ಸಿಡ್ನಿ(ಮಾ.22): ಅಕ್ಟೋಬರ್‌-ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ನ ಸೆಮಿಫೈನಲ್‌ ಹಾಗೂ ಫೈನಲ್‌ ಪಂದ್ಯಗಳಿಗೆ ಮೀಸಲು ದಿನವನ್ನು ಇರಿಸಲು ಕ್ರಿಕೆಟ್‌ ಆಸ್ಪ್ರೇಲಿಯಾ ಪ್ರಸ್ತಾಪಿಸುವ ಸಾಧ್ಯತೆ ಇದೆ. 

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌, ವಿಶ್ವ ಟಿ20ಗೂ ಕೊರೋನಾ ಅಡ್ಡಿ?

ಸದ್ಯದಲ್ಲೇ ನಡೆಯಲಿರುವ ಐಸಿಸಿ ಕ್ರಿಕೆಟ್‌ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಇತ್ತೀಚೆಗೆ ಆಸ್ಪ್ರೇಲಿಯಾದಲ್ಲಿ ನಡೆದಿದ್ದ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಮೀಸಲು ದಿನ ಇರಿಸದ ಕಾರಣ, ಐಸಿಸಿ ಭಾರೀ ಟೀಕೆಗೆ ಗುರಿಯಾಗಿತ್ತು. ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಸೆಮಿಫೈನಲ್‌ ಪಂದ್ಯ ಮಳೆಗೆ ಬಲಿಯಾದ ಕಾರಣ, ಇಂಗ್ಲೆಂಡ್‌ ತಂಡ ಟೂರ್ನಿಯಿಂದ ಹೊರಬಿದ್ದಿತು. ಆ ನಂತರ ಫೈನಲ್‌ ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಯಿತು.

ಮಹಿಳಾ ಟಿ–20 ವಿಶ್ವಕಪ್‌ ಕ್ರಿಕೆಟ್‌: ಸೆಮೀಸ್ ಆಡದೇ ಭಾರತ ವನಿತೆಯರು ಫೈನಲ್‌ಗೆ ಲಗ್ಗೆ

ಸಭೆಯಲ್ಲಿ ಇನ್ನೂ ಕೆಲ ಪ್ರಮುಖ ವಿಚಾರಗಳ ಬಗ್ಗೆ ವಿವಿಧ ಕ್ರಿಕೆಟ್‌ ಮಂಡಳಿಗಳು ಪ್ರಸ್ತಾಪಿಸುವ ನಿರೀಕ್ಷೆ ಇದೆ. ಜಗತ್ತಿನಾದ್ಯಂತ ಕೊರೋನಾ ವೈರಸ್ ಭೀತಿ ಇರಿವುದರಿಂದ ಟೂರ್ನಿಯನ್ನು ಮುಂದೂಡುವ ಬಗ್ಗೆಯೂ ಚೆರ್ಚೆಯಾಗಬಹುದು ಎನ್ನಲಾಗಿದೆ.