Asianet Suvarna News Asianet Suvarna News

ಭಾರತ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕೆ ಹಾಜರಾಗಲಿದ್ದಾರೆ ಮೋದಿ ಹಾಗೂ ಆಸೀಸ್ ಪ್ರಧಾನಿ!

ಫೆಬ್ರವರಿ 9 ರಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಆರಂಭಗೊಳ್ಳಲಿದೆ. ವಿಶೇಷ ಅಂದರೆ 4ನೇ ಟೆಸ್ಟ್ ಪಂದ್ಯ ಇದೀಗ ಭಾರಿ ಕುತೂಹಲಕ್ಕೆ ಕಾರಣಾಗಿದೆ. ಈ ಪಂದ್ಯ ವೀಕ್ಷಿಸಲು ಪ್ರಧಾನಿ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದಾರೆ.

Border Gavaskar Trophy PM Modi and Australia PM Anthony Albanese attend India vs Australia 4th test Ahmadabad march 9th ckm
Author
First Published Feb 3, 2023, 8:37 PM IST

ನವದೆಹಲಿ(ಫೆ.03): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯ ಹಲವು ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಲಿದೆ. ಫೆಬ್ರವರಿ 9 ರಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯ ಆರಂಭಗೊಳ್ಳುತ್ತಿದೆ. ಪ್ರತಿಷ್ಠಿತ ಬಾರ್ಡರ್ ಗವಾಸ್ಕರ್ ಟ್ರೋಫಿಗಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಆಗಮಿಸಲಿದೆ. 4 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಮಾಡಲಿದೆ. ವಿಶೇಷ ಅಂದರೆ ಅಹಮ್ಮದಾಬಾದ್‌ನಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟೋನಿ ಆಲ್‌ಬಾನೀಸೆ ಆಗಮಿಸುತ್ತಿದ್ದಾರೆ.

4ನೇ ಟೆಸ್ಟ್ ಪಂದ್ಯ ನರೇಂದ್ರ ಮೋದಿ ಕ್ರೀಡಾಂಗಣ ಅಹಮ್ಮದಾಬಾದ್‌ನಲ್ಲಿ ನಡೆಯಲಿದೆ. ಅಹಮ್ಮಾದಾಬ್ ಕ್ರೀಡಾಂಗಣ ನಿವೀಕರಣಗೊಂಡ ಬಳಿಕ ಪ್ರಧಾನಿ ಮೋದಿ ಈ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯ ವೀಕ್ಷಿಸಿಲ್ಲ. ಇಷ್ಟೇ ಅಲ್ಲ ಆಸ್ಟ್ರೇಲಿಯಾ ಜೊತೆ ಉತ್ತಮ ಸಂಬಂಧ ಹೊಂದಿರುವ ಭಾರತ ಆಸೀಸ್ ಪ್ರಧಾನಿ ಜೊತೆ ಮೋದಿ ಪಂದ್ಯ ವೀಕ್ಷಿಸಲಿದ್ದಾರೆ.

Border Gavaskar Trophy: ಮೊದಲ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾಗೆ ಶಾಕ್, ಸ್ಟಾರ್ ಬ್ಯಾಟರ್ ಔಟ್..?

ಮೈದಾನದಲ್ಲಿ ಪ್ರಬಲ ತಂಡಗಳ ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ. ಇತ್ತ ಗ್ಯಾಲರಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳುವ ವಾತಾರವರಣ ನಿರ್ಮಾಣಗೊಳ್ಳಲಿದೆ. ಪ್ರಧಾನಿ ಮೋದಿ ಆಗಮಿಸುತ್ತಿರುವ ಕಾರಣ ಅಹಮ್ಮದಾಬಾದ್ ಟೆಸ್ಟ್ ಪಂದ್ಯ ವೀಕ್ಷಿಸಲು, ಟಿಕೆಟ್ ಖರೀದಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 9 ರಂದು ನಾಗ್ಪುರದಲ್ಲಿ ನಡೆಯಲಿದೆ. 2ನೇ ಟೆಸ್ಟ್ ಪಂದ್ಯ ಫೆಬ್ರವರಿ 17 ರಿಂದ 21ರ ವರೆಗೆ ದೆಹಲಿಯಲ್ಲಿ ನಡೆಯಲಿದೆ. ಇನ್ನು ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ 5ರ ವರೆಗೆ ಧರ್ಮಶಾಲಾದಲ್ಲಿ ಆಯೋಜಿಸಲಾಗಿದೆ. ಇನ್ನು 4ನೇ ಟೆಸ್ಟ್ ಪಂದ್ಯ ಮಾರ್ಚ್ 9 ರಿಂದ 13ರ ವರೆಗೆ ಅಹಮ್ಮಾದಾಬಾದ್‌ನಲ್ಲಿ ನಡೆಯಲಿದೆ. 

ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿ ಅತ್ಯಂತ ಪ್ರಮುಖವಾಗಿದೆ. ಭಾರತ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ಈ ಸರಣಿಯಲ್ಲಿ ಭಾರಿ ಅಂತರದ ಗೆಲುವು ದಾಖಲಿಸಬೇಕು. ಅತ್ತ ಆಸ್ಟ್ರೇಲಿಯಾ ಕೂಡ ಟೀಂ ಇಂಡಿಯಾ ವಿರುದ್ಧ ಸರಣಿ ಗೆದ್ದು ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆಯುವ ಲೆಕ್ಕಾಚಾರದಲ್ಲಿದೆ. 

Border Gavaskar Trophy: ಕಾಮೆಂಟರಿ ಬಾಕ್ಸ್‌ಗೆ ಮರಳಿದ ಡಿಕೆ ಬಾಸ್‌..!

ಟೆಸ್ಟ್ ಸರಣಿ ಬಳಿಕ ಭಾರತ ಹಾಗೂ ಆಸ್ಟ್ರೇಲಿಯಾ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ.  ಮಾರ್ಚ್ 17 ರಂದು ಮೊದಲ ಏಕದಿನ ಪಂದ್ಯವನ್ನು ಮುಂಬೈನಲ್ಲಿ ಆಡಲಿದೆ. ಇನ್ನು ಮಾರ್ಚ್ 19 ರಂದು ವಿಶಾಖಪಟ್ಟಣಂದಲ್ಲಿ 2ನೇ ಏಕದಿನ ಪಂದ್ಯ ಆಡಲಿದೆ. ಮಾರ್ಚ್ 22ರಂದು ಚೆನ್ನೈನಲ್ಲಿ ಮೂರನೇ ಏಕದಿನ ಪಂದ್ಯ ಆಯೋಜಿಸಲಾಗಿದೆ. 

2022ರ ಡಿಸೆಂಬರ್ ತಿಂಗಳಲ್ಲಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ಟೀಂ ಇಂಡಿಯಾ ಟೆಸ್ಟ್ ಸರಣಿ ಆಡಿಲ್ಲ. ಶ್ರೀಲಂಕಾ ವಿರುದ್ಧ ಏಕದಿನ ಹಾಗೂ ಟಿ20 ಸರಣಿ ಆಡಿದೆ. ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ ಏಕದಿನ ಹಾಗೂ ಟಿ20 ಸರಣಿ ಆಡಿದೆ. ರೋಹಿತ್ ಶರ್ಮಾ ನಾಯಕತ್ವದ ಟೆಸ್ಟ್ ತಂಡ ಭರ್ಜರಿ ಗೆಲುವು ಎದುರುನೋಡುತ್ತಿದೆ.

Latest Videos
Follow Us:
Download App:
  • android
  • ios