ಮೆಲ್ಬರ್ನ್‌(ಡಿ.29): ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಕೇವಲ 70 ರನ್‌ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ. ಆರಂಭಿಕ ಬ್ಯಾಟ್ಸ್‌ಮನ್‌ ಮಯಾಂಕ್‌ ಅಗರ್‌ವಾಲ್‌(5) ಹಾಗೂ ಟೆಸ್ಟ್‌ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ(3) ಒಂದಂಕಿ ಮೊತ್ತಕ್ಕೆ ವಿಕೆಟ್‌ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದ್ದಾರೆ.

ಎರಡನೇ ಇನಿಂಗ್ಸ್‌ನಲ್ಲಿ 200 ರನ್‌ಗಳಿಗೆ ಆಲೌಟ್‌ ಮಾಡಿದ ಟೀಂ ಇಂಡಿಯಾ 70 ರನ್‌ಗಳ ಗುರಿ ಪಡೆಯಿತು. ಸುಲಭ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಅನಾಯಾಸವಾಗಿ ಗೆಲುವು ದಾಖಲಿಸಲಿದೆ. ಮಯಾಂಕ್‌ ಅಗರ್‌ವಾಲ್ ಹಾಗೂ ಚೇತೇಶ್ವರ್ ಪೂಜಾರ ಫಾರ್ಮ್‌ಗೆ ಮರಳಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಎರಡನೇ ಇನಿಂಗ್ಸ್‌ನ 5ನೇ ಓವರ್‌ನಲ್ಲಿ ಮಿಚೆಲ್‌ ಸ್ಟಾರ್ಕ್ ಬೌಲಿಂಗ್‌ನಲ್ಲಿ ಅಗರ್‌ವಾಲ್ ವಿಕೆಟ್ ಒಪ್ಪಿಸಿದರೆ, ಪೂಜಾರ ಮತ್ತೊಮ್ಮೆ ಪ್ಯಾಟ್‌ ಕಮಿನ್ಸ್‌ ಬೌಲಿಂಗ್‌ನಲ್ಲಿ ವಿಕೆಟ್‌ ಒಪ್ಪಿಸಿದ್ದಾರೆ. ಅಂದಹಾಗೆ ಕಮಿನ್ಸ್‌ ಬಾರ್ಡರ್‌-ಗವಾಸ್ಕರ್ ಟೆಸ್ಟ್‌ ಸರಣಿಯಲ್ಲಿ ಮೂರನೇ ಬಾರಿಗೆ ಪೂಜಾರ ಅವರನ್ನು ಮೂರನೇ ಬಾರಿಗೆ ಬಲಿ ಪಡೆದಿದ್ದಾರೆ.

ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯಾ ಆಲೌಟ್‌ @200; ಭಾರತ ಗೆಲ್ಲಲು 70 ರನ್‌ ಗುರಿ

ಮೂರನೇ ಟೆಸ್ಟ್‌ ಪಂದ್ಯದ ವೇಳೆಗೆ ಮಯಾಂಕ್‌ ಅಗರ್‌ವಾಲ್ ಬದಲಿಗೆ ರೋಹಿತ್ ಶರ್ಮಾ ಇಲ್ಲವೇ ಕೆ.ಎಲ್‌. ರಾಹುಲ್ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ. ಪೂಜಾರ ಹಾಗೂ ಅಗರ್‌ವಾಲ್‌ ಬ್ಯಾಟಿಂಗ್‌ ವೈಫಲ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.