದಿಂದ ಗಂಭೀರ್‌ ವಜಾ?

ಪರ್ತ್ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ ಹೀಗಿದೆ ನೋಡಿ:

ಪ್ಯಾಟ್ ಕಮಿನ್ಸ್(ನಾಯಕ), ಸ್ಕಾಟ್ ಬೊಲೆಂಡ್, ಅಲೆಕ್ಸ್ ಕ್ಯಾರಿ, ಜೋಶ್ ಹೇಜಲ್‌ವುಡ್, ಟ್ರ್ಯಾವಿಸ್ ಹೆಡ್, ಜೋಶ್ ಇಂಗ್ಲಿಶ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನೇಥನ್ ಲಯನ್, ಮಿಚೆಲ್ ಮಾರ್ಷ್, ನೇಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್.