ಬ್ರಿಸ್ಬೇನ್ ಟೆಸ್ಟ್: ಆಸ್ಟ್ರೇಲಿಯಾ ಆಲೌಟ್ @369
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬ್ರಿಸ್ಬೇನ್ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ 369 ರನ್ ಬಾರಿಸಿ ಆಲೌಟ್ ಆಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಬ್ರಿಸ್ಬೇನ್(ಜ.16): ನಾಯಕ ಟಿಮ್ ಪೈನ್ ಆಕರ್ಷಕ ಅರ್ಧಶತಕ ಹಾಗೂ ಬಾಲಂಗೋಚಿಗಳ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಗಾಬಾ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 369 ರನ್ ಬಾರಿಸಿ ಸರ್ವಪತನ ಕಂಡಿದೆ.
ಹೌದು, ಮೊದಲ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 274 ರನ್ ಬಾರಿಸಿದ್ದ ಆಸ್ಟ್ರೇಲಿಯಾ ತಂಡ, ಎರಡನೇ ದಿನವೂ ಎಚ್ಚರಿಕೆಯ ಆಟಕ್ಕೆ ಮೊರೆ ಹೋಯಿತು. ನಾಯಕ ಟಿಮ್ ಪೈನ್ 104 ಎಸೆತಗಳನ್ನು ಎದುರಿ ಭರ್ತಿ 50 ರನ್ ಬಾರಿಸಿ ಶಾರ್ದೂಲ್ ಠಾಕೂರ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಆಲ್ರೌಂಡರ್ ಕ್ಯಾಮರೋನ್ ಗ್ರೀನ್ 47 ರನ್ ಬಾರಿಸಿ ಕೇವಲ 3 ರನ್‌ಗಳಿಂದ ಅರ್ಧಶತಕ ವಂಚಿತರಾದರು.
ಲಬುಶೇನ್ ಆಕರ್ಷಕ ಶತಕ, ಆಸೀಸ್‌ಗೆ ಮೊದಲ ದಿನದ ಗೌರವ
ಇನ್ನು ಕೊನೆಯಲ್ಲಿ ಮಿಚೆಲ್ ಸ್ಟಾರ್ಕ್ ಅಜೇಯ 20, ನೂರನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ನೇಥನ್ ಲಯನ್ 24 ಹಾಗೂ ಜೋಸ್ ಹ್ಯಾಜಲ್‌ವುಡ್ 11 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 350ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.
ಭಾರತ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಟಿ. ನಟರಾಜನ್, ವಾಷಿಂಗ್ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್ ತಲಾ 3 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಕಬಳಿಸಿದರು.
ಸಂಕ್ಷಿಪ್ತ ಸ್ಕೋರ್
ಅಸ್ಟ್ರೇಲಿಯಾ: 369/10
ಮಾರ್ನಸ್ ಲಬುಶೇನ್: 108
ಟಿ. ನಟರಾಜನ್: 78/3
(* ಆಸ್ಟ್ರೇಲಿಯಾದ ಮೊದಲ ಇನಿಂಗ್ಸ್ ಮುಕ್ತಾಯದ ವೇಳೆಗೆ)