ಬರೋಬ್ಬರಿ 259 ರನ್‌ಗಳ ಇನಿಂಗ್ಸ್ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ರವಿಚಂದ್ರನ್ ಅಶ್ವಿನ್ ಮಾರಕ ದಾಳಿಗೆ ತತ್ತರಿಸಿ ಹೋಯಿತು. ಇಂಗ್ಲೆಂಡ್ ಪರ ಜೋ ರೂಟ್ 84 ರನ್ ಬಾರಿಸಿದರಾದರೂ ತಂಡವನ್ನು ಇನಿಂಗ್ಸ್‌ ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.

ಧರ್ಮಶಾಲಾ(ಮಾ.09): ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಯನ್ನು 4-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಧರ್ಮಶಾಲಾದಲ್ಲಿ ನಡೆದ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನಿಂಗ್ಸ್‌ ಹಾಗೂ 64 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಇಂಗ್ಲೆಂಡ್‌ ಎದುರು ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಟೀಂ ಇಂಡಿಯಾ, ಇದಾದ ಬಳಿಕ ಸತತ 4 ಪಂದ್ಯಗಳನ್ನು ಜಯಿಸುವಲ್ಲಿ ಯಶಸ್ವಿಯಾಗಿದೆ.

ಬರೋಬ್ಬರಿ 259 ರನ್‌ಗಳ ಇನಿಂಗ್ಸ್ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ರವಿಚಂದ್ರನ್ ಅಶ್ವಿನ್ ಮಾರಕ ದಾಳಿಗೆ ತತ್ತರಿಸಿ ಹೋಯಿತು. ಇಂಗ್ಲೆಂಡ್ ಪರ ಜೋ ರೂಟ್ 84 ರನ್ ಬಾರಿಸಿದರಾದರೂ ತಂಡವನ್ನು ಇನಿಂಗ್ಸ್‌ ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಭಾರೀ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಕೇವಲ 195 ರನ್‌ಗಳಿಗೆ ಸರ್ವಪತನ ಕಂಡಿತು.

Scroll to load tweet…

ಟೀಂ ಇಂಡಿಯಾವನ್ನು 477 ರನ್‌ಗಳಿಗೆ ಆಲೌಟ್ ಮಾಡಿ ಎರಡನೇ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಾವೆಸೆದ ಮೊದಲ ಓವರ್‌ನಲ್ಲೇ ಬೆನ್ ಡಕೆಟ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಇಂಗ್ಲೆಂಡ್‌ಗೆ ಆರಂಭಿಕ ಶಾಕ್ ನೀಡಿದರು. ಇದಾದ ಕೆಲ ಹೊತ್ತಿನಲ್ಲೇ ಮತ್ತೋರ್ವ ಆರಂಭಿಕ ಬ್ಯಾಟರ್ ಜಾಕ್ ಕ್ರಾಲಿ ಖಾತೆ ತೆರೆಯುವ ಮುನ್ನವೇ ಅಶ್ವಿನ್‌ಗೆ ಎರಡನೇ ಬಲಿಯಾದರು. 

Scroll to load tweet…

100ನೇ ಟೆಸ್ಟ್‌ನಲ್ಲಿ 5 ವಿಕೆಟ್‌ ಕಬಳಿಸಿ ಎಲೈಟ್ ಗ್ರೂಪ್ ಸೇರಿದ ರವಿಚಂದ್ರನ್ ಅಶ್ವಿನ್..!

ಇಂಗ್ಲೆಂಡ್ ತಂಡವು 21 ರನ್ ಗಳಿಸುವಷ್ಟರಲ್ಲಿ ಆರಂಭಿಕರಿಬ್ಬರು ಪೆವಿಲಿಯನ್ ಸೇರಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಓಲಿ ಪೋಪ್ 3 ಬೌಂಡರಿ ಸಹಿತ 23 ರನ್ ಬಾರಿಸಿದರಾದರೂ ಅಶ್ವಿನ್ ಬೌಲಿಂಗ್‌ನಲ್ಲಿ ಯಶಸ್ವಿ ಜೈಸ್ವಾಲ್ ಹಿಡಿದ ಅದ್ಭುತ ಕ್ಯಾಚ್‌ಗೆ ಪೆವಿಲಿಯನ್ ಸೇರಿದರು. ಈ ವೇಳೆಗೆ ಇಂಗ್ಲೆಂಡ್ ಸ್ಕೋರ್ 36ಕ್ಕೆ 3. ಇನ್ನು ಮೂರನೇ ದಿನದಾಟದ ಊಟದ ವಿರಾಮಕ್ಕೂ ಮುನ್ನ ನಾಯಕ ಬೆನ್ ಸ್ಟೋಕ್ಸ್‌ ಕೇವಲ 2 ರನ್‌ ಗಳಿಸಿ ಅಶ್ವಿನ್ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಊಟದ ವಿರಾಮದ ಬಳಿಕ ಕ್ರೀಸ್‌ಗಿಳಿದ ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟರ್ ಬೆನ್ ಫೋಕ್ಸ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ 5ನೇ ವಿಕೆಟ್ ಅನ್ನು ತಮ್ಮ ಖಾತೆಗೆ ಸೇರಿಸಿಕೊಂಡರು.

ಇನ್ನುಳಿದಂತೆ ಜಸ್ಪ್ರೀತ್ ಬುಮ್ರಾ ಹಾಗೂ ಕುಲ್ದೀಪ್ ಯಾದವ್ ತಲಾ ಎರಡು ವಿಕೆಟ್ ಕಬಳಿಸಿದರೆ, ರವೀಂದ್ರ ಜಡೇಜಾ ಒಂದು ವಿಕೆಟ್ ತಮ್ಮ ಖಾತೆಗೆ ಹಾಕಿಕೊಂಡರು.