Asianet Suvarna News Asianet Suvarna News

Border Gavaskar Trophy: ಮೊದಲ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾಗೆ ಶಾಕ್, ಸ್ಟಾರ್ ಬ್ಯಾಟರ್ ಔಟ್..?

* ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿ ಆರಂಭಕ್ಕೆ ಕ್ಷಣಗಣನೆ
* ಶ್ರೇಯಸ್ ಅಯ್ಯರ್ ಮೊದಲ ಟೆಸ್ಟ್‌ಗೆ ಅನುಮಾನ
* ಶುಭ್‌ಮನ್ ಗಿಲ್-ಸೂರ್ಯಕುಮಾರ್ ಯಾದವ್ ನಡುವೆ ಫೈಟ್

Border Gavaskar Trophy Shreyas Iyer Ruled Out Of 1st Test vs Australia kvn
Author
First Published Feb 1, 2023, 12:47 PM IST

 ಮುಂಬೈ(ಫೆ.01): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಬಿಗ್‌ ಶಾಕ್ ಎದುರಾಗಿದ್ದು, ಮಧ್ಯಮ ಕ್ರಮಾಂಕದ ನಂಬಿಗಸ್ಥ ಬ್ಯಾಟರ್‌ ಶ್ರೇಯಸ್ ಅಯ್ಯರ್ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ವರದಿಯಾಗಿದೆ. 

ಶ್ರೇಯಸ್ ಅಯ್ಯರ್ ಸದ್ಯ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಬದಲಿಗೆ ಶುಭ್‌ಮನ್‌ ಗಿಲ್ ಅವರನ್ನು ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಕಣಕ್ಕಿಳಿಸಲು ಟೀಂ  ಮ್ಯಾನೇಜ್‌ಮೆಂಟ್ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಇದಷ್ಟೇ ಅಲ್ಲದೇ ಮೊದಲ ಟೆಸ್ಟ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೂಡಾ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.  

ಶ್ರೇಯಸ್ ಅಯ್ಯರ್, ಇತ್ತೀಚೆಗಷ್ಟೇ ಮುಕ್ತಾಯವಾದ ಬಾಂಗ್ಲಾದೇಶ ಎದುರಿನ ಟೆಸ್ಟ್ ಸರಣಿಯಲ್ಲೂ ಅತ್ಯಂತ ಸ್ಥಿರ ಪ್ರದರ್ಶನದ ಮೂಲಕವೂ ಗಮನ ಸೆಳೆದಿದ್ದರು. ಪರಿಣಾಮ ಟೀಂ ಇಂಡಿಯಾ 2-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿತ್ತು.

2021ರಲ್ಲಿ ನ್ಯೂಜಿಲೆಂಡ್ ತಂಡವು ಭಾರತ ಪ್ರವಾಸ ಕೈಗೊಂಡಿದ್ದಾಗ ಕೆ ಎಲ್ ರಾಹುಲ್ ಹಾಗೂ ಮಯಾಂಕ್ ಅಗರ್‌ವಾಲ್ ಇನಿಂಗ್ಸ್ ಆರಂಭಿಸಿದರೇ,  ಶುಭ್‌ಮನ್ ಗಿಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಬೇಕು ಎನ್ನುವ ಚರ್ಚೆ ನಡೆದಿತ್ತು. ಆದರೆ ಕೆ ಎಲ್ ರಾಹುಲ್ ಗಾಯಗೊಂಡಿದ್ದರಿಂದಾಗಿ ಶುಭ್‌ಮನ್ ಗಿಲ್ ಇನಿಂಗ್ಸ್‌ ಆರಂಭಿಸಿದರು. ಇದಾದ ಬಳಿಕ ಅವರೂ ಗಾಯಗೊಂಡರು. ಟೆಸ್ಟ್ ಕ್ರಿಕೆಟ್‌ನಲ್ಲಿ ಶುಭ್‌ಮನ್ ಗಿಲ್ ಅವರನ್ನು ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಕಣಕ್ಕಿಳಿಸುವ ಆಲೋಚನೆ ಇದೆ ಎಂದು ಬಿಸಿಸಿಐ ಉನ್ನತ ಮೂಲಗಳು ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

Border Gavaskar Trophy: ಮದುವೆ ಬೆನ್ನಲ್ಲೇ ಅಭ್ಯಾಸ ಆರಂಭಿಸಿದ ಕೆ ಎಲ್ ರಾಹುಲ್..!

ಇನ್ನು ಶುಭ್‌ಮನ್‌ ಗಿಲ್‌ ಅವರಿಗಿಂತ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಉತ್ತಮ ಆಯ್ಕೆಯಾಗಬಲ್ಲರು ಎನ್ನುವ ಮಾತುಗಳು ಕೇಳಿ ಬರಲಾರಂಭಿವೆ. ಸೂರ್ಯಕುಮಾರ್ ಯಾದವ್, ಆಸ್ಟ್ರೇಲಿಯಾದ ಆಫ್‌ಸ್ಪಿನ್ನರ್ ನೇಥನ್ ಲಯನ್‌ ಅವರ ಎದುರು ಅತ್ಯುತ್ತಮವಾಗಿ ಆಡಬಲ್ಲರು. ಆದರೆ ಕಮಿನ್ಸ್‌, ಹೇಜಲ್‌ವುಡ್ ಎದುರು ಗಿಲ್‌ ಉತ್ತಮ ಆಯ್ಕೆ ಎಂದು ಮಾಜಿ ಆಯ್ಕೆ ಸಮಿತಿ ಸದಸ್ಯರೊಬ್ಬರು ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಎದುರಿನ ಟೆಸ್ಟ್ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಹಾಗೂ ಉಪನಾಯಕ ಕೆ ಎಲ್ ರಾಹುಲ್‌ ಇನಿಂಗ್ಸ್‌ ಆರಂಭಿಸಲಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಅಥವಾ ಶುಭ್‌ಮನ್ ಗಿಲ್‌, ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನಿಸಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ವೇಳಾಪಟ್ಟಿ ಹೀಗಿದೆ: 

ಫೆಬ್ರವರಿ 9-12: ಮೊದಲ ಟೆಸ್ಟ್- ನಾಗ್ಪುರ
ಫೆಬ್ರವರಿ 17-21: ಎರಡನೇ ಟೆಸ್ಟ್- ಡೆಲ್ಲಿ
ಮಾರ್ಚ್‌ 01-05: ಮೂರನೇ ಟೆಸ್ಟ್ - ಧರ್ಮಶಾಲಾ
ಮಾರ್ಚ್‌ 09-13: ನಾಲ್ಕನೇ ಟೆಸ್ಟ್ - ಅಹಮದಾಬಾದ್

ಆಸೀಸ್‌ ಟೆಸ್ಟ್‌ ಸರಣಿಗೆ ಭಾರತ ತಂಡ ಹೀಗಿದೆ: 

ರೋಹಿತ್‌ ಶರ್ಮಾ, ಕೆ ಎಲ್ ರಾಹುಲ್‌, ಶುಭ್‌ಮನ್ ಗಿಲ್‌, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ ಎಸ್ ಭರತ್‌, ಇಶಾನ್ ಕಿಶನ್‌, ರವಿಚಂದ್ರನ್‌ ಅಶ್ವಿನ್‌, ಅಕ್ಷರ್‌ ಪಟೇಲ್, ಕುಲ್ದೀಪ್‌ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್‌, ಉಮೇಶ್‌ ಯಾದವ್, ಜಯದೇವ್ ಉನಾದ್ಕತ್‌.


 

Follow Us:
Download App:
  • android
  • ios