Delhi Test: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲುಗಲ್ಲು ನೆಟ್ಟ ವಿರಾಟ್ ಕೊಹ್ಲಿ..!

ಡೆಲ್ಲಿ ಟೆಸ್ಟ್‌ ಪಂದ್ಯದಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ
ಅತಿವೇಗವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25000 ರನ್ ಪೂರೈಸಿದ ಕೊಹ್ಲಿ
ಡೆಲ್ಲಿ ಟೆಸ್ಟ್‌ ಪಂದ್ಯವನ್ನು ಗೆದ್ದು ಬೀಗಿದ ಟೀಂ ಇಂಡಿಯಾ

Delhi Test Virat Kohli becomes fastest batter to 25000 international runs kvn

ದೆಹಲಿ(ಫೆ.19): ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ಎದುರಿನ ಎರಡನೇ ಟೆಸ್ಟ್‌ ಪಂದ್ಯದ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 25,000 ರನ್‌ ಬಾರಿಸಿದ ಬ್ಯಾಟರ್‌ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಎರಡನೇ ಟೆಸ್ಟ್‌ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 12 ರನ್ ಬಾರಿಸುತ್ತಿದ್ದಂತೆಯೇ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಕ್ರಿಕೆಟ್‌ ದಂತಕಥೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ದಾಖಲೆ ಅಳಿಸಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಸಚಿನ್ ತೆಂಡುಲ್ಕರ್ ಒಟ್ಟು 577 ಇನಿಂಗ್ಸ್‌ಗಳನ್ನಾಡಿ 25,000 ರನ್ ಪೂರೈಸಿದ್ದರು. ಆದರೆ ಇದೀಗ ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಕೇವಲ 549 ಇನಿಂಗ್ಸ್‌ಗಳನ್ನಾಡಿ 25 ಸಾವಿರ ರನ್ ಗಡಿ ದಾಟುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದಂತೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್(588), ಜಾಕ್ ಕಾಲಿಸ್(594), ಕುಮಾರ ಸಂಗಕ್ಕರ(608) ಹಾಗೂ ಮಹೇಲಾ ಜಯವರ್ಧನೆ(701) ಇನಿಂಗ್ಸ್‌ಗಳನ್ನಾಡಿ 25,000 ರನ್ ಪೂರೈಸಿದ್ದಾರೆ. 

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25,000 ರನ್‌ ಬಾರಿಸಿದ ಜಗತ್ತಿನ ಆರನೇ ಹಾಗೂ ಸಚಿನ್ ತೆಂಡುಲ್ಕರ್ ಬಳಿಕ ಭಾರತದ ಎರಡನೇ ಬ್ಯಾಟರ್‌ ಎನ್ನುವ ಕೀರ್ತಿಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 11,000 ರನ್ ಪೂರೈಸಿದ ದಾಖಲೆ ಹೊಂದಿದ್ದಾರೆ. ಇನ್ನು 105 ಟೆಸ್ಟ್‌ ಪಂದ್ಯಗಳನ್ನಾಡಿ 27 ಶತಕ ಸಹಿತ 8131 ರನ್‌ ಬಾರಿಸಿದ್ದಾರೆ. ಇನ್ನು 115 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿ 4008 ರನ್ ಬಾರಿಸಿದ್ದಾರೆ. 

Delhi Test: ಜಡ್ಡು ದಾಳಿಗೆ ಆಸೀಸ್ ಕಂಗಾಲು, ಎರಡನೇ ಟೆಸ್ಟ್‌ ಟೀಂ ಇಂಡಿಯಾ ಪಾಲು..!

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿದ ದಾಖಲೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದೆ. ಸಚಿನ್ ತೆಂಡುಲ್ಕರ್ 664 ಪಂದ್ಯಗಳನ್ನಾಡಿ 34,357 ರನ್‌ ಬಾರಿಸಿದ್ದಾರೆ. ಇದಾದ ಬಳಿಕ ಕುಮಾರ ಸಂಗಕ್ಕರ(28,016), ರಿಕಿ ಪಾಂಟಿಂಗ್(27,483), ಮಹೇಲಾ ಜಯವರ್ಧನೆ(25,957) ಹಾಗೂ ಜಾಕ್ ಕಾಲಿಸ್(25,534) ರನ್‌ ಬಾರಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ಮಾತ್ರವಲ್ಲದೇ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲೂ ವಿರಾಟ್ ಕೊಹ್ಲಿ ಅದ್ಬುತ ಪ್ರದರ್ಶನ ತೋರಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ನ್ಯೂಜಿಲೆಂಡ್ ಎದುರಿನ ಸರಣಿಯಲ್ಲೂ ವಿರಾಟ್ ಕೊಹ್ಲಿ ರನ್‌ ಮಳೆ ಹರಿಸಿದ್ದಾರೆ.

ಡೆಲ್ಲಿ ಟೆಸ್ಟ್ ಪಂದ್ಯ ಗೆದ್ದು ಬೀಗಿದ ಟೀಂ ಇಂಡಿಯಾ: ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಮಿಂಚಿನ ಬೌಲಿಂಗ್ ಹಾಗೂ ಬ್ಯಾಟರ್‌ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ, ಡೆಲ್ಲಿ ಟೆಸ್ಟ್‌ ಪಂದ್ಯದಲ್ಲಿ 6 ವಿಕೆಟ್ ರೋಚಕ ಜಯ ಸಾಧಿಸಿದೆ. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿದೆ.

Latest Videos
Follow Us:
Download App:
  • android
  • ios