ಬ್ರಿಸ್ಬೇನ್ ಟೆಸ್ಟ್: ಚಹಾ ವಿರಾಮದ ವೇಳೆಗೆ ಆಸೀಸ್‌ಗೆ 276 ರನ್‌ಗಳ ಮುನ್ನಡೆ
ಬ್ರಿಸ್ಬೇನ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 276 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ. ಆಸೀಸ್ ತಂಡವನ್ನು ಆದಷ್ಟು ಬೇಗ ಆಲೌಟ್ ಮಾಡುವ ಲೆಕ್ಕಾಚಾರದಲ್ಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಬ್ರಿಸ್ಬೇನ್(ಜ.18): ಸ್ಟೀವ್ ಸ್ಮಿತ್ ಬಾರಿಸಿದ ಆಕರ್ಷಕ ಅರ್ಧಶತಕದ ನೆರವಿನಿಂದ ಬ್ರಿಸ್ಬೇನ್ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಚಹಾ ವಿರಾಮದ ವೇಳೆಗೆ ಆಸ್ಟ್ರೇಲಿಯಾ ತಂಡ 7 ವಿಕೆಟ್ ಕಳೆದುಕೊಂಡು 243 ರನ್ ಬಾರಿಸಿದ್ದು, ಎರಡನೇ ಇನಿಂಗ್ಸ್‌ನಲ್ಲಿ ಒಟ್ಟಾರೆ 276 ರನ್‌ಗಳ ಮುನ್ನಡೆ ಸಾಧಿಸಿದೆ.
ಹೌದು, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ನಾಲ್ಕನೇ ದಿನದಾಟದ ಮೊದಲ ಸೆಷನ್‌ನಲ್ಲಿ 4 ವಿಕೆಟ್ ಕಳೆದುಕೊಂಡು 149 ರನ್ ಬಾರಿಸಿದ್ದ ಆಸ್ಟ್ರೇಲಿಯಾಗೆ ಆ ಬಳಿಕ ಕ್ಯಾಮರೋನ್ ಗ್ರೀನ್ ಹಾಗೂ ಸ್ಟೀವ್ ಸ್ಮಿತ್ ಆಸರೆಯಾದರು. ಸ್ಮಿತ್ 74 ಎಸೆತಗಳಲ್ಲಿ 7 ಬೌಂಡರಿ ಸಹಿತ 55 ರನ್ ಬಾರಿಸಿ ಸಿರಾಜ್‌ಗೆ ವಿಕೆಟ್ ಒಪ್ಪಿಸಿದರೆ, ಕ್ಯಾಮರೋನ್ ಗ್ರೀನ್(37) ಹಾಗೂ ಟಿಮ್ ಪೈನ್ ಅವರನ್ನು ಶಾರ್ದೂಲ್ ಠಾಕೂರ್ ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ರಿಸ್ಬೇನ್ ಟೆಸ್ಟ್: ಉತ್ತಮ ಆರಂಭ ಪಡೆದಿದ್ದ ಆಸೀಸ್‌ಗೆ, ಭಾರತ ಶಾಕ್..!
ಭಾರತ ಪರ ಶಾರ್ದೂಲ್ ಠಾಕೂರ್ ಹಾಗೂ ಮೊಹಮ್ಮದ್ ಸಿರಾಜ್ ತಲಾ 3 ವಿಕೆಟ್ ಪಡೆದರೆ, ವಾಷಿಂಗ್ಟನ್ ಸುಂದರ್ ಒಂದು ವಿಕೆಟ್ ಪಡೆದಿದ್ದಾರೆ. ಸದ್ಯ ಮಿಚೆಲ್ ಸ್ಟಾರ್ಕ್ (01) ಹಾಗೂ ಪ್ಯಾಟ್ ಕಮಿನ್ಸ್(02) ಕ್ರೀಸ್ ಕಾಯ್ದುಕೊಂಡಿದ್ದಾರೆ.