Asianet Suvarna News Asianet Suvarna News

Ind vs NZ ಪಂತ್‌ಗೆ ಚಾನ್ಸ್‌, ಸಂಜುಗೆ ಗೇಟ್‌ ಪಾಸ್‌, ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಮೇಲೆ ನೆಟ್ಟಿಗರು ಕಿಡಿ..!

ಮತ್ತೊಮ್ಮೆ ಭಾರತ ತಂಡದಿಂದ ಹೊರಬಿದ್ದ ಸಂಜು ಸ್ಯಾಮ್ಸನ್‌
ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ 2 ಬದಲಾವಣೆ
ಸಂಜು ಸ್ಯಾಮ್ಸನ್‌ ಅವರನ್ನು ಹೊರಗಿಟ್ಟಿದ್ದಕ್ಕೆ ನೆಟ್ಟಿಗರು ಆಕ್ರೋಶ

Cricket Fans Angry with Shikhar Dhawan as Sanju Samson dropped again from playing 11 in IND vs NZ 2nd ODI kvn
Author
First Published Nov 27, 2022, 9:35 AM IST

ವೆಲ್ಲಿಂಗ್ಟನ್‌(ನ.27): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಸ್ಥಾನ ಪಡೆದಿದ್ದ ಕೇರಳ ಮೂಲದ ಕ್ರಿಕೆಟಿಗ ಸಂಜು ಸ್ಯಾಮ್ಸನ್‌, ಇದೀಗ ಎರಡನೇ ಏಕದಿನ ಪಂದ್ಯಕ್ಕೆ ಭಾರತ ತಂಡದಿಂದ ಕೈಬಿಡಲಾಗಿದೆ. ಮೊದಲ ಏಕದಿನ ಪಂದ್ಯದಲ್ಲಿ ಸಮಯೋಚಿತ 36 ರನ್ ಬಾರಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕನನ್ನು ಮತ್ತೊಮ್ಮೆ ಬೆಂಚ್ ಕಾಯಿಸುವಂತೆ ಮಾಡಿದ್ದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು,  ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ಸರಣಿ ಗೆಲ್ಲುವ ಆಸೆ ಜೀವಂತವಾಗಿರಿಸಿಕೊಳ್ಳಬೇಕಿದ್ದರೇ ಎರಡನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. 3 ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಮುಗ್ಗರಿಸಿರುವ ಟೀಂ ಇಂಡಿಯಾ ಪಾಲಿಗೆ ಎರಡನೇ ಪಂದ್ಯದಲ್ಲಿ ಗೆಲುವು ಅನಿವಾರ್ಯ ಎನಿಸಿದೆ. ಹೀಗಾಗಿ ಭಾರತ ತಂಡವು ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದು. ಸಂಜು ಸ್ಯಾಮ್ಸನ್ ಹಾಗೂ ಶಾರ್ದೂಲ್ ಠಾಕೂರ್‌ಗೆ ವಿಶ್ರಾಂತಿ ನೀಡಲಾಗಿದ್ದು, ದೀಪಕ್ ಹೂಡಾ ಹಾಗೂ ದೀಪಕ್ ಚಹರ್‌ಗೆ ಮಣೆ ಹಾಕಲಾಗಿದೆ. ಓರ್ವ ಹೆಚ್ಚುವರಿ ಬೌಲರ್ ಅಗತ್ಯತೆಯನ್ನು ಮನಗಂಡು ಸಂಜು ಸ್ಯಾಮ್ಸನ್ ಅವರನ್ನು ಕೈಬಿಟ್ಟು ಆಲ್ರೌಂಡರ್ ದೀಪಕ್ ಹೂಡಾಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿದೆ. 

ನಾಯಜ ಶಿಖರ್ ಧವನ್ ಹಾಗೂ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್‌ ಪಂತ್‌ಗೆ ಅವಕಾಶ ನೀಡಿ ಸಂಜು ಸ್ಯಾಮ್ಸನ್ ಅವರನ್ನು ಹೊರಗಿಟ್ಟಿದ್ದರ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್‌ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದರೂ ಕೂಡಾ ಅವರನ್ನು ತಂಡದಿಂದ ಹೊರಗಿಟ್ಟಿದ್ದೇಕೆ ಎಂದು ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್‌ ಅನ್ನು ಪ್ರಶ್ನಿಸಿದ್ದಾರೆ. ಸಂಜು ಸ್ಯಾಮ್ಸನ್ ಅವರನ್ನು ಕೈಬಿಡುವುದಕ್ಕಿಂತ ಉಪನಾಯಕರಾಗಿರುವ ರಿಷಭ್ ಪಂತ್ ಅವರನ್ನು ತಂಡದಿಂದ ಹೊರಗಿಡುವುದು ಲೇಸು ಎಂದು ಸಲಹೆ ನೀಡಿದ್ದಾರೆ.

Ind vs NZ: ಇಂಡೋ-ಕಿವೀಸ್ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ..! ಓವರ್ ಕಡಿತ?

ಸಂಜು ಸ್ಯಾಮ್ಸನ್‌, ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಟಿ20 ಸರಣಿಗೆ ಆಯ್ಕೆಯಾಗಿದ್ದರೂ ಸಹಾ, ಒಂದೇ ಒಂದು ಪಂದ್ಯ ಆಡಲು ಅವಕಾಶ ಸಿಕ್ಕಿರಲಿಲ್ಲ. ಇನ್ನು ಇದೇ ವೇಳೆ ರಿಷಭ್‌ ಪಂತ್‌ಗೆ ಎಲ್ಲಾ ಪಂದ್ಯಗಳಲ್ಲೂ ಅವಕಾಶ ಸಿಕ್ಕಿದರೂ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸುತ್ತಲೇ ಬಂದಿದ್ದಾರೆ. ಹೀಗಾಗಿ ಪಂತ್‌ಗೆ ಸ್ಥಾನ ನೀಡಿ ಸ್ಯಾಮ್ಸನ್‌ ಅವರನ್ನು ಕೈಬಿಟ್ಟಿದ್ದರ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಪಂದ್ಯಕ್ಕೆ ಮಳೆ ಅಡ್ಡಿ: ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್‌ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ ಪರ ನಾಯಕ ಶಿಖರ್ ಧವನ್ ಹಾಗೂ ಶುಭ್‌ಮನ್ ಗಿಲ್ ತಂಡಕ್ಕೆ ಎಚ್ಚರಿಕೆಯ ಆರಂಭ ಒದಗಿಸುವತ್ತ ದಿಟ್ಟ ಹೆಜ್ಜೆಯಿಟ್ಟರು. ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ಶುಭ್‌ಮನ್‌ ಗಿಲ್‌ 21 ಎಸೆತಗಳಲ್ಲಿ 3 ಬೌಂಡರಿ ಸಹಿತ ಅಜೇಯ 19 ರನ್ ಬಾರಿಸಿದರೆ, ಮತ್ತೊಂದು ತುದಿಯಲ್ಲಿ ನಾಯಕ ಶಿಖರ್ ಧವನ್ 8 ಎಸೆತಗಳನ್ನು ಎದುರಿಸಿ 2 ರನ್ ಗಳಿಸಿ ಕ್ರೀಸ್‌ ಕಾಯ್ದುಕೊಂಡಿದ್ದಾರೆ.

 

Follow Us:
Download App:
  • android
  • ios