ಬ್ರಿಸ್ಬೇನ್ ಟೆಸ್ಟ್: ಭಾರತಕ್ಕೆ ಆರಂಭಿಕ ಆಘಾತ

ಬ್ರಿಸ್ಬೇನ್‌ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್‌ ಆರಂಭಿಸಿರುವ ಟೀಂ ಇಂಡಿಯಾಗೆ ಆರಂಭದಲ್ಲೇ ಆಘಾತ ಎದುರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

Brisbane Test Nathan Lyon gets the big wicket of Rohit Sharma kvn

ಬ್ರಿಸ್ಬೇನ್‌(ಜ.16): ಆಸ್ಟ್ರೇಲಿಯಾ ವಿರುದ್ದದ 4ನೇ ಟೆಸ್ಟ್‌ ಪಂದ್ಯದಲ್ಲಿ ಮೊದಲ ಇನಿಂಗ್ಸ್‌ ಆರಂಭಿಸಿರುವ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ. ಚಹಾ ವಿರಾಮದ ವೇಳೆ ಭಾರತ ತಂಡ 2 ವಿಕೆಟ್‌ ಕಳೆದುಕೊಂಡು 62 ರನ್‌ ಬಾರಿಸಿದ್ದು, ಇನ್ನೂ 307 ರನ್‌ಗಳ ಹಿನ್ನಡೆಯಲ್ಲಿದೆ. 

ಇಲ್ಲಿನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದ ಮೊದಲ ಸೆಷನ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು 369 ರನ್‌ಗಳಿಗೆ ಆಲೌಟ್‌ ಮಾಡುವಲ್ಲಿ ಅಜಿಂಕ್ಯ ರಹಾನೆ ಪಡೆ ಯಶಸ್ವಿಯಾಗಿದೆ. ಇನ್ನು ಮೊದಲ ಇನಿಂಗ್ಸ್‌ ಆರಂಭಿಸಿದ ಭಾರತ ತಂಡ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟ್ಸ್‌ಮನ್‌ ಶುಭ್‌ಮನ್‌ ಗಿಲ್‌ ಕೇವಲ 7 ರನ್‌ ಬಾರಿಸಿ ಪ್ಯಾಟ್ ಕಮಿನ್ಸ್‌ಗೆ ವಿಕೆಟ್‌ ಒಪ್ಪಿಸಿದರು.

ದೊಡ್ಡ ಹೊಡೆತಕ್ಕೆ ಯತ್ನಿಸಿ ಕೈ ಸುಟ್ಟುಕೊಂಡ ಹಿಟ್‌ಮ್ಯಾನ್‌: ಟೀಂ ಇಂಡಿಯಾ ಕೇವಲ 11 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ಪೂಜಾರ ಜತೆ ರೋಹಿತ್ ಶರ್ಮಾ ಒಟ್ಟು 49 ರನ್‌ಗಳ ಜತೆಯಾಟ ನಿಭಾಯಿಸುವ ಮೂಲಕ ತಂಡಕ್ಕೆ ಆಸರೆಯಾಗಲು ಯತ್ನಿಸಿದರು. 49ರನ್‌ಗಳ ಜತೆಯಾಟದ ಪೈ ರೋಹಿತ್ ಒಬ್ಬರೇ 44 ರನ್‌ ಕಾಣಿಕೆ ನೀಡಿದರು. ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ 74 ಎಸೆತಗಳನ್ನು ಎದುರಿಸಿ 6 ಬೌಂಡರಿ ಸಹಿತ 44 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು. ನೇಥನ್‌ ಲಯನ್ ಬೌಲಿಂಗ್‌ನಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ಮಿಚೆಲ್‌ ಸ್ಟಾರ್ಕ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ಬ್ರಿಸ್ಬೇನ್‌ ಟೆಸ್ಟ್‌: ಆಸ್ಟ್ರೇಲಿಯಾ ಆಲೌಟ್‌ @369

ಇದೀಗ ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ(2) ಹಾಗೂ ಟೆಸ್ಟ್‌ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ(8) ಕ್ರೀಸ್ ಕಾಯ್ದುಕೊಂಡಿದ್ದಾರೆ.
 
ಸಂಕ್ಷಿಪ್ತ ಸ್ಕೋರ್:

ಆಸ್ಟ್ರೇಲಿಯಾ: 369
ಭಾರತ: 62/2

(*2ನೇ ದಿನದಾಟದ ಚಹಾ ವಿರಾಮದ ವೇಳೆಗೆ)
 

Latest Videos
Follow Us:
Download App:
  • android
  • ios