ಆರಂಭಿಕ ಆಘಾತದ ಹೊರತಾಗಿಯೂ, ಡೇವಿಡ್ ಮಿಲ್ಲರ್ ಮತ್ತು ಡೆವಾಲ್ಡ್ ಬ್ರೆವೀಸ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ ಚೇತರಿಸಿಕೊಂಡಿತು. ಅಂತಿಮವಾಗಿ, ಹರಿಣಗಳ ಪಡೆ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 187 ರನ್‌ಗಳ ಬೃಹತ್ ಮೊತ್ತ ಕಲೆಹಾಕಿ ಭಾರತಕ್ಕೆ ಸವಾಲಿನ ಗುರಿ ನೀಡಿದೆ.

ಆರಂಭಿಕ ಆಘಾತದ ಹೊರತಾಗಿಯೂ ಡೇವಿಡ್ ಮಿಲ್ಲರ್ ಹಾಗೂ ಡೆವಾಲ್ಡ್ ಬ್ರೆವೀಸ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವು ಬೃಹತ್ ಮೊತ್ತ ಕಲೆಹಾಕಿದ್ದು, ಆತಿಥೇಯ ಭಾರತಕ್ಕೆ ಸವಾಲಿನ ಗುರಿ ನೀಡಿದೆ. ಹರಿಣಗಳ ಪಡೆ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 187 ರನ್ ಸಿಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರಂಭದಲ್ಲೇ ಹರಿಣಗಳಿಗೆ ಶಾಕ್

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಬೃಹತ್ ಮೊತ್ತ ಕಲೆಹಾಕುವ ಲೆಕ್ಕಾಚಾರದಲ್ಲಿ ಮೈದಾನಕ್ಕಿಳಿದ ಹರಿಣಗಳ ಪಡೆಗೆ ಮತ್ತೊಮ್ಮೆ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಅರ್ಶದೀಪ್ ಸಿಂಗ್ ಶಾಕ್ ನೀಡಿದರು. ಕ್ವಿಂಟನ್ ಡಿ ಕಾಕ್‌ಗೆ(6) ಬುಮ್ರಾ ಪೆವಿಲಿಯನ್ ಹಾದಿ ತೋರಿಸಿದರೆ, ನಾಯಕ ಏಯ್ಡನ್ ಮಾರ್ಕ್‌ರಮ್‌(4) ಅವರನ್ನು ಅರ್ಶದೀಪ್ ಸಿಂಗ್ ಬಲಿ ಪಡೆದರು. ಇನ್ನು ರಿಯನ್ ರಿಕಲ್ಟನ್ ಕೂಡಾ ಕೇವಲ 7 ರನ್ ಗಳಿಸಿ ಬುಮ್ರಾಗೆ ಎರಡನೇ ಬಲಿಯಾದರು. ದಕ್ಷಿಣ ಆಫ್ರಿಕಾ ತಂಡವು 20 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳು ಪೆವಿಲಿಯನ್ ಹಾದಿ ಹಿಡಿದರು.

ಹರಿಣಗಳಿಗೆ ಆಸರೆಯಾದ ಬ್ರೆವೀಸ್-ಮಿಲ್ಲರ್: 

ಪವರ್‌ಪ್ಲೇ ನೊಳಗೆ ಮೂರು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ನಾಲ್ಕನೇ ವಿಕೆಟ್‌ಗೆ ಡೆವಾಲ್ಡ್ ಬ್ರೆವೀಸ್ ಹಾಗೂ ಡೇವಿಡ್ ಮಿಲ್ಲರ್ ಆಕರ್ಷಕ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಭಾರತದ ಟ್ರಂಪ್‌ಕಾರ್ಡ್ ಎನಿಸಿಕೊಂಡಿರುವ ವರುಣ್ ಚಕ್ರವರ್ತಿ ಎದುರು ಈ ಜೋಡಿ ಮೈ ಚಳಿ ಬಿಟ್ಟು ಬ್ಯಾಟ್ ಬೀಸಿತು. ವರುಣ್ ಚಕ್ರವರ್ತಿ 4 ಓವರ್‌ನಲ್ಲಿ 47 ರನ್ ಚಚ್ಚಿಸಿಕೊಂಡರು. ನಾಲ್ಕನೇ ವಿಕೆಟ್‌ಗೆ ಬ್ರೆವೀಸ್ ಹಾಗೂ ಮಿಲ್ಲರ್ ಜೋಡಿ 50 ಎಸೆತಗಳಲ್ಲಿ 97 ರನ್‌ಗಳ ಜತೆಯಾಟವಾಡಿತು.

ಸ್ಪೋಟಕ ಬ್ಯಾಟಿಂಗ್ ನಡೆಸಿದ ಡೇವಿಡ್ ಮಿಲ್ಲರ್ 35 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಆಕರ್ಷಕ 63 ರನ್ ಸಿಡಿಸಿ ವರುಣ್ ಚಕ್ರವರ್ತಿಗೆ ವಿಕೆಟ್ ಒಪ್ಪಿಸಿದರು. ಇನ್ನು ಡೆವಾಲ್ಡ್ ಬ್ರೆವೀಸ್ 29 ಎಸೆತಗಳನ್ನು ಎದುರಿಸಿ ತಲಾ ಮೂರು ಬೌಂಡರಿ ಹಾಗೂ ಸಿಕ್ಸರ್ ಸಹಿತ 45 ರನ್ ಬಾರಿಸಿ ಶಿವಂ ದುಬೆಗೆ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯಲ್ಲಿ ಟ್ರಿಸ್ಟಿನ್ ಸ್ಟಬ್ಸ್ ಕೇವಲ 24 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ ಅಜೇಯ 44 ರನ್ ಸಿಡಿಸಿ ಅಜೇಯರಾಗುಳಿದರು.