IPL Mega Auction: ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ 5 ರೀಟೈನ್ ಆಟಗಾರರ ಪಟ್ಟಿ ಪ್ರಕಟ! ಯಾರಿಗೆಲ್ಲಾ ಸಿಕ್ಕಿದೆ ಸ್ಥಾನ?
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬರುವ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಐವರು ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ನವದೆಹಲಿ: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೂ ಮುನ್ನ ನಡೆಯಲಿರುವ ಐಪಿಎಲ್ ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದೆ. ಇದರ ಬೆನ್ನಲ್ಲೇ ಎಲ್ಲಾ ಐಪಿಎಲ್ ಫ್ರಾಂಚೈಸಿಗಳು ಸಾಕಷ್ಟು ಅಳೆದು ತೂಗಿ ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ತಂತ್ರಗಾರಿಕೆ ರೂಪಿಸುತ್ತಿವೆ. ಎಷ್ಟು ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ನೀಡಲಿದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲವಾದರೂ, ಐಪಿಎಲ್ ಫ್ರಾಂಚೈಸಿಗಳು ಇದೀಗ ಸಂಭಾವ್ಯ ಐವರು ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಮುಂದಾಗಿವೆ.
ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ತನ್ನ ಮೊದಲ ಆಯ್ಕೆಯ ರೀಟೈನ್ ರೂಪದಲ್ಲಿ ರಿಷಭ್ ಪಂತ್ ಅವರನ್ನು ಉಳಿಸಿಕೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ. ಈ ಮೊದಲು ರಿಷಭ್ ಪಂತ್, ಚೆನ್ನೈ ಸೂಪರ್ ಕಿಂಗ್ಸ್ ಇಲ್ಲವೇ ಪಂಜಾವ್ ಕಿಂಗ್ಸ್ ತಂಡದ ಪಾಲಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು.
ಎಡ ಭಾಗದಿಂದಲೇ ಆಕಾಶ ನೋಡಿ ಮೈದಾನಕ್ಕಿಳಿಯೋದ್ಯಾಕೆ? ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಕೊಟ್ಟ ಧೋನಿ!
ಮೂರು ಮಾದರಿಯಲ್ಲೂ ಟೀಂ ಇಂಡಿಯಾವನ್ನು ಪ್ರತಿನಿಧಿಸುವ ರಿಷಭ್ ಪಂತ್, ರಿಕಿ ಪಾಂಟಿಂಗ್ ಡೆಲ್ಲಿ ತೊರೆದು ಪಂಜಾಬ್ ಕಿಂಗ್ಸ್ ತಂಡದ ಹೆಡ್ ಕೋಚ್ ಆಗುತ್ತಿದ್ದಂತೆಯೇ ಪಂತ್ ಕೂಡಾ ಪಂಜಾಬ್ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿತ್ತು. ಇದೀಗ Cricbuzz ವರದಿಯ ಪ್ರಕಾರ ರಿಷಭ್ ಪಂತ್, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೊದಲ ಆಯ್ಕೆಯ ರೀಟೈನ್ ಆಟಗಾರನಾಗಿ ಉಳಿಯಲಿದ್ದಾರೆ ಎನ್ನಲಾಗುತ್ತಿದೆ. ಹೀಗಾದಲ್ಲಿ ಈ ಹಿಂದಿನ ನಿಯಮಾವಳಿಯಂತೆ ಪಂತ್‌ಗೆ ಕನಿಷ್ಟ 16 ಕೋಟಿ ರುಪಾಯಿಯನ್ನು ಡೆಲ್ಲಿ ಫ್ರಾಂಚೈಸಿ ಮೀಸಲಿಡಬೇಕಾಗುತ್ತದೆ.
ಇನ್ನುಳಿದಂತೆ ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ ಮೊದಲ ಆಯ್ಕೆಯ ರೀಟೈನ್ ಆಟಗಾರನಾದರೇ, ಆಲ್ರೌಂಡರ್ ಅಕ್ಷರ್ ಪಟೇಲ್ ಎರಡನೇ ಆಯ್ಕೆಯ ರೀಟೈನ್ ಆಟಗಾರನಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇನ್ನು ಮಣಿಕಟ್ಟ ಸ್ಪಿನ್ನರ್ ಕುಲ್ದೀಪ್ ಯಾದವ್ ಮೂರನೇ ಆಯ್ಕೆಯ ರೀಟೈನ್ ಆಟಗಾರನಾಗಲಿದ್ದಾರೆ. ಇನ್ನು ವಿದೇಶಿ ಆಟಗಾರರಾದ ಆಸ್ಟ್ರೇಲಿಯಾ ಮೂಲದ ಸ್ಪೋಟಕ ಆರಂಭಿಕ ಬ್ಯಾಟರ್ ಫ್ರೇಸರ್ ಮೆಕ್‌ಗುರ್ಕ್ ಹಾಗೂ ದಕ್ಷಿಣ ಆಫ್ರಿಕಾದ ಟ್ರಿಸ್ಟಿನ್ ಸ್ಟಬ್ಸ್ ಅವರನ್ನು ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ.