ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೇಜರ್ ಚೇಂಜ್!

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಆಸ್ಟ್ರೇಲಿಯಾ ತಂಡದಲ್ಲಿ ಎರಡು ಹಾಗೂ ಭಾರತ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ವಾಷಿಂಗ್ಟನ್ ಸುಂದರ್ ಭಾರತದ ಪರ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ. ರೋಹಿತ್ ಶರ್ಮಾ ಯಶಸ್ವಿ ಜೈಸ್ವಾಲ್ ಜೊತೆಗೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

Boxing Day Test Australia win the toss and elect to bat first against India at MCG kvn

ಮೆಲ್ಬರ್ನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಾಕ್ಸಿಂಗ್ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ತಂಡದಲ್ಲಿ ಎರಡು ಹಾಗೂ ಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆಯೊಂದಿಗೆ ಮೆಲ್ಬರ್ನ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿವೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಇಲ್ಲಿನ ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಿದೆ. ಇನ್ನು ನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ತಂಡದಲ್ಲಿ ಜೋಶ್ ಹೇಜಲ್‌ವುಡ್ ಹಾಗೂ ನೇಥನ್ ಮೆಕ್‌ಸ್ವೀನಿ ಹೊರಬಿದ್ದಿದ್ದು, ಸ್ಯಾಮ್ ಕೊನ್‌ಸ್ಟಾಸ್ ಅವರಿಗೆ ಮಣೆ ಹಾಕಲಾಗಿದೆ. ಇನ್ನೊಂದೆಡೆ ಭಾರತ ತಂಡದಲ್ಲೂ ಮೇಜರ್ ಬದಲಾವಣೆಯಾಗಿದ್ದು ಶುಭ್‌ಮನ್ ಗಿಲ್ ಅವರನ್ನು ಹೊರಗಿಡಲಾಗಿದ್ದು, ತಮಿಳುನಾಡು ಮೂಲದ ಬೌಲಿಂಗ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ.

ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ಫಿಟ್ ಆದ ಟೀಂ ಇಂಡಿಯಾ ದುಷ್ಮನ್; ರೋಹಿತ್ ಪಡೆಗೆ ಶುರುವಾಯ್ತು ಟೆನ್ಷನ್!

ರೋಹಿತ್ ಮಹತ್ವದ ಅಪ್‌ಡೇಟ್;

ಇನ್ನು ಟಾಸ್ ವೇಳೆಯೇ ರೋಹಿತ್ ಶರ್ಮಾ ಮಹತ್ವದ ಅಪ್‌ಡೇಟ್ ನೀಡಿದ್ದು, ತಾವು ಯಶಸ್ವಿ ಜೈಸ್ವಾಲ್ ಜತೆ ಆರಂಭಿಕನಾಗಿ ಕಣಕ್ಕಿಳಿಯುವುದಾಗಿ ಖಚಿತಪಡಿಸಿದ್ದಾರೆ. ಹೀಗಾಗಿ ಮೊದಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಕನ್ನಡಿಗ ಕೆ ಎಲ್ ರಾಹುಲ್, ಇದೀಗ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಉಭಯ ತಂಡಗಳಿಗಿದು ಮಹತ್ವದ ಪಂದ್ಯ:

5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಮೊದಲ ಮೂರು ಪಂದ್ಯಗಳ ಮುಕ್ತಾಯದ ಬಳಿಕ ಉಭಯ ತಂಡಗಳು ಸರಣಿಯಲ್ಲಿ 1-1ರ ಸಮಬಲ ಸಾಧಿಸಿವೆ. ಹೀಗಾಗಿ ಟೆಸ್ಟ್ ಸರಣಿಯಲ್ಲಿ ಮುನ್ನಡೆ ಸಾಧಿಸುವುದರ ಜತೆಗೆ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ತಮ್ಮ ಸ್ಥಾನ ಖಚಿತಪಡಿಸಿಕೊಳ್ಳಲು ಉಭಯ ತಂಡಗಳು ತುದಿಗಾಲಿನಲ್ಲಿ ನಿಂತಿವೆ. ಹೀಗಾಗಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ರೋಚಕತೆಯಿಂದ ಕೂಡಿರುವ ಸಾಧ್ಯತೆಯಿದೆ.

ಬಾಕ್ಸಿಂಗ್ ಡೇ ಟೆಸ್ಟ್ ಅಂದ್ರೇನು? ಇದಕ್ಕಿದೆ ಒಂದು ಶತಮಾನದ ದೀರ್ಘ ಇತಿಹಾಸ!

ಬಾಕ್ಸಿಂಗ್ ಡೇ ಟೆಸ್ಟ್‌ಗೆ ಉಭಯ ತಂಡಗಳು ಹೀಗಿವೆ:

ಆಸ್ಟ್ರೇಲಿಯಾ:
ಉಸ್ಮಾನ್ ಖವಾಜ, ಸ್ಯಾಮ್ ಕೊನ್‌ಸ್ಟಾಸ್, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರ್ಯಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕೇರಿ(ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ನೇಥನ್ ಲಯನ್, ಸ್ಕಾಟ್ ಬೊಲೆಂಡ್.

ಭಾರತ:
ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ(ನಾಯಕ), ಕೆ ಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

Latest Videos
Follow Us:
Download App:
  • android
  • ios