* ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ ಜಾವಲಿನ್ ಥ್ರೋ ಪಟು ನೀರಜ್ ಚೋಪ್ರಾ* ನೀರಜ್ ಚೋಪ್ರಾ ಸಾಧನೆಗೆ ಹರಿದು ಬಂತು ಬಹುಮಾನಗಳ ಮಹಾಪೂರ* ನೀರಜ್‌ಗೆ ಒಂದು ಕೋಟಿ ರುಪಾಯಿ ಬಹುಮಾನ ‍ಘೋಷಿಸಿದ ಚೆನ್ನೈ ಸೂಪರ್ ಕಿಂಗ್ಸ್‌ ಫ್ರಾಂಚೈಸಿ

ಟೋಕಿಯೋ(ಆ.09) ಮಳೆ ನಿಂತರೂ ತಕ್ಷಣಕ್ಕೆ ಮಳೆ ಹನಿ ನಿಲ್ಲೋಲ್ಲ ಎನ್ನುವಂತೆ, ಟೋಕಿಯೋ ಒಲಿಂಪಿಕ್ಸ್‌ ಮುಗಿದರೂ ಜಾಗತಿಕ ಕ್ರೀಡಾಹಬ್ಬ ಎನಿಸಿಕೊಂಡಿರುವ ಒಲಿಂಪಿಕ್ಸ್‌ ಕುರಿತಾದ ಮಾತುಕತೆಗಳು ನಿಂತಿಲ್ಲ. ಟೋಕಿಯೋ ಒಲಿಂಪಿಕ್ಸ್‌ನ ಕೊನೆಯ ದಿನ ಜಾವಲಿನ್ ಥ್ರೋನಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಬಹುಮಾನಗಳ ಸುರಿಮಳೆಯೇ ಹರಿದು ಬರಲಾರಂಭಿಸಿದೆ. ಇದೀಗ ಎಂ.ಎಸ್. ಧೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಫ್ರಾಂಚೈಸಿ ಚಿನ್ನದ ಹುಡುಗನಿಗೆ ಒಂದು ಕೋಟಿ ರುಪಾಯಿ ಬಹುಮಾನ ಘೋಷಣೆ ಮಾಡಿದೆ.

ಟೋಕಿಯೋ ಒಲಿಂಪಿಕ್ಸ್‌ನ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ 87.03 ಮೀಟರ್ ದೂರ ಎಸೆದಿದ್ದರು. ಇನ್ನು ಎರಡನೇ ಪ್ರಯತ್ನದಲ್ಲೇ 87.58 ಮೀಟರ್ ದೂರ ಜಾವಲಿನ್ ಥ್ರೋ ಮಾಡುವ ಮೂಲಕ ನೀರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು. ಈ ಮೂಲಕ ಅಥ್ಲೆಟಿಕ್ಸ್‌ ವಿಭಾಗದಲ್ಲಿ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಶತಮಾನದ ಬಳಿಕ ಭಾರತ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. 

ಅಥ್ಲಿಟಿಕ್ಸ್‌ನಲ್ಲಿ ಚಿನ್ನ ಅಸಾಧ್ಯ ಎಂದವರಿಗೆ ಈ ಪದಕ ಉತ್ತರ; ನೀರಜ್ ಚೋಪ್ರಾ Exclusive ಸಂದರ್ಶನ!

ಇದೀಗ ಮೂರು ಬಾರಿಯ ಐಪಿಎಲ್ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್‌ ಫ್ರಾಂಚೈಸಿ ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಒಂದು ಕೋಟಿ ರುಪಾಯಿ ಬಹುಮಾನ ಘೋಷಿಸಿದೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನದ ಮೂಲಕ ಲಕ್ಷಾಂತರ ಭಾರತೀಯರಿಗೆ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ. ನೀರಜ್ ಚೋಪ್ರಾ ಎಸೆದ 87.58 ಮೀಟರ್ ಜಾವಲಿನ್‌ ಥ್ರೋ ಇಡೀ ದೇಶವೇ ಸಂಭ್ರಮದ ಅಲೆಯಲ್ಲಿ ತೇಲುವಂತೆ ಮಾಡಿದೆ ಎಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

Scroll to load tweet…

ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಒಂದು ಚಿನ್ನ, ಎರಡು ಬೆಳ್ಳಿ ಸಹಿತ 7 ಪದಕಗಳನ್ನು ಗೆಲ್ಲುವ ಮೂಲಕ ಗರಿಷ್ಠ ಪದಕ ಗೆದ್ದ ಸಾಧನೆ ಮಾಡಿದೆ.