ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮುಂಬರುವ 14ನೇ ಆವೃತ್ತಿಯ ಐಪಿಎಲ್‌ಗೆ ಭರ್ಜರಿ ಸಿದ್ದತೆ ಆರಂಭಿಸಿದ್ದು, ನೂತನ ಜೆರ್ಸಿ ಬಿಡುಗಡೆ ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಮುಂಬೈ(ಮಾ.28): ಸತತ ಎರಡು ಬಾರಿ ಐಪಿಎಲ್‌ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್‌ ತಂಡ 14ನೇ ಆವೃತ್ತಿಗೆ ಸಿದ್ಧತೆ ನಡೆಸಿದ್ದು, ಶನಿವಾರ(ಮಾ.28) ತಂಡದ ಹೊಸ ಜೆರ್ಸಿ ಅನಾವರಣಗೊಳಿಸಿದೆ. 

ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಜೆರ್ಸಿ ಕುರಿತಂತೆ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಈ ಹಿಂದೆ ಇರುವಂತೆ ನೀಲಿ ಬಣ್ಣದಿಂದ ಕೂಡಿದೆಯಾದರೂ ಜೆರ್ಸಿ ಮೇಲಿನ ವಿನ್ಯಾಸದಲ್ಲಿ ಒಂದಿಷ್ಟು ಬದಲಾವಣೆ ಮಾಡಲಾಗಿದೆ ಎಂದು ತಂಡದ ಆಡಳಿತ ಮಂಡಳಿ ಹೇಳಿಕೊಂಡಿದೆ.

Scroll to load tweet…

IPL 2021 ಈ ಸಲ ಸನ್‌ರೈಸರ್ಸ್ ಕಪ್‌ ಗೆಲ್ಲಲು ಒಳ್ಳೆಯ ಅವಕಾಶವಿದೆ: ಬೇರ್‌ಸ್ಟೋವ್

ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಫೈನಲ್‌ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್‌ ತಂಡವು ಬಲಿಷ್ಠ ಡೆಲ್ಲಿ ತಂಡವನ್ನು ಬಗ್ಗುಬಡಿದು 5ನೇ ಬಾರಿಗೆ ಐಪಿಎಲ್‌ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಇದೀಗ ಏಪ್ರಿಲ್‌ 09ರಿಂದ ಆರಂಭವಾಗಲಿರುವ 14ನೇ ಆವೃತ್ತಿಯ ಐಪಿಎಲ್‌ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡವು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್‌ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಸ್ಟೇಡಿಯಂ ಆತಿಥ್ಯವನ್ನು ವಹಿಸಲಿದೆ.