ಜೋಫ್ರಾ ಆರ್ಚರ್ 2023ರ ಮಾರ್ಚ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿದ್ದರು. ಮೊಣಕೈ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆರ್ಚರ್, ಸುಮಾರು ಒಂದು ವರ್ಷದ ಬಳಿಕ ಇದೀಗ ಆಂಗ್ಲರ ಪಡೆ ಕೂಡಿಕೊಂಡಿದ್ದಾರೆ.

ಲಂಡನ್(ಏ.30): ಮುಂಬರುವ 2024ರ ಐಸಿಸ ಟಿ20 ವಿಶ್ವಕಪ್ ಟೂರ್ನಿಗೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ರೆಡಿಯಾಗಿದ್ದು, ಇಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ 15 ಆಟಗಾರರನ್ನೊಳಗೊಂಡ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಪ್ರಕಟಿಸಿದೆ. ಮಾರಕ ವೇಗಿ ಜೋಫ್ರಾ ಆರ್ಚರ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಆರ್‌ಸಿಬಿ ತಂಡದ ಸ್ಪೋಟಕ ಬ್ಯಾಟರ್ ವಿಲ್ ಜ್ಯಾಕ್ಸ್‌ ಹಾಗೂ ಎಡಗೈ ವೇಗಿ ರೀಸ್ ಟಾಪ್ಲೆ ಇಂಗ್ಲೆಂಡ್‌ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಜೋಫ್ರಾ ಆರ್ಚರ್ 2023ರ ಮಾರ್ಚ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿದ್ದರು. ಮೊಣಕೈ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆರ್ಚರ್, ಸುಮಾರು ಒಂದು ವರ್ಷದ ಬಳಿಕ ಇದೀಗ ಆಂಗ್ಲರ ಪಡೆ ಕೂಡಿಕೊಂಡಿದ್ದಾರೆ. ಇನ್ನು ಇಂಟ್ರೆಸ್ಟಿಂಗ್ ಸಂಗತಿಯೆಂದರೆ ಅನುಭವಿ ಬೌಲಿಂಗ್ ಆಲ್ರೌಂಡರ್ ಕ್ರಿಸ್ ಜೋರ್ಡನ್‌ಗೂ ಇಂಗ್ಲೆಂಡ್ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿದೆ. ಡೆತ್ ಓವರ್‌ ಸ್ಪೆಷಲಿಸ್ಟ್ ಬೌಲರ್ ಆಗಿ ಗುರುತಿಸಿಕೊಂಡಿರುವ ಜೋರ್ಡನ್ 2023ರ ಸೆಪ್ಟೆಂಬರ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ತಂಡದಲ್ಲಿ ಕಾಣಿಸಿಕೊಂಡಿದ್ದರು.

Breaking ಟಿ20 ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ರೆಡಿ; 15 ಆಟಗಾರರ ಬಲಿಷ್ಠ ತಂಡ ಪ್ರಕಟ

ಇಂಗ್ಲೆಂಡ್ ತಂಡದಲ್ಲಿ ಬಲಾಢ್ಯ ಟಿ20 ಸ್ಪೆಷಲಿಸ್ಟ್ ಬ್ಯಾಟರ್‌ಗಳ ದಂಡೇ ಇದೆ. ಸ್ವತಃ ಜೋಸ್ ಬಟ್ಲರ್ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದು, ಫಿಲ್ ಸಾಲ್ಟ್, ವಿಲ್ ಜ್ಯಾಕ್ಸ್, ಜಾನಿ ಬೇರ್‌ಸ್ಟೋವ್ ಜತೆಗೆ ಎಡಗೈ ಬ್ಯಾಟರ್ ಬೆನ್ ಡಕೆಟ್ ಸ್ಥಾನ ಪಡೆದಿದ್ದಾರೆ. ಇನ್ನು ಆಲ್ರೌಂಡರ್ ಮೋಯಿನ್ ಅಲಿಗೆ ಉಪನಾಯಕ ಪಟ್ಟ ಕಟ್ಟಲಾಗಿದೆ.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ಸ್ಯಾಮ್ ಕರ್ರನ್ ಸ್ಥಾನ ಪಡೆದಿದ್ದಾರೆ. ಇನ್ನು ಬೌಲಿಂಗ್‌ ವಿಭಾಗದಲ್ಲಿ ಟಾಮ್ ಹಾರ್ಟ್ಲಿ, ಆದಿಲ್ ರಶೀದ್ ಜತೆಗೆ ಮಾರ್ಕ್‌ ವುಡ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. 

T20 World Cup: ಚುಟುಕು ವಿಶ್ವಕಪ್ ಗೆಲ್ಲಲು ಬಲಿಷ್ಠ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಪ್ರಕಟ..! ಐಪಿಎಲ್ ಹೀರೋಗಳಿಗೆ ಅವಕಾಶ

ಟಿ20 ವಿಶ್ವಕಪ್ ಟೂರ್ನಿಗೆ ಇಂಗ್ಲೆಂಡ್ ತಂಡ ಹೀಗಿದೆ ನೋಡಿ:

ಜೋಸ್ ಬಟ್ಲರ್(ನಾಯಕ), ಮೋಯಿನ್ ಅಲಿ(ಉಪನಾಯಕ), ಜೋಫ್ರಾ ಆರ್ಚರ್, ಜಾನಿ ಬೇರ್‌ಸ್ಟೊವ್, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜ್ಯಾಕ್ಸ್, ಕ್ರಿಸ್ ಜೋರ್ಡನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟಾಪ್ಲೆ, ಮಾರ್ಕ್ ವುಡ್.