ಸಿಡ್ನಿ(ನ.30): ಭಾರತ ವಿರುದ್ಧ ಏಕದಿನ ಸರಣಿ ಗೆದ್ದು ಬೀಗುತ್ತಿರುವ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಶಾಕ್ ಎದುರಾಗಿದ್ದು, ಇನ್ನುಳಿತ ಸೀಮಿತ ಓವರ್‌ಗಳ ಪಂದ್ಯಗಳಿಂದ ಸ್ಫೋಟಕ ಅರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಹೊರಬಿದ್ದಿದ್ದಾರೆ. ಇದೀಗ ವಾರ್ನರ್ ಬದಲಿಗೆ ಡಾರ್ಶಿ ಶಾರ್ಟ್ ಆಸ್ಟ್ರೇಲಿಯಾ ತಂಡ ಕೂಡಿಕೊಂಡಿದ್ದಾರೆ.

ಇದರೊಂದಿಗೆ ಡೇವಿಡ್ ವಾರ್ನರ್ ಭಾರತ ವಿರುದ್ಧದ ಕೊನೆಯ ಏಕದಿನ ಹಾಗೂ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಇದೇ ರೀತಿ ತಂಡದ ಸ್ಟಾರ್ ವೇಗಿ ಪ್ಯಾಟ್ ಕಮಿನ್ಸ್‌ಗೂ ಇನ್ನುಳಿದ ಸೀಮಿತ ಓವರ್‌ಗಳ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ. ಮೊದಲ ಪಂದ್ಯದಲ್ಲಿ ವಿಕೆಟ್ ಪಡೆಯಲು ವಿಫಲವಾಗಿದ್ದು ಕಮಿನ್ಸ್‌ ಎರಡನೇ ಪಂದ್ಯದಲ್ಲಿ ಕಮಿನ್ಸ್‌ 67 ರನ್ ನೀಡಿ 3  ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟೆಸ್ಟ್‌ ಸರಣಿಗೆ ಡೇವಿಡ್ ವಾರ್ನರ್, ಪ್ಯಾಟ್ ಕಮಿನ್ಸ್ ಅವರ ಪಾತ್ರ ಮಹತ್ವದ್ದಾಗಿದ್ದು, ಸವಾಲಿನ ಸರಣಿಗೆ ಸಿದ್ದರಿರಲು ವಿಶ್ರಾಂತಿ ಕಮಿನ್ಸ್‌ಗೆ ವಿಶ್ರಾಂತಿ ನೀಡಲಾಗಿದೆ. ಡೇವಿಡ್ ವಾರ್ನರ್ ಗಾಯಗೊಂಡಿದ್ದು, ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ ಎಂದು ಆಸ್ಟ್ರೇಲಿಯಾ ಕೋಚ್ ಜಸ್ಟಿನ್ ಲ್ಯಾಂಗರ್ ಹೇಳಿದ್ದಾರೆ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ ಕಿಂಗ್ ಕೊಹ್ಲಿ..!

ತವರಿನಲ್ಲಿ ನಡೆಯುತ್ತಿರುವ ಅತಿದೊಡ್ಡ ಹಾಗೂ ಮಹತ್ವದ ಸರಣಿಯಾದ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಈ ಇಬ್ಬರು ಆಟಗಾರರು ಸಂಪೂರ್ಣ ಫಿಟ್‌ ಆಗಿರುವುದು ತಂಡದ ಪಾಲಿಗೆ ಮಹತ್ವದ್ದಾಗಿದೆ ಎಂದು ಕೋಚ್ ಲ್ಯಾಂಗರ್ ಹೇಳಿದ್ದಾರೆ.