ಬಾಕ್ಸಿಂಗ್ ಡೇ ಟೆಸ್ಟ್: ಗಿಲ್-ಪೂಜಾರ ಔಟ್..!
ಟೀಂ ಇಂಡಿಯಾ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ದಿಢೀರ್ ಎನ್ನುವಂತೆ 2 ವಿಕೆಟ್ ಕಳೆದುಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಮೆಲ್ಬರ್ನ್(ಡಿ.27): ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಮೊದಲ ಸೆಷನ್‌ನಲ್ಲಿ ಶುಭ್‌ಮನ್ ಗಿಲ್ ಹಾಗೂ ಚೇತೇಶ್ವರ್ ಪೂಜಾರ ವಿಕೆಟ್ ಒಪ್ಪಿಸಿದ್ದಾರೆ. ಲಂಚ್ ಬ್ರೇಕ್ ವೇಳೆಗೆ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 90 ರನ್ ಬಾರಿಸಿದೆ. ಈ ಮೂಲಕ ಭಾರತ ಇನ್ನು 105 ರನ್‌ಗಳ ಹಿನ್ನಡೆಯಲ್ಲಿದೆ.
ಹೌದು, ಮೊದಲ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 36 ರನ್ ಬಾರಿಸಿದ್ದ ಟೀಂ ಇಂಡಿಯಾ ಎರಡನೇ ದಿನವನ್ನು ತುಂಬ ಎಚ್ಚರಿಕೆಯಿಂದಲೇ ಆರಂಭಿಸಿತು. ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಮಂದಗತಿಯ ಬ್ಯಾಟಿಂಗ್ ಮೊರೆಹೋದರೆ, ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಗಿಲ್ ಆಕರ್ಷಕ ಬೌಂಡರಿಗಳ ಮೂಲಕ ಗಮನ ಸೆಳೆದರು. ಎರಡನೇ ವಿಕೆಟ್‌ಗೆ ಪೂಜಾರ ಹಾಗೂ ಶುಭ್‌ಮನ್ ಗಿಲ್ 64 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಆರಂಭಿಕ ಸಂಕಷ್ಟದಿಂದ ಪಾರು ಮಾಡಿದರು.
ಬಾಕ್ಸಿಂಗ್ ಡೇ ಟೆಸ್ಟ್: ಕ್ರಿಕೆಟ್ ಪಂಡಿತರ ಮನಗೆದ್ದ ರಹಾನೆ ನಾಯಕತ್ವ
ಕೇವಲ 65 ಎಸೆತಗಳಲ್ಲಿ 8 ಬೌಂಡರಿ ಸಹಿತ 45 ರನ್ ಬಾರಿಸಿ ಅರ್ಧಶತಕದತ್ತ ಮುನ್ನುಗ್ಗುತ್ತಿದ್ದ ಗಿಲ್ ಅವರನ್ನು ಪೆವಿಲಿಯನ್ನಿಗಟ್ಟುವಲ್ಲಿ ಪ್ಯಾಟ್ ಕಮಿನ್ಸ್ ಯಶಸ್ವಿಯಾದರು. ಇದಾಗಿ ಕೆಲವೇ ಹೊತ್ತಿನಲ್ಲಿ ಚೇತೇಶ್ವರ್ ಪೂಜಾರಗೂ ನಂ.1 ಟೆಸ್ಟ್ ವೇಗಿ ಕಮಿನ್ಸ್ ಪೆವಿಲಿಯನ್ ಹಾದಿ ತೋರಿಸಿದರು. ಪೂಜಾರ 70 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 17 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಎರಡನೇ ದಿನದಾಟದ ಮೊದಲ ಸೆಷನ್‌ನಲ್ಲಿ 54 ರನ್ ದಾಖಲಾಗಿದ್ದು, ಎರಡು ವಿಕೆಟ್‌ಗಳು ಪತನವಾಗಿವೆ. ಭಾರತ ಪರ ರಹಾನೆ 10 ಹಾಗೂ ವಿಹಾರಿ 13 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.