Boxing Day Test: ಭಾರತ ಎದುರು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಇಲ್ಲಿನ ಸೂಪರ್‌ಸ್ಪೋರ್ಟ್ ಪಾರ್ಕ್ ಆತಿಥ್ಯವನ್ನು ವಹಿಸಿದೆ. ಇನ್ನು ಟೀಂ ಇಂಡಿಯಾ ಪರ ಕನ್ನಡದ ವೇಗಿ ಪ್ರಸಿದ್ಧ್ ಕೃಷ್ಣ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಈಗಾಗಲೇ ಭಾರತ ಪರ ಟಿ20 ಹಾಗೂ ಏಕದಿನ ಕ್ರಿಕೆಟ್ ಆಡಿರುವ ಪ್ರಸಿದ್ದ್ ಕೃಷ್ಣ ಇದೀಗ ಟೆಸ್ಟ್‌ಗೂ ಪಾದಾರ್ಪಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಸೆಂಚೂರಿಯನ್(ಡಿ.26): ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಲು ಉಭಯ ತಂಡಗಳು ಸಜ್ಜಾಗಿವೆ.
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಇಲ್ಲಿನ ಸೂಪರ್‌ಸ್ಪೋರ್ಟ್ ಪಾರ್ಕ್ ಆತಿಥ್ಯವನ್ನು ವಹಿಸಿದೆ. ಇನ್ನು ಟೀಂ ಇಂಡಿಯಾ ಪರ ಕನ್ನಡದ ವೇಗಿ ಪ್ರಸಿದ್ಧ್ ಕೃಷ್ಣ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಈಗಾಗಲೇ ಭಾರತ ಪರ ಟಿ20 ಹಾಗೂ ಏಕದಿನ ಕ್ರಿಕೆಟ್ ಆಡಿರುವ ಪ್ರಸಿದ್ದ್ ಕೃಷ್ಣ ಇದೀಗ ಟೆಸ್ಟ್‌ಗೂ ಪಾದಾರ್ಪಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನುಳಿದಂತೆ ಟೀಂ ಇಂಡಿಯಾದ ಸ್ಟಾರ್ ಬೌಲಿಂಗ್ ಆಲ್ರೌಂಡರ್ ರವೀಂದ್ರ ಜಡೇಜಾ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಈ ಪಿಚ್ ವೇಗಿಗಳಿಗೆ ಹೆಚ್ಚು ನೆರವು ನೀಡುವುದರಿಂದ ಭಾರತ ನಾಲ್ವರು ತಜ್ಞ ವೇಗಿಗಳು ಹಾಗೂ ಓರ್ವ ತಜ್ಞ ಸ್ಪಿನ್ನರ್‌ನೊಂದಿಗೆ ಕಣಕ್ಕಿಳಿದಿದೆ.
ಎರಡು ತಂಡಗಳ ಆಟಗಾರರ ಪಟ್ಟಿ:
ಭಾರತ: ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ಅರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್.
ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್, ಏಯ್ಡನ್ ಮಾರ್ಕ್‌ರಮ್, ಜೊರ್ಜಿ, ತೆಂಬಾ ಬವುಮಾ(ನಾಯಕ), ಬೆಡಿಂಗ್‌ಹ್ಯಾಂ, ಕೀಗನ್, ವೆರೈನ್, ಮಾರ್ಕೊ ಯಾನ್ಸನ್, ಗೆರಾಲ್ಡ್ ಕೋಟ್ಜೀ, ಕಗಿಸೋ ರಬಾಡ, ನಂದ್ರೆ ಬುರ್ಗರ್.
ಪಂದ್ಯಆರಂಭ: ಮಧ್ಯಾಹ್ನ 1.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ ಹಾಟ್‌ಸ್ಟಾರ್