Dharamsala Test: ಭರ್ಜರಿ ಶತಕ ಚಚ್ಚಿದ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್..! ಭಾರತದ ಹಿಡಿತದಲ್ಲಿ ಇಂಗ್ಲೆಂಡ್

ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ತಂಡವನ್ನು 218 ರನ್‌ಗಳಿಗೆ ಕಟ್ಟಿಹಾಕಿ ಮೊದಲ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ, ಮೊದಲ ದಿನದಾಟದಂತ್ಯದ ವೇಳೆಗೆ ಕೇವಲ ಒಂದು ವಿಕೆಟ್ ಕಳೆದುಕೊಂಡು 135 ರನ್ ಗಳಿಸಿತ್ತು.

Dharamsala Test Rohit Sharma Shubman Gill Slams Centuries kvn

ಧರ್ಮಶಾಲಾ(ಮಾ.08): ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆಂಗ್ಲರ ಮೇಲೆ ಭಾರತ ಹಿಡಿತ ಸಾಧಿಸಿದೆ. ಇದೀಗ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಆಕರ್ಷಕ ಶತಕ ಸಿಡಿಸುವ ಮೂಲಕ ಮಿಂಚಿದ್ದಾರೆ. ಈ ಇಬ್ಬರು ಬ್ಯಾಟರ್‌ಗಳ ಶತಕದ ನೆರವಿನಿಂದ ಟೀಂ ಇಂಡಿಯಾ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ

ಹೌದು, ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ತಂಡವನ್ನು 218 ರನ್‌ಗಳಿಗೆ ಕಟ್ಟಿಹಾಕಿ ಮೊದಲ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ, ಮೊದಲ ದಿನದಾಟದಂತ್ಯದ ವೇಳೆಗೆ ಕೇವಲ ಒಂದು ವಿಕೆಟ್ ಕಳೆದುಕೊಂಡು 135 ರನ್ ಗಳಿಸಿತ್ತು. ಇನ್ನು ಎರಡನೇ ದಿನದಾಟವನ್ನು ಈ ಜೋಡಿ ಭರ್ಜರಿಯಾಗಿಯೇ ಆರಂಭಿಸಿತು. ಎರಡನೇ ವಿಕೆಟ್‌ಗೆ ಈ ಜೋಡಿ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಕ್ರಿಕೆಟ್ ಇತಿಹಾಸದಲ್ಲಿ ಈ ವರೆಗೆ ಯಾರೂ ಮಾಡಿರದ ಅಪರೂಪದ ರೆಕಾರ್ಡ್‌ಗೆ ನಿರ್ಮಿಸಿದ ರೋಹಿತ್ ಶರ್ಮಾ..!

154 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಆಕರ್ಷಕ ಶತಕ ಸಿಡಿಸಿ ಸಂಭ್ರಮಿಸಿದರು. ಇದು ರೋಹಿತ್ ಶರ್ಮಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ಬಾರಿಸಿದ 12ನೇ ಶತಕ ಎನಿಸಿಕೊಂಡಿತು. ಇನ್ನು ರೋಹಿತ್ ಶರ್ಮಾಗೆ ಉತ್ತಮ ನಾಥ್ ನೀಡಿದ ಶುಭ್‌ಮನ್ ಗಿಲ್ ಕೂಡಾ ಆಕರ್ಷಕ ಶತಕ ಸಿಡಿಸಿದರು. ಶುಭ್‌ಮನ್ ಗಿಲ್‌ 138 ಎಸೆತಗಳನ್ನು ಎದುರಿಸಿ ಟೆಸ್ಟ್ ವೃತ್ತಿಜೀವನದ 4ನೇ ಶತಕ ಸಿಡಿಸಿ ಮಿಂಚಿದರು.

ಬೃಹತ್ ಮೊತ್ತದತ್ತ ದಾಪುಗಾಲು: 135 ರನ್‌ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಭಾರತಕ್ಕೆ ಗಿಲ್ ಹಾಗೂ ರೋಹಿತ್ ಉತ್ತಮ ಆರಂಭ ಒದಗಿಸಿಕೊಟ್ಟಿದ್ದಾರೆ. ಎರಡನೇ ವಿಕೆಟ್‌ಗೆ ಈ ಜೋಡಿ 236 ಎಸೆತಗಳನ್ನು ಎದುರಿಸಿ ಮುರಿಯದ 160 ರನ್‌ಗಳ ಜತೆಯಾಟ ನಿಭಾಯಿಸಿದೆ. ಎರಡನೇ ದಿನದಾಟದ ಲಂಚ್ ಬ್ರೇಕ್ ವೇಳೆಗೆ ಟೀಂ ಇಂಡಿಯಾ ಕೇವಲ ಒಂದು ವಿಕೆಟ್ ಕಳೆದುಕೊಂಡು 264 ರನ್ ಬಾರಿಸಿದ್ದು, 46 ರನ್‌ಗಳ ಅಮೂಲ್ಯ ಮುನ್ನಡೆ ಪಡೆದಿದೆ. ನಾಯಕ ರೋಹಿತ್ ಶರ್ಮಾ 160 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 102 ರನ್ ಬಾರಿಸಿದರೆ, ಮತ್ತೊಂದು ತುದಿಯಲ್ಲಿ ಶುಭ್‌ಮನ್ ಗಿಲ್ 142 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 101 ರನ್ ಬಾರಿಸಿದ್ದಾರೆ.

Latest Videos
Follow Us:
Download App:
  • android
  • ios