ಗೆಲ್ಲಲು ಕೇವಲ 79 ರನ್‌ಗಳ ಸಾಧಾರಣ ಗುರಿ ಪಡೆದ ಭಾರತಕ್ಕೆ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಮೊದಲ ಎಸೆತದಲ್ಲೇ ಬೌಂಡರಿ ಬಾರಿಸುವ ಮೂಲಕ ಖಾತೆ ತೆರೆದ ಜೈಸ್ವಾಲ್ ಕೇವಲ 23 ಎಸೆತಗಳನ್ನು ಎದುರಿಸಿ 6 ಬೌಂಡರಿ ಸಹಿತ 28 ರನ್ ಬಾರಿಸಿ ನಂದ್ರೆ ಬರ್ಗರ್‌ಗೆ ವಿಕೆಟ್ ಒಪ್ಪಿಸಿದರು.
ಕೇಪ್‌ಟೌನ್(ಜ.04): ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಕೇಪ್‌ಟೌನ್ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ಎದುರು 7 ವಿಕೆಟ್ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1ರ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದಷ್ಟೇ ಅಲ್ಲದೇ ಕೇಪ್‌ಟೌನ್ ಟೆಸ್ಟ್‌ನಲ್ಲಿ ಗೆಲುವಿನ ರುಚಿ ನೋಡಿದ ಮೊದಲ ಭಾರತೀಯ ನಾಯಕ ಎನ್ನುವ ಕೀರ್ತಿಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.
ಗೆಲ್ಲಲು ಕೇವಲ 79 ರನ್‌ಗಳ ಸಾಧಾರಣ ಗುರಿ ಪಡೆದ ಭಾರತಕ್ಕೆ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಮೊದಲ ಎಸೆತದಲ್ಲೇ ಬೌಂಡರಿ ಬಾರಿಸುವ ಮೂಲಕ ಖಾತೆ ತೆರೆದ ಜೈಸ್ವಾಲ್ ಕೇವಲ 23 ಎಸೆತಗಳನ್ನು ಎದುರಿಸಿ 6 ಬೌಂಡರಿ ಸಹಿತ 28 ರನ್ ಬಾರಿಸಿ ನಂದ್ರೆ ಬರ್ಗರ್‌ಗೆ ವಿಕೆಟ್ ಒಪ್ಪಿಸಿದರು.
ಜಸ್ಪ್ರೀತ್ ಬುಮ್ರಾ ಬೆಂಕಿ ಬೌಲಿಂಗ್, ಕೇಪ್‌ಟೌನ್ ಟೆಸ್ಟ್ ಗೆಲ್ಲಲು ಭಾರತಕ್ಕೆ ಕೇವಲ 79 ರನ್ ಗುರಿ
ಇನ್ನು ಶುಭ್‌ಮನ್ ಗಿಲ್ 10 ಹಾಗೂ ವಿರಾಟ್ ಕೊಹ್ಲಿ 12 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆದರೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ನಾಯಕ ರೋಹಿತ್ ಶರ್ಮಾ ಅಜೇಯ 17 ರನ್ ಬಾರಿಸಿದರೆ, ಶ್ರೇಯಸ್ ಅಯ್ಯರ್ ಬೌಂಡರಿ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ರೋಹಿತ್ ಶರ್ಮಾ ದಾಖಲೆ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕೇಪ್‌ಟೌನ್ ಟೆಸ್ಟ್ ಪಂದ್ಯವನ್ನು ಜಯಿಸುವ ಮೂಲಕ, ಈ ಸ್ಟೇಡಿಯಂನಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ಏಷ್ಯಾದ ಮೊದಲ ನಾಯಕ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಇದಷ್ಟೇ ಅಲ್ಲದೇ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡ ಭಾರತದ ಎರಡನೇ ನಾಯಕ ಎನಿಸಿಕೊಂಡಿದ್ದಾರೆ. ಈ ಮೊದಲು ಧೋನಿ ನೇತೃತ್ವದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿತ್ತು.
ಮೊದಲ ದಿನದಾಟದಂತ್ಯದ ವೇಳೆಗೆ ಎರಡನೇ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವು 3 ವಿಕೆಟ್ ಕಳೆದುಕೊಂಡು 62 ರನ್ ಬಾರಿಸಿತ್ತು. ಈ ಮೂಲಕ 36 ರನ್ ಹಿನ್ನಡೆಯಲಿತ್ತು. ಎರಡನೇ ದಿನದಾಟದ ಆರಂಭದಲ್ಲೇ ವೇಗಿ ಜಸ್ಪ್ರೀತ್ ಬುಮ್ರಾ ಬಿರುಗಾಳಿಯಂತಹ ದಾಳಿ ನಡೆಸುವ ಮೂಲಕ ಹರಿಣಗಳ ಬ್ಯಾಟಿಂಗ್ ಪಡೆ ಪೆವಿಲಿಯನ್ ಪೆರೇಡ್ ನಡೆಸುವಂತೆ ಮಾಡಿದರು.
Cape Town Test 23 ವಿಕೆಟ್ ಪತನದೊಂದಿಗೆ 2024 ಆರಂಭ: ಸಚಿನ್ ತೆಂಡುಲ್ಕರ್ ಟ್ವೀಟ್ ವೈರಲ್
ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಕರಾರುವಕ್ಕಾದ ದಾಳಿಗೆ ತತ್ತರಿಸಿದ ಆತಿಥೇಯ ದಕ್ಷಿಣ ಆಫ್ರಿಕಾ ತಂಡವು ಎರಡನೇ ಇನಿಂಗ್ಸ್‌ನಲ್ಲಿ ಕೇವಲ 176 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಕೇಪ್‌ಟೌನ್ ಟೆಸ್ಟ್ ಪಂದ್ಯ ಗೆದ್ದು ಸರಣಿ ಸಮಬಲ ಸಾಧಿಸಲು ಭಾರತಕ್ಕೆ ಕೇವಲ 79 ರನ್ ಗುರಿ ಸಿಕ್ಕಿತು.
ಭಾರತ ಪರ ಎರಡನೇ ಇನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ 6 ವಿಕೆಟ್ ಪಡೆದರೆ, ಮುಕೇಶ್ ಕುಮಾರ್, ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ 1 ವಿಕೆಟ್ ಪಡೆದರು.
ಅತಿಕಡಿಮೆ ಎಸೆತದ ಟೆಸ್ಟ್ ಪಂದ್ಯ:
ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಕೇಪ್‌ಟೌನ್ ಟೆಸ್ಟ್ ಪಂದ್ಯವು ಅತಿಕಡಿಮೆ ಎಸೆತ ಕಂಡ ಟೆಸ್ಟ್ ಎನಿಸಿಕೊಂಡಿತು. ಈ ಪಂದ್ಯದಲ್ಲಿ ಉಭಯ ತಂಡಗಳು ಕೇವಲ 642 ಎಸೆತಗಳನ್ನು ಹಾಕಿದರು. ಇದಕ್ಕೂ ಮೊದಲು 1932ರಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಮೆಲ್ಬರ್ನ್‌ನಲ್ಲಿ ನಡೆದ ಪಂದ್ಯವು 656 ಎಸೆತಗಳಲ್ಲಿ ಕೊನೆಗೊಂಡಿತ್ತು.
