ನ್ಯೂಜಿಲೆಂಡ್ ವಿರುದ್ದ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ 44 ರನ್ ಗೆಲುವು ದಾಖಲಿಸಿದೆ. ಈ ಮೂಲಕ ಲೀಗ್ ಹಂತದಲ್ಲಿ ಎಲ್ಲಾ ಪಂದ್ಯ ಗೆದ್ದು ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿದೆ. ಈ ಗೆಲುವಿನಿಂದ ಇದೀಗ ಭಾರತ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೋರಾಟ ನಡೆಸಲಿದೆ.
ದುಬೈ(ಮಾ.02) ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಮತ್ತೊಂದು ಗೆಲುವು ದಾಖಲಿಸಿದೆ. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಭಾರತ 44 ರನ್ ಗೆಲುವು ದಾಖಲಿಸಿದೆ. ಆರಂಭದಲ್ಲಿ ಭಾರತ ಬ್ಯಾಟಿಂಗ್‌ನಲ್ಲಿ ಕೊಂಚ ಎಡವಿತ್ತು. ಆದರೆ ಬೌಲರ್‌ಗಳೇ ಮೇಲುಗೈ ಸಾಧಿಸಿದ್ದ ಪಿಚ್‌ನಲ್ಲಿ ದಿಟ್ಟ ಹೋರಾಟ ನಡೆಸಿದ ಟೀಂ ಇಂಡಿಯಾ 249 ರನ್ ಸಿಡಿಸಿತ್ತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಭಾರತದ ದಾಳಿಗೆ ಕುಸಿಯಿತು. ಪರಿಣಾಮ 45.3 ಓವರ್‌ಗಳಲ್ಲಿ 205 ರನ್ ಸಿಡಿಸಿ ನ್ಯೂಜಿಲೆಂಡ್ ಆಲೌಟ್ ಆಗಿದೆ. ಭರ್ಜರಿ ಗೆಲುವಿನೊಂದಿಗೆ ಟೀಂ ಇಂಡಿಯಾ ಅಜೇಯನಾಗಿ ಸೆಮಿಫೈನಲ್ ಪ್ರವೇಶಿಸಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿಯಾಗುತ್ತಿದೆ.
250 ರನ್ ಟಾರ್ಗೆಟ್ ಪಡೆದಿದ್ದ ನ್ಯೂಜಿಲೆಂಡ್ ಕೂಡ ಭಾರತದ ದಾಳಿಗೆ ತತ್ತರಿಸಿತ್ತು. ಆದರೆ ಕೇನ್ ವಿಲಿಯಮ್ಸ್ ದಿಟ್ಟ ಹೋರಾಟ ನೀಡಿದರು. ಕೇನ್ ವಿಲಿಯಮ್ಸ್ ಕ್ರೀಸ್‌ನಲ್ಲಿರುವ ಇರುವವರೆಗೆ ನ್ಯೂಜಿಲೆಂಡ್ ಗೆಲುವಿನ ಹಾದಿಯಲ್ಲಿ ಸಾಗಿತ್ತು. ಆದರೆ ವಿಲಿಯಮ್ಸ್ ವಿಕೆಟ್ ಪತನದ ಬೆನ್ನಲ್ಲೇ ನ್ಯೂಜಿಲೆಂಡ್ ಸೋಲು ಖಚಿತಗೊಂಡಿತು.
ಏಕದಿನ ಕ್ರಿಕೆಟ್‌ನಲ್ಲಿ ಟಾಸ್ ಸೋಲುವುದರಲ್ಲೂ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ!
ವರುಣ್ ಚಕ್ರವರ್ತಿ ಅದ್ಭುತ ಬೌಲಿಂಗ್ ದಾಳಿಗೆ ನ್ಯೂಜಿಲೆಂಡ್ ಬಳಿ ಉತ್ತರವೇ ಇಲ್ಲದಾಯಿತು. ಕಾರಣ 5 ವಿಕೆಟ್ ಕಬಳಿಸಿದ ವರುಣ್ ಚಕ್ರವರ್ತಿ ನ್ಯೂಜಿಲೆಂಡ್ ತಂಡದ ಸಂಪೂರ್ಣ ಕುಸಿತಕ್ಕೆ ಕಾರಣರಾದರು. ಇತ್ತ ಕುಲ್ದೀಪ್ ಯಾದವ್ 2, ರವೀಂದ್ರ ಜಡೇಜಾ 1, ಹಾರ್ದಿಕ್ ಪಾಂಡ್ಯ 1, ಅಕ್ಸರ್ ಪಟೇಲ್ 1 ವಿಕೆಟ್ ಕಬಳಿಸಿದರು. ಕೇನ್ ವಿಲಿಯಮ್ಸ್ ಹೊರತುಪಡಿಸಿದರೆ ಇನ್ನುಳಿದ ಯಾರಿಂದಲೂ ಹೋರಾಟ ಬರಲಿಲ್ಲ. ಇದರ ಪರಿಣಾಮ ನ್ಯೂಜಿಲೆಂಡ್ 205 ರನ್‌ಗಳಿಗೆ ಆಲೌಟ್ ಆಯಿತು.
ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ 3 ಪಂದ್ಯದಲ್ಲಿ ಗೆದ್ದೂ ಸೆಮಿಫೈನಲ್ ಪ್ರವೇಶಿಸಿದ ಏಕೈಕ ತಂಡ ಭಾರತ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಮಣಿಸಿದ್ದ ಭಾರತ, 2ನೇ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಿತ್ತು. ಇದೀಗ ನ್ಯೂಜಿಲೆಂಡ್ ಮಣಿಸಿದೆ. ಈ ಮೂಲಕ 6 ಅಂಕ ಸಂಪಾದಿಸಿದೆ. ಎ ಗುಂಪಿನಿಂದ ಭಾರತ ಹಾಗೂ ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಅರ್ಹತೆ ಪಡೆದರೆ, ಬಿ ಗುಂಪಿನಿಂದ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ಅರ್ಹತೆ ಪಡೆದಿದೆ. ಸೌತ್ ಆಫ್ರಿಕಾ 3 ಪಂದ್ಯದಲ್ಲಿ 2 ಪಂದ್ಯ ಗೆದ್ದು ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಇತ್ತ ಆಸ್ಟ್ರೇಲಿಯಾ 3 ಪಂದ್ಯದಲ್ಲಿ 2 ಪಂದ್ಯ ಮಳೆಗೆ ಆಹುತಿಯಾಗಿದೆ. ಇನ್ನೊಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ.
ಕೆ.ಎಲ್. ರಾಹುಲ್ ಯಾವಾಗ ಅಪ್ಪ ಆಗ್ತಾರೆ? ಮಗಳು ಆಥಿಯಾಳ ಸತ್ಯ ರಿವೀಲ್ ಮಾಡಿದ ಸುನೀಲ್ ಶೆಟ್ಟಿ!
