ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದಿಗ್ವಿಜಯ
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಇನ್ನು ಒಂದು ದಿನ ಬಾಕಿ ಇರುವಾಗಲೇ ಟೀಂ ಇಂಡಿಯಾ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-1ರ ಸಮಬಲ ಸಾಧಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಮೆಲ್ಬರ್ನ್(ಡಿ.29): ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ.
ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್‌ಗಳ ಹೀನಾಯ ಸೋಲು ಕಂಡಿದ್ದ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಕಾಂಗರೂ ಪಡೆಗೆ ಅವರ ನೆಲದಲ್ಲೇ ಭರ್ಜರಿ ತಿರುಗೇಟು ನೀಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಭಾರತ ಅರ್ಹ ಗೆಲುವು ದಾಖಲಿಸಿದೆ.
ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯಾ ಆಲೌಟ್ @200; ಭಾರತ ಗೆಲ್ಲಲು 70 ರನ್ ಗುರಿ
ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಶುಭ್‌ಮನ್ ಗಿಲ್(45+35*) ಹಾಗೂ ಮೊಹಮ್ಮದ್ ಸಿರಾಜ್(5 ವಿಕೆಟ್) ಅಮೋಘ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರೆ, ಅಜಿಂಕ್ಯ ರಹಾನೆ ಶತಕ ಬಾರಿಸುವ ಮೂಲಕ ನಾಯಕನ ಆಟವಾಡಿ ಸ್ಮರಣೀಯ ಗೆಲುವು ದಕ್ಕಿಸಿ ಕೊಟ್ಟಿದ್ದಾರೆ.