ಮೆಲ್ಬರ್ನ್‌ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಭಾರತ ಫಾಲೋಆನ್‌ನಿಂದ ಪಾರಾಗಿದೆ. ನಿತೀಶ್ ಕುಮಾರ್ ರೆಡ್ಡಿ (67*) ಮತ್ತು ವಾಷಿಂಗ್ಟನ್ ಸುಂದರ್ (33*) ಅಮೂಲ್ಯ ಜೊತೆಯಾಟದಿಂದ ಭಾರತ 284 ರನ್ ಗಳಿಸಿತು. ಆರಂಭಿಕ ಬ್ಯಾಟ್ಸ್‌ಮನ್‌ಗಳ ವೈಫಲ್ಯದ ನಡುವೆ ರೆಡ್ಡಿಯ ಚೊಚ್ಚಲ ಅರ್ಧಶತಕ ತಂಡಕ್ಕೆ ಆಸರೆಯಾಯಿತು. ಭಾರತ ಇನ್ನೂ 190 ರನ್‌ಗಳ ಹಿನ್ನಡೆಯಲ್ಲಿದೆ.
ಮೆಲ್ಬರ್ನ್: ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಪಲ್ಯದ ಹೊರತಾಗಿಯೂ ನಿತೀಶ್ ಕುಮಾರ್ ರೆಡ್ಡಿ ಅವರ ಸಮಯೋಚಿತ ಬ್ಯಾಟಿಂಗ್ ಮತ್ತೊಮ್ಮೆ ಭಾರತ ತಂಡವನ್ನು ಫಾಲೋಆನ್ ಭೀತಿಯಿಂದ ಪಾರು ಮಾಡುವಲ್ಲಿ ಯಶಸ್ವಿಯಾಗಿದೆ. ಮೂರನೇ ದಿನದಾಟದ ಆರಂಭದಲ್ಲೇ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ವಿಕೆಟ್ ಪತನದಿಂದ ಕಂಗಾಲಾಗಿ ಹೋಗಿದ್ದ ಭಾರತ ತಂಡಕ್ಕೆ ನಿತೀಶ್ ಕುಮಾರ್ ರೆಡ್ಡಿ ಆಸರೆಯಾಗಿದ್ದಾರೆ. ಪರಿಣಾಮ ಭಾರತ ತಂಡವು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಫಾಲೋ ಆನ್ ಭೀತಿಯಿಂದ ಪಾರಾಗಿದೆ.
ಹೌದು, ಇಲ್ಲಿನ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ ಎರಡನೇ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿತ್ತು. ಈ ಮೂಲಕ ಇನ್ನೂ 310 ರನ್‌ಗಳ ಹಿನ್ನಡೆಯಲ್ಲಿತ್ತು. ಟೀಂ ಇಂಡಿಯಾ ಫಾಲೋ ಆನ್‌ನಿಂದ ಪಾರಾಗಲು ಇನ್ನೂ 111 ರನ್‌ಗಳ ಅಗತ್ಯವಿತ್ತು. ರಿಷಭ್ ಪಂತ್ 28 ಹಾಗೂ ರವೀಂದ್ರ ಜಡೇಜಾ 17 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಭಾರತ ತಂಡವು 221 ರನ್ ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡು ಫಾಲೋ ಆನ್ ಭೀತಿಗೆ ಒಳಗಾಗಿತ್ತು.
ಬಾಕ್ಸಿಂಗ್ ಡೇ ಟೆಸ್ಟ್: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗನ ಟೆಸ್ಟ್ ಭವಿಷ್ಯ ಈ ಸರಣಿಯಲ್ಲೇ ನಿರ್ಧಾರ?
ಭಾರತವನ್ನು ಫಾಲೋಆನ್‌ನಿಂದ ಪಾರು ಮಾಡಿದ ರೆಡ್ಡಿ-ಸುಂದರ್: ಜಡೇಜಾ ವಿಕೆಟ್ ಪತನದ ವೇಳೆಗೆ ಭಾರತ ತಂಡವು ಫಾಲೋ ಆನ್‌ನಿಂದ ಪಾರಾಗಲು ಇನ್ನೂ 55 ರನ್‌ಗಳ ಅಗತ್ಯವಿತ್ತು. ಈ ವೇಳೆಗೆ ಎಂಟನೇ ವಿಕೆಟ್‌ಗೆ ಜತೆಯಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಸಮಯೋಚಿತ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡವನ್ನು ಫಾಲೋ ಆನ್ ಭೀತಿಯಿಂದ ಪಾರು ಮಾಡುವಲ್ಲಿ ಯಶಸ್ವಿಯಾದರು. ಕಳೆದೆರಡು ಟೆಸ್ಟ್ ಪಂದ್ಯದಲ್ಲಿ 40+ ರನ್ ಬಾರಿಸಿ ಮುಗ್ಗರಿಸಿದ್ದ ಹೈದರಾಬಾದ್ ಮೂಲದ ನಿತೀಶ್ ಕುಮಾರ್ ರೆಡ್ಡಿ, ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ನಿರ್ಣಾಯಕ ಘಟ್ಟದ ಹಂತದಲ್ಲಿ ಆಕರ್ಷಕ ಚೊಚ್ಚಲ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಕ್ಸಿಂಗ್ ಡೇ ಟೆಸ್ಟ್: ಫಾಲೋ ಆನ್ ಭೀತಿಗೆ ಸಿಲುಕಿದ ಟೀಂ ಇಂಡಿಯಾ!
ನಿತೀಶ್ ಕುಮಾರ್ ರೆಡ್ಡಿ 81 ಎಸೆತಗಳನ್ನು ಎದುರಿಸಿ ಚೊಚ್ಚಲ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದರು. ನಿತೀಶ್ ರೆಡ್ಡಿಗೆ ಮತ್ತೊಂದು ತುದಿಯಲ್ಲಿ ಬೌಲಿಂಗ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಉತ್ತಮ ಸಾಥ್ ನೀಡಿದ್ದಾರೆ. ಸದ್ಯ 86 ಓವರ್ ಅಂತ್ಯದ ವೇಳೆಗೆ ಭಾರತ ತಂಡವು 7 ವಿಕೆಟ್ ಕಳೆದುಕೊಂಡು 284 ರನ್ ಬಾರಿಸಿದ್ದು, ಇನ್ನೂ 190 ರನ್‌ಗಳ ಹಿನ್ನಡೆಯಲ್ಲಿದೆ. 8ನೇ ವಿಕೆಟ್‌ಗೆ ಸುಂದರ್ ಹಾಗೂ ನಿತೀಶ್ ರೆಡ್ಡಿ ಮುರಿಯದ 63 ರನ್‌ಗಳ ಅಮೂಲ್ಯ ಜತೆಯಾಟ ನಡೆಸಿದ್ದಾರೆ.
