Asianet Suvarna News Asianet Suvarna News

ICC World Cup 2023 ಹಾಲಿ ಚಾಂಪಿಯನ್ ಇಂಗ್ಲೆಂಡ್‌ಗೆ ಸವಾಲಿನ ಗುರಿ ನೀಡಿದ ಕಾಂಗರೂ ಪಡೆ..!

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡುವಲ್ಲಿ ಕ್ರಿಸ್ ವೋಕ್ಸ್ ಯಶಸ್ವಿಯಾದರು. ಟ್ರಾವಿಸ್ ಹೆಡ್ 11 ಹಾಗೂ ಡೇವಿಡ್ ವಾರ್ನರ್ 15 ರನ್ ಗಳಿಸಿ ಕ್ರಿಸ್ ವೋಕ್ಸ್‌ಗೆ ವಿಕೆಟ್ ಒಪ್ಪಿಸಿದರು. 

Chris Woakes Registers 4 Wicket Haul England Bowl Out Australia For 286 against Australia kvn
Author
First Published Nov 4, 2023, 6:16 PM IST | Last Updated Nov 4, 2023, 6:16 PM IST

ಅಹಮದಾಬಾದ್‌(ನ.04): ಆರಂಭಿಕ ಆಘಾತದ ಹೊರತಾಗಿಯೂ ಮಾರ್ನಸ್ ಲಬುಶೇನ್ ಬಾರಿಸಿದ ಜವಾಬ್ದಾರಿಯುತ ಬ್ಯಾಟಿಂಗ್ ಹಾಗೂ ಆಲ್ರೌಂಡರ್‌ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಆಸ್ಟ್ರೇಲಿಯಾ ತಂಡವು 49.3 ಓವರ್‌ಗಳಲ್ಲಿ 286 ರನ್ ಬಾರಿಸಿ ಸರ್ವಪತನ ಕಂಡಿದೆ. ಈ ಮೂಲಕ ಹಾಲಿ ಚಾಂಪಿಯನ್ ಇಂಗ್ಲೆಂಡ್‌ಗೆ ಸವಾಲಿನ ಗುರಿ ನೀಡುವಲ್ಲಿ ಕಾಂಗರೂ ಪಡೆ ಯಶಸ್ವಿಯಾಗಿದೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡುವಲ್ಲಿ ಕ್ರಿಸ್ ವೋಕ್ಸ್ ಯಶಸ್ವಿಯಾದರು. ಟ್ರಾವಿಸ್ ಹೆಡ್ 11 ಹಾಗೂ ಡೇವಿಡ್ ವಾರ್ನರ್ 15 ರನ್ ಗಳಿಸಿ ಕ್ರಿಸ್ ವೋಕ್ಸ್‌ಗೆ ವಿಕೆಟ್ ಒಪ್ಪಿಸಿದರು. 

ಕೇವಲ 38 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆಸ್ಟ್ರೇಲಿಯಾ ತಂಡಕ್ಕೆ ಮೂರನೇ ವಿಕೆಟ್‌ಗೆ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಬುಶೇನ್ 75 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸ್ಟೀವ್ ಸ್ಮಿತ್ 44 ರನ್ ಬಾರಿಸಿ ಆದಿಲ್ ರಶೀದ್‌ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ 3 ರನ್ ಗಳಿಸಿ ಆದಿಲ್ ರಶೀದ್‌ಗೆ ಎರಡನೇ ಬಲಿಯಾದರು.

ಲಬುಶೇನ್ ಜವಾಬ್ದಾರಿಯುತ ಬ್ಯಾಟಿಂಗ್: ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಲಬುಶೇನ್ ಆಕರ್ಷಕ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ಲಬುಶೇನ್ 83 ಎಸೆತಗಳನ್ನು ಎದುರಿಸಿ 7 ಬೌಂಡರಿ ಸಹಿತ 71 ರನ್ ಗಳಿಸಿ ಮಾರ್ಕ್‌ ವುಡ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನುಳಿದಂತೆ ಕೆಳ ಮಧ್ಯಮ ಕ್ರಮಾಂಕದಲ್ಲಿ ಕ್ಯಾಮರೋನ್ ಗ್ರೀನ್(47), ಮಾರ್ಕಸ್ ಸ್ಟೋನಿಸ್(35) ಹಾಗೂ ಆಡಂ ಜಂಪಾ(29) ರನ್ ಬಾರಿಸುವ ಮೂಲಕ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.

ಇನ್ನು ಇಂಗ್ಲೆಂಡ್ ತಂಡದ ಪರ ಕ್ರಿಸ್ ವೋಕ್ಸ್ 4 ವಿಕೆಟ್ ಪಡೆದರೆ, ಆದಿಲ್ ರಶೀದ್ ಹಾಗೂ ಮಾರ್ಕ್‌ ವುಡ್ ತಲಾ 2 ವಿಕೆಟ್ ಪಡೆದರು. ಇನ್ನು ಲಿಯಾಮ್‌  ಲಿವಿಂಗ್‌ಸ್ಟೋನ್ ಹಾಗೂ ಡೇವಿಡ್ ವಿಲ್ಲಿ ತಲಾ ಒಂದೊಂದು ವಿಕೆಟ್ ಪಡೆದರು.

Latest Videos
Follow Us:
Download App:
  • android
  • ios